ಬುಧವಾರ, ಜನವರಿ 29, 2025
ಜ.30 ರಂದು ‘ಕ್ಷಯರೋಗ ಜಾಗೃತಿ ಜಾಥಾ’
ಬಳ್ಳಾರಿ,ಜ.29(ಕರ್ನಾಟಕ ವಾರ್ತೆ):
ಜಿಲ್ಲಾ ಆಯುಷ್ ಇಲಾಖೆ, ಜಿಲ್ಲಾ ಆರೋಗ್ಯ ಮತ್ತು ಕುಂಟುಬ ಕಲ್ಯಾಣ ಇಲಾಖೆ, ರಾಷ್ಟಿçÃಯ ಕ್ಷಯರೋಗ ನಿರ್ಮೂಲನಾ ಘಟಕ ಇವರ ಸಹಯೋಗದಲ್ಲಿ ಜ.30 ರಂದು ಬೆಳಿಗ್ಗೆ 9.30 ಗಂಟೆಗೆ ‘ಕ್ಷಯರೋಗ ಜಾಗೃತಿ ಜಾಥಾ’ವನ್ನು ನಗರದ ನೂತನ ಜಿಲ್ಲಾಡಳಿತ ಭವನದ ಆವರಣದಿಂದ ಆಯೋಜಿಸಲಾಗಿದೆ.
ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಜಾಥಾಗೆ ಚಾಲನೆ ನೀಡುವರು.
ಜಾಥಾವು ನೂತನ ಜಿಲ್ಲಾಡಳಿತ ಭವನದ ಆವರಣದಿಂದ ಆರಂಭವಾಗಿ ತಾರಾನಾಥ ಸರ್ಕಾರಿ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯದವರೆಗೆ ನಡೆಯಲಿದೆ ಎಂದು ತಾರಾನಾಥ ಸರ್ಕಾರಿ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-----------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ