ಮಂಗಳವಾರ, ಜನವರಿ 28, 2025

ಜ.31 ರಂದು ಶ್ರೀ ಕೋಟೆ ಮಲ್ಲೇಶ್ವರ ಸ್ವಾಮಿ ಜಾತ್ರೆಯ ಕುರಿತು ಪೂರ್ವಭಾವಿ ಸಭೆ

ಬಳ್ಳಾರಿ,ಜ.28(ಕರ್ನಾಟಕ ವಾರ್ತೆ): ನಗರದ ಶ್ರೀ ಕೋಟೆ ಮಲ್ಲೇಶ್ವರ ಸ್ವಾಮಿಯ ಬ್ರಹ್ಮರಥೋತ್ಸವವು ಮತ್ತು ಶಿವರಾತ್ರಿ ಉತ್ಸವವು ಫೆ.06 ರಿಂದ 26 ರ ವರೆಗೆ ಜರುಗಲಿದ್ದು, ಇದರ ಅಂಗವಾಗಿ ಜ.31 ರಂದು ಬೆಳಿಗ್ಗೆ 11 ಗಂಟೆಗೆ ಶ್ರೀ ಕೋಟೆ ಮಲ್ಲೇಶ್ವರ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆಯ ಸಹಾಯಕ ಆಯುಕ್ತರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಿದ್ಧತೆ ಸಭೆ ಏರ್ಪಡಿಸಲಾಗಿದೆ ಎಂದು ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿಗಳು ತಿಳಿಸಿದ್ದಾರೆ. ------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ