ಗುರುವಾರ, ಜನವರಿ 2, 2025
ಅನಾಮದೇಯ ಮೃತ ದೇಹ ಪತ್ತೆ: ವಾರಸುದಾರರ ಪತ್ತೆಗೆ ಮನವಿ
ಬಳ್ಳಾರಿ,ಜ.02(ಕರ್ನಾಟಕ ವಾರ್ತೆ):
ನಗರದ ಸೆಂಟ್ ಮೇರಿ ಅಸ್ಪತ್ರೆಯ ಗೇಟ್ ಪಕ್ಕದಲ್ಲಿರುವ ಆರೋಗ್ಯ ಮಾತ ಪ್ರತಿಮೆ ಮುಂದೆ ಅಂದಾಜು 35- 40 ವರ್ಷದ ಅಪರಿಚಿತ ವ್ಯಕ್ತಿಯ ಮೃತದೇಹ ಜ.01 ರಂದು ಪತ್ತೆಯಾಗಿದ್ದು, ಈ ಕುರಿತು ಕೌಲ್‌ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತನ ವಾರಸುದಾರರ ಪತ್ತೆಗೆ ಸಹಕರಿಸಬೇಕೆಂದು ಪೊಲೀಸ್ ಸಬ್ ಇನ್ಸ್ಪೆಕ್ಟರ್ ಮನವಿ ಮಾಡಿದ್ದಾರೆ.
*ಮೃತನ ಚಹರೆ:*
ಎತ್ತರ 5.7 ಇಂಚು, ಕೋಲು ಮುಖ, ಸಾಧಾರಣ ಮೈಕಟ್ಟು, ಎಣ್ಣೆಗೆಂಪು ಮೈಬಣ್ಣ ಹೊಂದಿದ್ದು, ಮೃತನ ದೇಹದ ಮೈಮೇಲೆ ಒಂದು ಹಳದಿ ಬಣ್ಣದ ತುಂಬು ತೋಳಿನ ಅಂಗಿ, ಕಂದು ಬಣ್ಣದ ಪ್ಯಾಂಟ್ ಇರುತ್ತದೆ.
ಮೇಲ್ಕಂಡ ಚಹರೆ ಗುರುತುಗಳುಳ್ಳ ಮೃತನ ವಾರಸುದಾರರ ಬಗ್ಗೆ ಮಾಹಿತಿ ಸಿಕ್ಕಲ್ಲಿ ಬಳ್ಳಾರಿ ಕಂಟ್ರೋಲ್ ರೂಂ ದೂ.08392-258100, ಕೌಲ್‌ಬಜಾರ್ ಪೊಲೀಸ್ ಠಾಣೆಯ ದೂ.08392-240731, ಪಿ.ಐ ಮೊ.9480803047, ಪಿಎಸ್‌ಐ ಮೊ.9480803084 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
---------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ