ಸೋಮವಾರ, ಜನವರಿ 20, 2025
ಅನಾಮಧೇಯ ಮೃತ ವಾರಸುದಾರರ ಪತ್ತೆಗೆ ಮನವಿ
ಬಳ್ಳಾರಿ,ಜ.20(ಕರ್ನಾಟಕ ವಾರ್ತೆ)
ನಗರದ ಬಿಮ್ಸ್ ಅಸ್ಪತ್ರೆ ಆವರಣದಲ್ಲಿರುವ ಪೋಲೀಸ್ ಔಟ್‌ಪೋಸ್ಟ್ ಮುಂಭಾಗ ಜ.16ರಂದು ಅಂದಾಜು 50 ವರ್ಷದ ಅಪರಿಚಿತ ವ್ಯಕ್ತಿಯು ಅಸ್ವಸ್ಥನಾಗಿ ಕಂಡುಬAದಿದ್ದು, ಬಳಿಕ ಆಸ್ಪತ್ರೆಗೆ ದಾಖಲಿಸಿ ವೈದ್ಯರು ಪರೀಕ್ಷಿಸಿದಾಗ ಮೃತಪಟ್ಟಿರುತ್ತಾನೆ ಎಂದು ತಿಳಿಸಿದ್ದು, ಈ ಕುರಿತು ಕೌಲ್‌ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತನ ವಾರಸುದಾರರ ಪತ್ತೆಗೆ ಸಹಕರಿಸಬೇಕೆಂದು ಪೊಲೀಸ್ ಸಬ್ ಇನ್ಸ್ಪೆಕ್ಟರ್ ಮನವಿ ಮಾಡಿದ್ದಾರೆ.
*ಮೃತನ ಚಹರೆ:*
ಎತ್ತರ 5.4 ಇಂಚು, ಕೋಲು ಮುಖ, ಗೋಧಿ ಮೈಬಣ್ಣ ಹೊಂದಿದ್ದು, ತಲೆ ಮೇಲೆ ಕಪ್ಪು ಬಿಳಿ ಕೂದಲು, ಕಪ್ಪು ಬಿಳಿ ಗಡ್ಡ, ಮೃತನ ದೇಹದ ಮೈಮೇಲೆ ಬಿಳಿ ಬಣ್ಣದ ತುಂಬು ತೋಳಿನ ಅಂಗಿ, ಕಂದು ಬಣ್ಣದ ಜೀನ್ಸ್ ಪ್ಯಾಂಟ್ ಧರಿಸಿರುತ್ತಾನೆ.
ಮೇಲ್ಕಂಡ ಚಹರೆ ಗುರುತುಗಳುಳ್ಳ ಮೃತನ ವಾರಸುದಾರರ ಬಗ್ಗೆ ಮಾಹಿತಿ ಸಿಕ್ಕಲ್ಲಿ ಬಳ್ಳಾರಿ ಕಂಟ್ರೋಲ್ ರೂಂ ದೂ.08392-258100, ಕೌಲ್‌ಬಜಾರ್ ಪೊಲೀಸ್ ಠಾಣೆಯ ದೂ.08392-240731, ಪಿ.ಐ ಮೊ.9480803047, ಪಿಎಸ್‌ಐ ಮೊ.9480803084 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ