ಗುರುವಾರ, ಜನವರಿ 23, 2025
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ; ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
ಬಳ್ಳಾರಿ,ಜ.23(ಕರ್ನಾಟಕ ವಾರ್ತೆ):
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಸ್ನಾತ್ತಕೋತ್ತರ ಪದವಿ ಹಾಗೂ ಪಿ.ಹೆಚ್ಡಿ ಪದವಿ ವ್ಯಾಸಾಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಹಾಗೂ 3ಬಿ ವರ್ಗಗಳ ಅರ್ಹ ವಿದ್ಯಾರ್ಥಿಗಳಿಂದ ಡಿ.ದೇವರಾಜ ಅರಸು ವಿದೇಶಿ ವ್ಯಾಸಂಗ ವೇತನ ಪಡೆಯಲು ಈಗಾಗಲೇ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಸಲ್ಲಿಕೆ ಅವಧಿಯನ್ನು ಫೆ.05 ರವರೆಗೆ ವಿಸ್ತರಿಸಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಭಾನುಮತಿ ಅವರು ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಇಲಾಖಾ ವೆಬ್‌ಸೈಟ್ https://bcwd.karnataka.gov.in/ ಅಥವಾ ಸಹಾಯವಾಣಿ 8050770004 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
----------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ