ಶನಿವಾರ, ಜನವರಿ 25, 2025

ಕುರೇಕುಪ್ಪ: ವಿವಿಧ ಸೌಲಭ್ಯಗಳಿಗಾಗಿ ಅರ್ಜಿ ಆಹ್ವಾನ

ಬಳ್ಳಾರಿ,ಜ.25(ಕರ್ನಾಟಕ ವಾರ್ತೆ): ಕುರೇಕುಪ್ಪ ಪುರಸಭೆ ವತಿಯಿಂದ 2019-2020 ನೇ ಸಾಲಿನಿಂದ 2022-23ನೇ ಸಾಲಿನವರೆಗೆ ಎಸ್‌ಎಫ್‌ಸಿ ಮುಕ್ತನಿಧಿ ಯೋಜನೆಯ ಉಳಿತಾಯ ಮೊತ್ತದಡಿ ಶೇ.24.10, ಶೇ.5 ರ ವೈಯಕ್ತಿಕ ಸೌಲಭ್ಯಕ್ಕಾಗಿ ಕಾಯ್ದಿರಿಸಿದ ಅನುದಾನದಡಿ ವಿವಿಧ ಸೌಲಭ್ಯಗಳಿಗಾಗಿ ಕುರೇಕುಪ್ಪ ಪುರಸಭೆ ವ್ಯಾಪ್ತಿಯಲ್ಲಿ ಬರುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ವಿಶೇಷ ಚೇತನರಿಂದ ಅರ್ಜಿ ಆಹ್ವಾನಿಸಲಾಗಿದೆ. *ಸೌಲಭ್ಯಗಳ ವಿವರ:* ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಫಲಾನುಭವಿಗಳಿಗೆ ಅಡುಗೆ ಅನಿಲ ಸಂಪರ್ಕ ಕಲ್ಪಿಸಲಾಗುವುದು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅರ್ಹ ಮಹಿಳಾ ಮತ್ತು ಪುರುಷ ಫಲಾನುಭವಿಗಳಿಗೆ ಲಘು ವಾಹನ ಹಾಗೂ ಭಾರಿ ವಾಹನ ತರಬೇತಿ ಮತ್ತು ಪರವಾನಿಗೆ ನೀಡಲಾಗುವುದು. ಕುರೇಕುಪ್ಪ ಪುರಸಭೆ ವ್ಯಾಪ್ತಿಯಲ್ಲಿ ಬರುವ ಪರಿಶಿಷ್ಟ ಪಂಗಡ ಹಾಗೂ ವಿಶೇಷ ಚೇತನ ಫಲಾನುಭವಿಗಳಿಗೆ ಕೃತಕ ಅಂಗ ಜೋಡಣೆಗಾಗಿ ಸಹಾಯ ಧನ ನೀಡಲಾಗುವುದು. ಸಾಧಕ ಸಲಕರಣೆಗಳನ್ನು ಪಡೆಯಲು ಸಹಾಯ ಧನ (ಎಂ.ಆರ್.ಕಿಟ್, ಊರುಗೋಲು, ಇಯರಿಂಗ್ ಹೆಡ್ಸ್, ವಿಲ್‌ಚರ‍್ಸ್ ಇತ್ಯಾದಿ). ವಿಶೇಷ ಚೇತನರಿಗೆ ಯಂತ್ರಚಾಲಿತ ತ್ರಿಚಕ್ರ ವಾಹನ ನೀಡಲಾಗುತ್ತದೆ. ಅರ್ಜಿಗಳನ್ನು ಪುರಸಭೆ ಕಚೇರಿಯಲ್ಲಿ ಪಡೆದುಕೊಂಡು ಎಲ್ಲಾ ಅಗತ್ಯ ದಾಖಲಾತಿಗಳೊಂದಿಗೆ ಅರ್ಜಿ ಭರ್ತಿ ಮಾಡಿ ಫೆ.24 ರೊಳಗಾಗಿ ಇದೇ ಕಚೇರಿಗೆ ಸಲ್ಲಿಸಬೇಕು. ತಡವಾಗಿ ಬಂದAತಹ ಹಾಗೂ ಅಪೂರ್ಣ ದಾಖಲಾತಿ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ ಹಾಗೂ ಹಿಂಬರಹ ನೀಡದೇ ತಿರಸ್ಕರಿಸಲಾಗುವುದು. ಸರ್ಕಾರದ ಸುತ್ತೋಲೆಯಂತೆ ಸಹಾಯಧನ ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಕುರೇಕುಪ್ಪ ಪುರಸಭೆ ಕಚೇರಿಗೆ ಸಂಪಕಿಸಬಹುದು ಎಂದು ಮುಖ್ಯಾಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ----------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ