ಶುಕ್ರವಾರ, ಜನವರಿ 24, 2025
ಸಮಾಜ ಕಲ್ಯಾಣ ಇಲಾಖೆ: ಆಸಕ್ತ ಸಂಘ ಸಂಸ್ಥೆಗಳ ಪದಾಧಿಕಾರಿಗಳಿಂದ ಅರ್ಜಿ ಆಹ್ವಾನ
ಬಳ್ಳಾರಿ,ಜ.24(ಕರ್ನಾಟಕ ವಾರ್ತೆ):
ಸಮಾಜ ಕಲ್ಯಾಣ ಇಲಾಖೆಯಿಂದ ಅನುಷ್ಟಾನಗೊಳಿಸಲಾಗುತ್ತಿರುವ ನಾಗರೀಕ ಹಕ್ಕು ರಕ್ಷಣಾ ಕಾಯ್ದೆ, 1955 ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ಪ್ರತಿಬಂಧ) ಅಧಿನಿಯಮ ಹಾಗೂ ಇತರೆ ಯೋಜನೆಗಳ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವ (ಬೀದಿ ನಾಟಕ, ರೂಪಕ, ಸಾಕ್ಷö್ಯಚಿತ್ರ, ಪ್ರದರ್ಶನ ಇತ್ಯಾದಿ) ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದ್ದು, ಅನುಷ್ಠಾನಗೊಳಿಸಲು ಆಸಕ್ತ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಇತರೆ ಸ್ವಯಂ ಸೇವಾ ಸಂಘ ಸಂಸ್ಥೆಗಳಿAದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಫೆಬ್ರವರಿ 01 ರೊಳಗೆ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಕಚೇರಿಗೆ ಖುದ್ದಾಗಿ ಅಥವಾ ಅಂಚೆ ಮೂಲಕ ಅರ್ಜಿ ಸಲ್ಲಿಸಬಹದು.
*ಅರ್ಹತೆ:*
ಸ್ವಯಂ ಸೇವಾ ಸಂಘ ಸಂಸ್ಥೆಯು ನೋಂದಾಯಿತ ಸಂಸ್ಥೆಯಾಗಿದ್ದು, ನೊಂದಣಿ ಚಾಲ್ತಿಯಲ್ಲಿರಬೇಕು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದವರ ಅಭಿವೃದ್ಧಿಗಾಗಿ ಕನಿಷ್ಠ 5 ವರ್ಷಗಳ ಸೇವೆಯೊಂದಿಗೆ ಅನುಭವ ಹೊಂದಿರಬೇಕು. ಪ್ರತಿ ವರ್ಷ ಆಡಿಟ್ ಮಾಡಿಸಿರಬೇಕು.
ಹೆಚ್ಚಿನ ಮಾಹಿತಿಗಾಗಿ ದೂ.08392-267932, ಮೊ.9480843023 ಗೆ ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
----------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ