ಭಾನುವಾರ, ಜನವರಿ 26, 2025

ಭಾರತ ದೇಶದ ಅಭಿವೃದ್ಧಿಯ ಹರಿಕಾರ - ಡಾ.ಬಿ.ಆರ್ ಅಂಬೇಡ್ಕರ್: ಪ್ರಾಚಾರ್ಯ ಡಾ.ಪ್ರಹ್ಲಾದ ಚೌದರಿ

ಬಳ್ಳಾರಿ,ಜ.26(ಕರ್ನಾಟಕ ವಾರ್ತೆ) ಭಾರತವು ಸಮಾಜವಾದ ತತ್ವ, ಪ್ರಜಾಪ್ರಭುತ್ವ, ಗಣರಾಜ್ಯದ ಮತ್ತು ಜಾತ್ಯತೀತ ತತ್ವದ ಸಾರ್ವಭೌಮತ್ವನ್ನು ಆಳವಡಿಸಿಕೊಂಡಿದ್ದು, ವಿವಿಧತೆಯಲ್ಲಿ ಏಕತೆಯನ್ನು ಹೊಂದಿದೆ ಎಂದು ಶ್ರೀಮತಿ ಸರಳಾದೇವಿ ಸತೀಶ್ಚಂದ್ರ ಅಗರ್ವಾಲ್ ಸರ್ಕಾರಿ ಪ್ರಥಮ ದರ್ಜೆ (ಸ್ವಾಯತ್ತ) ಕಾಲೇಜಿನ ಪ್ರಾಂಶುಪಾಲರಾದ ಡಾ.ಪ್ರಹ್ಲಾದ ಚೌದರಿ ಅವರು ಹೇಳಿದರು. ನಗರದ ಶ್ರೀಮತಿ ಸರಳಾದೇವಿ ಸತೀಶ್ಚಂದ್ರ ಅಗರ್ವಾಲ್ ಸರ್ಕಾರಿ ಪ್ರಥಮ ದರ್ಜೆ (ಸ್ವಾಯತ್ತ) ಕಾಲೇಜಿನಲ್ಲಿ 76ನೇ ಗಣರಾಜ್ಯೋತ್ಸವ ದಿನಾಚರಣೆ ನಿಮಿತ್ತ ಧ್ವಜಾರೋಹಣ ನೆರವೇರಿಸಿ, ರಾಷ್ಟçಪಿತ ಮಹಾತ್ಮಾ ಗಾಂಧೀಜಿ ಮತ್ತು ಡಾ.ಬಿ.ಆರ್. ಅಂಬೇಡ್ಕರ್ ರವರ ಭಾವಚಿತ್ರಗಳಿಗೆ ಪುಷ್ಪರ್ಚಾನೆ ಸಲ್ಲಿಸಿ ಅವರು ಮಾತನಾಡಿದರು. ಇಂದು ದೇಶಕ್ಕೆ ಪ್ರಜಾಪ್ರಭುತ್ವದ ಆಡಳಿತ ಪದ್ಧತಿಯನ್ನು ಅಳವಡಿಸಿಕೊಂಡ ಸಂಭ್ರಮದ ದಿನವಾಗಿದೆ. 1950 ರಂದು ಜನವರಿ 26 ರಂದು ಇಡೀ ಸ್ವತಂತ್ರ ಭಾರತವನ್ನು ‘ಗಣರಾಜ್ಯವೆಂದು' ಘೋಷಿಸಲಾಯಿತು. ಅದೇ ದಿನದಂದು ಮಹಾನ್ ಮಾನವತಾವಾದಿ ಡಾ.ಬಿ.ಆರ್.ಅಂಬೇಡ್ಕರ್ ಅವರು ರಚಿಸಿದ ಭಾರತದ ಸಂವಿಧಾನ ಜಾರಿಗೊಂಡಿತು. ಭಾರತರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರನ್ನು ಸದಾ ಸ್ಮರಿಸಲೇಬೇಕು ಎಂದು ಹೇಳಿದರು. ಇತಿಹಾಸ ವಿಭಾಗದ ಮುಖ್ಯಸ್ಥ ಡಾ.ಸೋಮನಾಥ.ಸಿ.ಹೆಚ್ ಅವರು ವಿಶೇಷ ಉಪನ್ಯಾಸದಲ್ಲಿ ಮಾತನಾಡಿ, ತ್ಯಾಗ, ಬಲಿದಾನ, ರಕ್ತಪಾತದ ಪ್ರಯುಕ್ತವಾಗಿ ನಮಗೆ ಸ್ವಾತಂತ್ರö್ಯ ದೊರಕಿದೆ. ಸಂವಿಧಾನಾತ್ಮಕವಾಗಿ ನಮ್ಮ ದೇಶದ ರಾಷ್ಟçಧ್ವಜ, ರಾಷ್ಟçಗೀತೆ, ರಾಷ್ಟçಲಾಂಛನಗಳಿಗೆ ಗೌರವ ದೊರಕಿಸಿಕೊಡುವುದು ಪ್ರತಿಯೊಬ್ಬ ಭಾರತೀಯನ ಆದ್ಯ ಕರ್ತವ್ಯವಾಗಿದೆ ಎಂದರು. ಈ ಸಂದರ್ಭದಲ್ಲಿ ಕಾಲೇಜಿನ ನಿಖಟಪೂರ್ವ ಪ್ರಾಂಶುಪಾಲರಾದ ಡಾ.ಹೆಚ್.ಕೆ. ಮಂಜುನಾಥ ರೆಡ್ಡಿ, ಪ್ರೊ.ಮೌನಿಕಾ ರಂಜನ, ರಾಜ್ಯಶಾಸ್ತç ವಿಭಾಗದ ಮುಖ್ಯಸ್ಥರಾದ ಡಾ.ಹೊನ್ನೂರಾಲಿ.ಐ, ರಾಜ್ಯಶಾಸ್ತç ವಿಭಾಗದ ಉಪನ್ಯಾಸಕರಾದ ಬಸವರಾಜ, ಡಾ.ಟಿ.ದುರುಗಪ್ಪ, ಟಿ.ರುದ್ರಮುನಿ, ಇತಿಹಾಸ ವಿಭಾಗದ ಉಪನ್ಯಾಸಕರಾದ ಬಸಪ್ಪ, ರಫಿ, ಭೌತಶಾಸ್ತç ವಿಭಾಗದ ಮುಖ್ಯಸ್ಥರಾದ ಮಂಜುನಾಥ, ಭೋದಕರು ಮತ್ತು ಭೋದಕೆತರ ಸಿಬ್ಬಂದಿಗಳು, ಎಲ್ಲಾ ವಿಭಾಗಗಳ ಉಪನ್ಯಾಸಕರು ಸೇರಿದಂತೆ ಕಾಲೇಜು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. -----------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ