ಸೋಮವಾರ, ಜನವರಿ 27, 2025

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ; ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಬಳ್ಳಾರಿ,ಜ.27(ಕರ್ನಾಟಕ ವಾರ್ತೆ): ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಪ್ರಥಮ ವರ್ಷದ ಪೂರ್ಣಾವಧಿ ಪಿಹೆಚ್‌ಡಿ ಅಧ್ಯಯನ ಪ್ರಾರಂಭಿಸಿರುವ (ದಿನಾಂಕ:10-01-2024 ಮತ್ತು ಅದರ ನಂತರ ಪ್ರಥಮ ವರ್ಷದ ಪಿಹೆಚ್‌ಡಿ ಪ್ರಾರಂಭಿಸಿರಬೇಕು) ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಹಾಗೂ 3ಬಿ ಗೆ ಸೇರಿದ ಅರ್ಹ ಅಭ್ಯರ್ಥಿಗಳಿಂದ ಮಾಸಿಕ ವ್ಯಾಸಂಗ ವೇತನ/ಫೆಲೋಶಿಪ್‌ಗಾಗಿ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಕೆ ಅವಧಿಯನ್ನು ಫೆ.10 ರವರೆಗೆ ವಿಸ್ತರಿಸಲಾಗಿದೆ. ರಾಜ್ಯ ಶಾಸನಬದ್ಧ ವಿಶ್ವವಿದ್ಯಾಲಯಗಳಲ್ಲಿ ಮತ್ತು ಅದರ ಅಧೀನಕ್ಕೆ ಒಳಪಡುವ ಸಂಸ್ಥೆಗಳಲ್ಲಿ ಪ್ರಥಮ ವರ್ಷದ ಪಿಹೆಚ್‌ಡಿ ಅಧ್ಯಯನ ಮಾಡುತ್ತಿರುವ ಹೊಸ ಅಭ್ಯರ್ಥಿಗಳು ಮಾತ್ರ ಆಫ್-ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. 2024-25ರ ಆರ್ಥಿಕ ವರ್ಷವು ಮುಕ್ತಾಯಗೊಳ್ಳುತ್ತಿರುವುದರಿಂದ ಅರ್ಜಿ ಸಲ್ಲಿಸುವ ದಿನಾಂಕವನ್ನು ಪುನಃ ವಿಸ್ತರಿಸಲಾಗುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ಇಲಾಖಾ ವೆಬ್‌ಸೈಟ್ https://bcwd.karnataka.gov.in ಅಥವಾ ಸಹಾಯವಾಣಿ 8050770004 ಗೆ ಸಂಪರ್ಕಿಸಬಹುದು ಎಂದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಭಾನುಮತಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ----------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ