ಬುಧವಾರ, ಜನವರಿ 22, 2025
ಅನಾಮಧೇಯ ಮೃತ ವ್ಯಕ್ತಿಯ ವಾರಸುದಾರರ ಪತ್ತೆಗೆ ಮನವಿ
ಬಳ್ಳಾರಿ,ಜ.22(ಕರ್ನಾಟಕ ವಾರ್ತೆ):
ನಗರದ ವಿಶಾಲ್ ನಗರ ಬಡಾವಣೆಯ ಸಾಯಿಬಾಬ ದೇವಸ್ಥಾನದ ಬಳಿ ಸುಮಾರು 60 ವರ್ಷದ ಅನಾಮಧೇಯ ವ್ಯಕ್ತಿಯು ಅಸ್ವಸ್ಥರಾಗಿ ಮೃತಪಟ್ಟಿದ್ದು, ಮೃತನ ವಾರಸುದಾರರು ತಿಳಿದಿರುವುದಿಲ್ಲ. ಮೃತನ ವಾರಸುದಾರರ ಪತ್ತೆಗಾಗಿ ಸಹಕರಿಸಬೇಕು ಎಂದು ಬ್ರೂಸ್‌ಪೇಟೆ ಪೊಲೀಸ್ ಠಾಣೆಯ ಠಾಣಾಧಿಕಾರಿಗಳು ಮನವಿ ಮಾಡಿದ್ದಾರೆ.
ಚಹರೆ: ಅಂದಾಜು 5.5 ಅಡಿ, ತೆಳುವಾದ ಮೈಕಟ್ಟು, ಎಣ್ಣೆಗೆಂಪು ಬಣ್ಣ, ಕೋಲು ಮುಖ, ತಲೆಯ ಮೇಲೆ ಕಪ್ಪು ಕೂದಲು ಹಾಗೂ ಮುಖದಲ್ಲಿ ಬಿಳಿ ಗಡ್ಡವನ್ನು ಹೊಂದಿರುತ್ತಾರೆ. ಬಾದಾಮಿ ಬಣ್ಣದ ಅಂಗಿಯನ್ನು ಧರಿಸುತ್ತಾರೆ.
ವಾರಸುದಾರರ ಬಗ್ಗೆ ಮಾಹಿತಿ ಸಿಕ್ಕಲ್ಲಿ ಬ್ರೂಸ್‌ಪೇಟೆ ಪೊಲೀಸ್ ಠಾಣೆಯ ದೂ.08392-272022, ಪಿಎಸ್‌ಐ ಮೊ.9480803081 ಅಥವಾ ಬಳ್ಳಾರಿ ಪೊಲೀಸ್ ಕಂಟ್ರೋಲ್ ರೂಂ ದೂ.08392-258100 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
----------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ