ಬುಧವಾರ, ಜನವರಿ 22, 2025
ವಿವಿಧೆಡೆ ದಾಳಿ; ನಾಲ್ವರು ಬಾಲಕಾರ್ಮಿಕ ಮಕ್ಕಳ ರಕ್ಷಣೆ
ಬಳ್ಳಾರಿ,ಜ.22(ಕರ್ನಾಟಕ ವಾರ್ತೆ):
ಜಿಲ್ಲಾ ಬಾಲ ಕಾರ್ಮಿಕ ಯೋಜನೆ ಹಾಗೂ ಇತರೆ ಇಲಾಖೆಗಳ ಸಹಯೋಗದೊಂದಿಗೆ ನಗರದ ಸುಧಾಕ್ರಾಸ್, ಬಿಮ್ಸ್ ಎದುರುಗಡೆ, ವಿದ್ಯಾನಗರ ಮತ್ತು ಇತರೆ ಸ್ಥಳಗಳಲ್ಲಿ ಗ್ಯಾರೇಜ್, ಮೆಕ್ಯಾನಿಕ್ ಶಾಪ್, ಐಸ್ ಕ್ರೀಮ್ ಪಾರ್ಲರ್, ಜ್ಯೂಸ್ ಅಂಗಡಿ ಇತ್ಯಾದಿ ಉದ್ದಿಮೆಗಳ ಮೇಲೆ ಅನಿರೀಕ್ಷಿತ ದಾಳಿ ನಡೆಸಿ ನಾಲ್ವರು ಬಾಲಕಾರ್ಮಿಕ ಮಕ್ಕಳನ್ನು ರಕ್ಷಿಸಲಾಗಿದೆ ಎಂದು ಯೋಜನೆಯ ಯೋಜನಾಧಿಕಾರಿ ಮೌನೇಶ್ ಅವರು ತಿಳಿಸಿದ್ದಾರೆ.
ಜಿಲ್ಲಾಧಿಕಾರಿಗಳ ನಿರ್ದೇಶನದ ಮೇರೆಗೆ ಹಾಗೂ ಪ್ಯಾನ್-ಇಂಡಿಯಾ ರಕ್ಷಣೆ ಮತ್ತು ಪುನರ್ವಸತಿ ಅಭಿಯಾನ ಅಂಗವಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ, ಪೋಲಿಸ್ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ 1986 ರಡಿ ನೇಮಕವಾದ ನಿರೀಕ್ಷಕರ ಟಾಸ್ಕ್ ಪೋರ್ಸ್ ಸಮಿತಿ ಸಭೆ ನಡೆಸಿ ಅಧಿಕಾರಿಗಳ ತಂಡದೊAದಿಗೆ ದಾಳಿ ನಡೆಸಲಾಗಿದೆ.
ಒಟ್ಟು 04 ಬಾಲಕಾರ್ಮಿಕ ಮಕ್ಕಳನ್ನು ಕೆಲಸದಿಂದ ಬಿಡುಗಡೆಗೊಳಿಸಿ, ಮಕ್ಕಳ ಕಲ್ಯಾಣ ಸಮಿತಿಗೆ ಓಪ್ಪಿಸಿ ಸಂಬAಧಿಸಿದ ಶಾಲೆಗಳಲ್ಲಿ ಅವರ ವಯಸ್ಸಿನ ದಾಖಲೆ ಪಡೆದ ನಂತರ ಮಾಲೀಕರ ವಿರುದ್ದ ಬಾಲಕಾರ್ಮಿಕ ಕಾಯ್ದೆ 1986 ರ ತಿದ್ದುಪಡಿ ಕಾಯ್ದೆಯಡಿ ಎಫ್‌ಐಆರ್ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.
ಈ ಟಾಸ್ಕ್ ಪೋರ್ಸ್ ಸಮಿತಿಯಲ್ಲಿ ಗ್ರೇಡ್-2 ತಹಶೀಲ್ದಾರ ಮಂಜುನಾಥ, ಕಾರ್ಮಿಕ ನಿರೀಕ್ಷಕರಾದ ಪರಶುರಾಮ್, ರಮೇಶ್, ಪೂರ್ವವಲಯ ಕ್ಷೇತ್ರ ಸಂಪನ್ಮೂಲ ಅಧಿಕಾರಿ ನರಸಪ್ಪ, ಪಶ್ಚಿಮ ವಲಯ ಕ್ಷೇತ್ರ ಸಂಪನ್ಮೂಲ ಅಧಿಕಾರಿ ಸಿದ್ದಪ್ಪ, ಮಕ್ಕಳ ಸಹಾಯವಾಣಿಯ ಸಿಬ್ಬಂದಿಗಳಾದ ಚಂದ್ರಕಳ ಮತ್ತು ನಿಲೋಫಿಯಾ, ರಿಚ್ ಸ್ವಯಂ ಸೇವಾ ಸಂಸ್ಥೆಯ ಸಿಬ್ಬಂದಿ ಬಸಮ್ಮ ಹಾಗೂ ಇತರರು ಹಾಜರಿದ್ದರು.
----------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ