ಬಳ್ಳಾರಿ,ಜ.18(ಕರ್ನಾಟಕ ವಾರ್ತೆ):
ಸಾರ್ವಜನಿಕ ಗ್ರಂಥಾಲಯ ಇಲಾಖೆ ಅಡಿಯಲ್ಲಿ ರಾಜ್ಯದ ನಾಲ್ಕು ಕಂದಾಯ ವಿಭಾಗಗಳಾದ ಬೆಂಗಳೂರು, ಮಂಗಳೂರು, ಧಾರವಾಡ ಮತ್ತು ಕಲಬುರಗಿ ಕೇಂದ್ರಗಳಲ್ಲಿ ಆರು ತಿಂಗಳ ಅವಧಿಯ ಗ್ರಂಥಾಲಯ ವಿಜ್ಞಾನ ತರಬೇತಿ ಶಾಲಾ ಪ್ರವೇಶಾತಿಗೆ ಈಗಾಗಲೇ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವ ಅವಧಿಯನ್ನು ಜ.31 ರವರೆಗೆ ವಿಸ್ತರಿಸಲಾಗಿದೆ ಎಂದು ಬಳ್ಳಾರಿ ಜಿಲ್ಲಾ ಕೇಂದ್ರ ಗ್ರಂಥಾಲಯದ ಮುಖ್ಯ ಗ್ರಂಥಾಲಯಾಧಿಕಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
---------
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ