ಸೋಮವಾರ, ಜನವರಿ 20, 2025

ವ್ಯಕ್ತಿ ಕಾಣೆ: ಪತ್ತೆಗೆ ಮನವಿ

ಬಳ್ಳಾರಿ,ಜ.20(ಕರ್ನಾಟಕ ವಾರ್ತೆ) ತೋರಣಗಲ್ಲು ಪಟ್ಟಣದ ನಾಗರ್ಜುನ ಹೋಟೆಲ್ ಹಿಂಭಾಗ ಹತ್ತಿರದ ನಿವಾಸಿ ಹಾಗೂ ಟೈಯರ್‌ಮ್ಯಾನ್ ಆಗಿ ಕೆಲಸ ಮಾಡುತ್ತಿದ್ದ ರಾಜೇಶ್.ಎಮ್ ಎನ್ನುವ 32 ವರ್ಷದ ವ್ಯಕ್ತಿಯು ಜ.02 ರಂದು ಕಾಣೆಯಾಗಿರುವ ಕುರಿತು ತೋರಣಗಲ್ಲು ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪತ್ತೆಗೆ ಸಹಕರಿಸಬೇಕೆಂದು ಎಂದು ಠಾಣಾಧಿಕಾರಿ ಮನವಿ ಮಾಡಿದ್ದಾರೆ. ಕಾಣೆಯಾದ ವ್ಯಕ್ತಿಯ ಚಹರೆ: ಎತ್ತರ 5.8 ಅಡಿ, ದುಂಡು ಮುಖ, ಕಪ್ಪು ಮೈಬಣ್ಣ, ಧೃಡವಾದ ಮೈಕಟ್ಟು ಹೊಂದಿದ್ದು, ಕಾಣೆಯಾದ ಸಂದರ್ಭದಲ್ಲಿ ನೀಲಿ ಬಣ್ಣದ ಜಾಕೇಟ್ ಮತ್ತು ನೀಲಿ ಬಣ್ಣದ ಜೀನ್ಸ್ ಪ್ಯಾಂಟ್ ಧರಿಸಿರುತ್ತಾನೆ. ಕನ್ನಡ, ತೆಲುಗು, ಹಿಂದಿ ಭಾಷೆ ಮಾತಾನಾಡುತ್ತಾನೆ. ವ್ಯಕ್ತಿಯ ಬಗ್ಗೆ ಮಾಹಿತಿ ಸಿಕ್ಕಲ್ಲಿ ತೋರಣಗಲ್ಲು ಪೋಲಿಸ್ ಠಾಣೆಯ ದೂ.08395-250100, 9480803062 ಅಥವಾ ಬಳ್ಳಾರಿ ಪೋಲಿಸ್ ಕಂಟ್ರೋಲ್ ರೂಂ ದೂ.08392-279100 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ----------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ