ಶನಿವಾರ, ಜನವರಿ 18, 2025
ಗ್ರಾಮ ಆಡಳಿತ ಅಧಿಕಾರಿಗಳ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆಗಳಿಗೆ ಆಹ್ವಾನ
ಬಳ್ಳಾರಿ,ಜ.18(ಕರ್ನಾಟಕ ವಾರ್ತೆ):
ಜಿಲ್ಲೆಯ ಕಂದಾಯ ಘಟಕದಲ್ಲಿ ಖಾಲಿ ಇರುವ 17 ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಗಳನ್ನು ನೇರ ನೇಮಕಾತಿಯ ಮೂಲಕ ಭರ್ತಿ ಮಾಡಲು 1:1 ಅನುಪಾತದ ತಾತ್ಕಲಿಕ ಆಯ್ಕೆ ಪಟ್ಟಿ ಮತ್ತು ಹೆಚ್ಚುವರಿ ಆಯ್ಕೆ ಪಟ್ಟಿ ಪ್ರಕಟಿಸಲಾಗಿದ್ದು, ಆಯ್ಕೆ ಪಟ್ಟಿಗೆ ಸಂಬAಧಿಸಿದAತೆ ಆಕ್ಷೇಪಣೆಗಳಿದ್ದಲ್ಲಿ ಜ.23 ರೊಳಗಾಗಿ ಲಿಖಿತ ಹೇಳಿಕೆ ಹಾಗೀ ದಾಖಲೆಗಳೊಂದಿಗೆ ಜಿಲ್ಲಾಧಿಕಾರಿಗಳ ಕಾರ್ಯಾಲಯಕ್ಕೆ ನೇರವಾಗಿ ಸಲ್ಲಿಸಬಹುದು ಎಂದು ಗ್ರಾಮ ಆಡಳಿತ ಅಧಿಕಾರಿಗಳ ನೇರ ನೇಮಕಾತಿ ಆಯ್ಕೆ ಪ್ರಾಧಿಕಾರದ ಅಧ್ಯಕ್ಷರೂ ಆದ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ತಿಳಿಸಿದ್ದಾರೆ.
ಆಯ್ಕೆಯಾಗಿರುವ ಅಭ್ಯರ್ಥಿಗಳ ಮೂಲ ದಾಖಲೆಗಳ ಪರಿಶೀಲನೆ ಕಾರ್ಯ ಜ.06 ರಂದು ಕೈಗೊಳ್ಳಲಾಗಿತ್ತು. ಅರ್ಹ 50 ಅಭ್ಯರ್ಥಿಗಳ ದಾಖಲಾತಿ ಪರಿಶೀಲನೆ ವೇಳೆ ಇಬ್ಬರು ಅಭ್ಯರ್ಥಿಗಳು ಗೈರಾಗಿದ್ದರು. ಅಭ್ಯರ್ಥಿಗಳನ್ನು ನೇರ ನೇಮಕಾತಿ ಪ್ರಾಧಿಕಾರದ ಸಭೆಯಲ್ಲಿ ತಾತ್ಕಲಿಕ ಆಯ್ಕೆ ಪಟ್ಟಿಯಿಂಡ ಕೈಬಿಡಲಾಗಿದೆ.
ಆಯ್ಕೆ ಪಟ್ಟಿಯನ್ನು ಬಳ್ಳಾರಿ ಜಿಲ್ಲೆಯ ವೆಬ್‌ಸೈಟ್ http://bellary.nic.in ನಲ್ಲಿ ಪ್ರಕಟಿಸಲಾಗಿದೆ.
*ಷರತ್ತು:*
ಆಯ್ಕೆಯಾದ ಅಭ್ಯರ್ಥಿಗಳ ಎಲ್ಲಾ ಮೂಲ ದಾಖಲೆಗಳ ನೈಜತೆಯ ಬಗ್ಗೆ ಸಂಬAಧಪಟ್ಟ ಪ್ರಾಧಿಕಾರದ ಅಭಿಪ್ರಾಯಕ್ಕೊಳಪಡಿಸುತ್ತಾ, ಅವುಗಳು ಸುಳ್ಳು ಎಂದು ಕಂಡುಬAದಲ್ಲಿ ಅಂತಹ ಅಭ್ಯರ್ಥಿಗಳ ಆಯ್ಕೆಯನ್ನು ರದ್ದುಗೊಳಿಸಲಾಗುವುದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ತಿಳಿಸಿದ್ದಾರೆ.
---------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ