ಬುಧವಾರ, ಜನವರಿ 22, 2025

ಕುರೇಕುಪ್ಪ: ಅರ್ಜಿ ಆಹ್ವಾನ

ಬಳ್ಳಾರಿ,ಜ.22(ಕರ್ನಾಟಕ ವಾರ್ತೆ): ಕುರೇಕುಪ್ಪ ಪುರಸಭೆ ವ್ಯಾಪ್ತಿಯಲ್ಲಿ 2023-24 ಮತ್ತು 2024-25ನೇ ಸಾಲಿನ ಎಸ್‌ಎಫ್‌ಸಿ ಮುಕ್ತನಿಧಿ ಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಜನಾಂಗದ ಕಲ್ಯಾಣಕ್ಕಾಗಿ ಕಾಯ್ದಿರಿಸಿದ ಶೇ.24.10 ರ ಅನುದಾನದಲ್ಲಿ ವೈಯಕ್ತಿಕ ಸೌಲಭ್ಯಕ್ಕಾಗಿ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಕುರೇಕುಪÀ್ಪ ಪುರಸಭೆ ವ್ಯಾಪ್ತಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಜನಾಂಗದ ಎಂಬಿಬಿಎಸ್ ಮತ್ತು ಬಿಇ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಡೆಸ್ಕ್ಟಾಪ್ ಕಂಪ್ಯೂಟರ್ ಅಥವಾ ಲ್ಯಾಪ್‌ಟಾಪ್ ಖರೀದಿಸಲು ಸಹಾಯಧನ ನೀಡಲಾಗುವುದು. ಅರ್ಜಿಗಳನ್ನು ಉಚಿತವಾಗಿ ಕಚೇರಿಯಲ್ಲಿ ಪಡೆದು ಜ.31 ರೊಳಗಾಗಿ ಭರ್ತಿ ಮಾಡಿ ಎಲ್ಲಾ ಅಗತ್ಯ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಬೇಕು. ಮೆರಿಟ್ ಆಧಾರದ ಮೇಲೆ ಡೆಸ್ಕ್ ಟಾಪ್ ಕಂಪ್ಯೂಟರ್ ಅಥಾವಾ ಲ್ಯಾಪ್‌ಟಾಪ್ ಖರೀದಿಸಲು ಸಹಾಯಧನ ನೀಡಲಾಗುವುದು. ತಡವಾಗಿ ಬಂದAತಹ ಹಾಗೂ ಅಪೂರ್ಣ ದಾಖಲಾತಿ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ ಹಾಗೂ ಹಿಂಬರಹ ನೀಡದೇ ತಿರಸ್ಕರಿಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ಕುರೇಕುಪ್ಪ ಪುರಸಭೆ ಕಚೇರಿ ಸಂಪರ್ಕಿಸಬಹುದು ಎಂದು ಪುರಸಭೆ ಮುಖ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. -----------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ