ಶನಿವಾರ, ಜನವರಿ 18, 2025
ಹೆಣ್ಣು ಮಗುವಿನ ಪೋಷಕರ ಪತ್ತೆಗಾಗಿ ಮನವಿ
ಬಳ್ಳಾರಿ,ಜ.18(ಕರ್ನಾಟಕ ವಾರ್ತೆ):
ನಗರದ ಹೆಚ್.ಆರ್.ಗವಿಯಪ್ಪ (ಮೋತಿ ಸರ್ಕಲ್) ವೃತ್ತದ ಬುಡಾ ಕಾಂಪ್ಲೆಕ್ಸ್ ಹತ್ತಿರ ಆಶಾ ಎನ್ನುವ 07 ವರ್ಷದ ಹೆಣ್ಣು ಮಗು ಜ.12 ರಂದು ಪತ್ತೆಯಾಗಿದ್ದು, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಸಂಸ್ಥೆಗೆ ದಾಖಲು ಮಾಡಿಕೊಂಡು, ಪಾಲನೆ ಮತ್ತು ಪೋಷಣೆ ಮಾಡಲಾಗುತ್ತಿದೆ. ಹೆಣ್ಣು ಮಗುವಿನ ಪೋಷಕರ ಪತ್ತೆಗೆ ಸಹಕರಿಸಬೇಕೆಂದು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ರಕ್ಷಣಾಧಿಕಾರಿ ಎಳೆನಾಗಪ್ಪ ಅವರು ಮನವಿ ಮಾಡಿದ್ದಾರೆ.
ಹೆಣ್ಣು ಮಗುವಿನ ಪೋಷಕರ ಬಗ್ಗೆ ಮಾಹಿತಿ ಸಿಕ್ಕಲ್ಲಿ ನಗರದ ಕಂಟೋನ್‌ಮೆAಟ್‌ನ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ದೂ.08392-241373 ಅಥವಾ 9980523452 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
---------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ