ಬುಧವಾರ, ಜನವರಿ 29, 2025
ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ಅಂತಿಮ ಆಯ್ಕೆ ಪಟ್ಟಿ ಪ್ರಕಟ
ಬಳ್ಳಾರಿ,ಜ.29(ಕರ್ನಾಟಕ ವಾರ್ತೆ):
ಜಿಲ್ಲೆಯ ಕಂದಾಯ ಘಟಕದಲ್ಲಿ ಖಾಲಿ ಇರುವ 17 ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಗಳನ್ನು ಮೀಸಲಾತಿವಾರು ಅಭ್ಯರ್ಥಿಗಳ ಅಂತಿಮ ಆಯ್ಕೆ ಪಟ್ಟಿಯನ್ನು ಬಳ್ಳಾರಿ ಜಿಲ್ಲಾ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ ಎಂದು ಗ್ರಾಮ ಆಡಳಿತ ಅಧಿಕಾರಿಗಳ ನೇರ ನೇಮಕಾತಿ ಆಯ್ಕೆ ಪ್ರಾಧಿಕಾರದ ಅಧ್ಯಕ್ಷರು ಆದ ಜಿಲ್ಲಾಧಿಕಾರಿ ಪ್ರಶಾಂತ್‌ಕುಮಾರ್ ಮಿಶ್ರಾ ಅವರು ತಿಳಿಸಿದ್ದಾರೆ.
ಈಗಾಗಲೇ ತಾತ್ಕಾಕಲಿಕ ಆಯ್ಕೆ ಪಟ್ಟಿ ಹಾಗೂ ಹೆಚ್ಚುವರಿ ಆಯ್ಕೆ ಪಟ್ಟಿಗೆ ನಿಗಧಿತ ಅವಧಿಯೊಳಗೆ ಸ್ವೀಕೃತವಾದ ಆಕ್ಷೇಪಣೆಗಳನ್ನು ನಿಯಮಾನುಸಾರ ಪರಿಶೀಲಿಸಿ, ಮೀಸಲಾತಿ ಮತ್ತು ಅಂಕಗಳ ಆಧಾರದ ಮೇಲೆ ಅಭ್ಯರ್ಥಿಗಳ ಅಂತಿಮ ಆಯ್ಕೆಪಟ್ಟಿಯನ್ನು ಬಳ್ಳಾರಿ ಜಿಲ್ಲಾ ವೆಬ್‌ಸೈಟ್ http://bellary.nic.in ನಲ್ಲಿ ಪ್ರಕಟಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ