ಶುಕ್ರವಾರ, ಫೆಬ್ರವರಿ 28, 2025
ಹಕ್ಕಿಜ್ವರದ ಬಗ್ಗೆ ಭಯ ಬೇಡ ಎಚ್ಚರವಿರಲಿ: ಡಿ.ಸಿ.ಪ್ರಶಾಂತ್ ಕುಮಾರ್ ಮಿಶ್ರಾ
ಬಳ್ಳಾರಿ,ಫೆ.28(ಕರ್ನಾಟಕ ವಾರ್ತೆ):
ರಾಜ್ಯದ ಕೆಲವು ಸ್ಥಳಗಳಲ್ಲಿ ವರದಿಯಾಗಿರುವ ಹಕ್ಕಿ ಜ್ವರ (ಬರ್ಡ್ ಫ್ಲೂ) ಪ್ರಕರಣದ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿ ವ್ಯಾಪಕ ಮುಂಜಾಗ್ರತೆ ವಹಿಸಲಾಗಿದ್ದು, ಸಾರ್ವಜನಿಕರು ಯಾವುದೇ ಆತಂಕಕ್ಕೆ ಒಳಗಾಗಬೇಡಿ ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪಶುಸಂಗೋಪನ ಇಲಾಖೆ, ಬಿಎಮ್‌ಆರ್‌ಸಿ, ಮಹಾನಗರ ಪಾಲಿಕೆ, ಜಿಲ್ಲಾ ಸರ್ವೇಕ್ಷಣಾ ಘಟಕ ಹಾಗೂ ಮಾಹಿತಿ ಶಿಕ್ಷಣ ಸಂವಹನ ವಿಭಾಗದ ಸಹಯೋಗದಲ್ಲಿ ಶುಕ್ರವಾರ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಆಯೋಜಿಸಿದ್ದ ಹಕ್ಕಿಜ್ವರ ಕುರಿತು ಸೇರಿದಂತೆ ಅಂತರ ಇಲಾಖೆ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಹಕ್ಕಿ ಜ್ವರವು (ಹಕ್ಕಿಗಳಿಗೆ ಸಂಬAಧಿಸಿದ) ವೈರಾಣುಗಳಿಂದ (ವೈರಸ್) ಉಂಟಾಗಿದ್ದು, ಸೋಂಕು ತಗುಲಿದ ಹಕ್ಕಿಗಳಿಂದಾಗುವ ವಿಸರ್ಜನೆ, ಶ್ವಾಸೋಚ್ಛಾಸ ಕ್ರಿಯೆ ಮತ್ತು ರಕ್ತದಿಂದ ಹರಡುತ್ತದೆ. ಸೋಂಕು ತಗುಲಿದ ಕೋಳಿ ಮರಿಗಳ ಪುಕ್ಕಗಳನ್ನು ತರಿಯುವ ಮತ್ತು ವಧೆಗೈಯುವ ಕಾರ್ಯಗಳಲ್ಲಿ ನಿರತರಾದ ವಯಸ್ಕರಲ್ಲಿ ಹೆಚ್ಚಾಗಿ ಈ ಸೋಂಕು ಸಂಭವಿಸುತ್ತದೆ ಎಂದರು.
ಸೋAಕು ತಗಲಿದ ಅಥವಾ ಸಾಯುವ ಹಂತದಲ್ಲಿರುವ ಕೋಳಿಗಳಿರುವ ವಾತಾವರಣದಲ್ಲಿ ಕ್ರೀಡಾನಿರತರಾದ ಮಕ್ಕಳಿಗೂ ಈ ಸೋಂಕು ಹರಡುತ್ತದೆ. ಈ ಹಿನ್ನಲೆಯಲ್ಲಿ ಜನತೆಗೆ ಜಾಗೃತಿ ನೀಡುವ ಮೂಲಕ ಸೋಂಕು ಹರಡದಂತೆ ಕ್ರಮವಹಿಸಲು ಸೂಚಿಸಿದರು.
*ಮುನ್ನೆಚ್ಚರಿಕೆ ಕ್ರಮಗಳು:*
ಹಕ್ಕಿಗಳ ಅಸಹಜ ಸಾವು ಕಂಡಬAದಲ್ಲಿ ತಕ್ಷಣ ಪಶು ಇಲಾಖೆಗೆ ತಿಳಿಸಬೇಕು. ವ್ಯಾದಿಗೊಳಗಾದ ಅಥವಾ ಆಕಸ್ಮಿಕವಾಗಿ ಮರಣ ಹೊಂದಿದ ಹಕ್ಕಿಗಳನ್ನು ಕೈಯಿಂದ ಮುಟ್ಟಬಾರದು.
ಮನೆಯಲ್ಲಿ ಸೋಂಕು ತಗುಲಿದ ಹಕ್ಕಿಗಳ ಪುಕ್ಕಗಳನ್ನು ತೆಗೆಯಬಾರದು, ಕೊಲ್ಲಬಾರದು ಅಥವಾ ಕೈಯಿಂದ ಮುಟ್ಟಬಾರದು.
ಮನೆಯಲ್ಲಿ ಸೋಂಕು ತಗುಲಿದ ಹಕ್ಕಿಗಳ ಪುಕ್ಕಗಳನ್ನು ತೆಗೆಯಬಾರದು ಅಥವಾ ಕೈಯಿಂದ ಮುಟ್ಬಬಾರದು.
ಹಕ್ಕಿಗಳು ವೈರಾಣು ಸೋಂಕನ್ನು ಹೊಂದಿರಬಹುದಾಗಿರುವುದರಿAದ ಮಕ್ಕಳನ್ನು ಅಂತಹ ಹಕ್ಕಿಗಳನ್ನು ಸ್ಪರ್ಶಮಾಡುವುದಕ್ಕಾಗಲಿ ಅಥವಾ ಅವುಗಳೊಂದಿಗೆ ಆಟ ಆಡುವುದಕ್ಕಾಲಿ ಅಥವಾ ಸಾಗಿಸುವುದಕ್ಕಾಗಲಿ ಬಿಡಬಾರದು.
ಹಕ್ಕಿ ಜ್ವರ ತಲೆದೂರಿರುವ ಪ್ರದೇಶದಲ್ಲಿ ನೀವು ವಾಸಿಸುತ್ತಿರುವುವರಾದರೆ ಎಲ್ಲಿ ಜೀವಂತ ಹಕ್ಕಿಗಳನ್ನು ಮಾರುತ್ತಾರೋ ಅಥವಾ ಮಾಂಸಕ್ಕಾಗಿ ವಧಿಸುತ್ತಾರೋ ಅಂತಹ ಸ್ಥಳಗಳಿಗೆ ನೀವು ಹೋಗಬೇಡಿ ಕೋಳಿಗಳ ಯಾವುದೇ ವಿಸರ್ಜನೆಗಳನ್ನು ಗೊಬ್ಬರವನ್ನಾಗಿ ಉಪಯೋಗಿಸಬಾರದು.
*ಮುಂಜಾಗೃತಾ ಕ್ರಮ ಮಾಡಬೇಕಾಗಿರುವುದು:*
ಹಕ್ಕಿಗಳನ್ನು ಕೈಯಿಂದ ಮುಟ್ಟಿದ ನಂತರ ಕೈಗಳನ್ನು ಸಾಬೂನಿಂದ ಮತ್ತು ನೀರಿನಿಂದ ತೊಳೆದುಕೋಳ್ಳಬೇಕು.
ಕೋಳಿ ಮರಿಗಳನ್ನು ಕೈಗಳಿಂದ ಮುಟ್ಟುವಾಗ ಮೂಗು ಮತ್ತು ಬಾಯಿಗೆ ದಪ್ಪ ಬಟ್ಟೆಯ ಮುಸುಕು ಹಾಕಿಕೊಳ್ಳಿ. ಹಕ್ಕಿಗಳನ್ನು ಮುಟ್ಟಿದ ನಂತರ ಕೈಗಳಿಂದ ಕಣ್ಣು, ಮೂಗು ಅಥವಾ ಬಾಯಿಯನ್ನು ಉಜ್ಜಿಕೊಳ್ಳದಂತೆ ಎಚ್ಚರವಹಿಸಿ.
ಕೋಳಿ ಮಾಂಸ ಮತ್ತು ಮೊಟ್ಟೆಗಳನ್ನು ತಿನ್ನಲು ಚೆನ್ನಾಗಿ ಬೇಯಿಸಿ ಸೇವಿಸಬೇಕು.
ಮುಂಜಾಗೃತಾ ಕ್ರಮವಾಗಿ ಎಲ್ಲ ಕೋಳಿ ಸಾಕಾಣಿಕೆ ಫೌಲ್ಟಿçಗಳಲ್ಲಿ ನಿಗಾವಹಿಸುವಂತೆ ಪಶು ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಕೋಳಿ ಸಾಕಾಣಿಕೆ ಫೌಲ್ಟಿçಗಳಲ್ಲಿ ಕೆಲಸ ನಿರ್ವಹಿಸುವ ಕಾರ್ಮಿಕರಿಗೆ ವೈಯಕ್ತಿಕ ಕಾಳಜಿವಹಿಸುವ ಕುರಿತು ಜಾಗೃತಿ ನೀಡಲು ಅಗತ್ಯವೆನಿಸಿದಲ್ಲಿ ಚಿಕಿತ್ಸೆಗೆ ಯಾವುದೆ ಔಷಧಿಗಳ ಕೊರತೆಯಾಗದಂತೆ ಕ್ರಮವಹಿಸಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು. ಇದಕ್ಕಾಗಿ ಗ್ರಾಮ ಪಂಚಾಯಿತಿಗಳ ಸಹಕಾರ ಪಡೆಯುವಂತೆ ತಿಳಿಸಿದರು.
ಇದೇ ವೇಳೆ ಹಕ್ಕಿಜ್ವರದ ಜಾಗೃತಿ ಕುರಿತು ಭಿತ್ತಿಪತ್ರ ಬಿಡುಗಡೆ ಮಾಡಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ ಯಲ್ಲಾ ರಮೇಶಬಾಬು, ಜಿಲ್ಲಾ ಶಸ್ತçಚಿಕಿತ್ಸಕ ಡಾ ಎನ್.ಬಸರೆಡ್ಡಿ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಮರಿಯಂಬಿ ವಿ.ಕೆ, ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ಉಪನಿರ್ದೇಶಕ ಡಾ.ವಿನೋದಕುಮಾರ, ಬಿಮ್ಸ್ನ ಮೈಕ್ರೋಬಯಾಲಜಿ ವಿಭಾಗದ ಡಾ. ಕೃಷ್ಣ, ವೈದ್ಯಕೀಯ ಅಧಿಕ್ಷಕಿ ಡಾ.ಇಂದುಮತಿ, ಜಿಲ್ಲಾ ಮಲೇರಿಯ ನಿಯಂತ್ರಣಾಧಿಕಾರಿ ಡಾ.ಅಬ್ದುಲ್ಲಾ, ಉಪವಲಯ ಅರಣ್ಯಾಧಿಕಾರಿ ಸುನೀಲ್‌ಕುಮಾರ, ಪಶು ಇಲಾಖೆ ಸಹಾಯಕ ನಿರ್ದೇಶಕರಾದ ಡಾ.ಕೆ.ಆರ್ ಶ್ರೀನಿವಾಸ, ಡಾ.ವಲಿಭಾಷಾ, ಜಿಲ್ಲಾ ಆರೋಗ್ಯಶಿಕ್ಷಣಾಧಿಕಾರಿ ಈಶ್ವರ ಹೆಚ್ ದಾಸಪ್ಪನವರ, ಸೇರಿದಂತೆ ತಾಲ್ಲೂಕು ಆರೋಗ್ಯಾಧಿಕಾರಿಗಳು, ವೈದ್ಯಾಧಿಕಾರಿಗಳು ಸರ್ವೇಕ್ಷಣಾ ವಿಭಾಗದ ಸಿಬ್ಬಂಧಿಯವರು ಇನ್ನಿತರರು ಉಪಸ್ಥಿತರಿದ್ದರು.
----------
ವಿಜ್ಞಾನದಿಂದ ವೈಯಕ್ತಿಕ ಅಭಿವೃದ್ಧಿ ಜೊತೆಗೆ ದೇಶದ ಅಭಿವೃದ್ಧಿ: ಜಿಲ್ಲಾ ಪಂಚಾಯತ್ ಸಿಇಒ ಮಹಮ್ಮದ್ ಹಾರಿಸ್ ಸುಮೇರ್
ಬಳ್ಳಾರಿ,ಫೆ.28(ಕರ್ನಾಟಕ ವಾರ್ತೆ):
ವಿಜ್ಞಾನ ಮತ್ತು ತಂತ್ರಜ್ಞಾನ ನಮ್ಮ ಜೀವನದಲ್ಲಿ ಬಹಳ ಪ್ರಮುಖವಾದದ್ದು, ವಿದ್ಯಾರ್ಥಿಗಳು ದೈನಂದಿನ ಜೀವನದಲ್ಲಿ ಅಳವಡಿಸಿಕೊಂಡರೆ ದೇಶದ ಅಭಿವೃದ್ಧಿಯು ಹೊಂದುತ್ತದೆ ಎಂದು ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರಿಸ್ ಸುಮೇರ್ ಅವರು ಹೇಳಿದರು.
ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿ ಹಾಗೂ ಜಿಲ್ಲಾ ಪಂಚಾಯತ್ ಸಹಯೋಗದಲ್ಲಿ ಮೋಕಾದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಶುಕ್ರವಾರ ಆಯೋಜಿಸಿದ್ದ ರಾಷ್ಟ್ರೀಯ ವಿಜ್ಞಾನ ದಿನಾಚರಣೆ 2025 ಕಾರ್ಯಕ್ರಮವನ್ನು ಸಿ.ವಿ.ರಾಮನ್ ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಉದ್ಘಾಟಿಸಿ ಮಾತನಾಡಿದರು.
ದಿನನಿತ್ಯ ಜೀವನದಲ್ಲಿ ವಿಜ್ಞಾನದ ಮಹತ್ವವನ್ನು ಅರಿತು ಅನೇಕ ಮಹಾನ್ ವಿಜ್ಞಾನಿಗಳು ಸಾಧನೆಗೈದಿದ್ದಾರೆ. ನಾವು ಸಹ ನಮ್ಮ ದಿನನಿತ್ಯದ ಜೀವನದಲ್ಲಿ ವಿಜ್ಞಾನದ ಮಹತ್ವ ಅಳವಡಿಸಿಕೊಳ್ಳಬೇಕು ಎಂದರು.
ಕೃತಕ ಬುದ್ಧಿಮತ್ತೆ, ರೋಬೋಟಿಕ್ಸ್, ಸಾಮಾಜಿಕ ಜಾಲತಾಣಗಳಾದ ಯುಟ್ಯೂಬ್, ಇನ್‌ಸ್ಟಾಗ್ರಾಮ್‌ನಲ್ಲಿ ಸಿಗುವಂತಹ ವಿಜ್ಞಾನದ ಮಹತ್ವದ ಮಾಹಿತಿಗಳನ್ನು ಬಳಸಿಕೊಂಡು ಉತ್ತಮ ವಿದ್ಯಾಭ್ಯಾಸದ ಕಡೆ ಗಮನ ನೀಡಬೇಕು. ವಿಜ್ಞಾನದಿಂದ ವೈಯುಕ್ತಿಕ ಅಭಿವೃದ್ಧಿ ಅಲ್ಲದೆ ದೇಶದ ಅಭಿವೃದ್ಧಿಯು ಸಹ ಸಾಧ್ಯ ಎಂದು ವಿದ್ಯಾರ್ಥಿಗಳಿಗೆ ತಿಳಿಸಿದರು.
ಕಾರ್ಯಕ್ರಮದಲ್ಲಿ ರಾಷ್ಟ್ರೀಯ ವಿಜ್ಞಾನ ದಿನದ ಅಂಗವಾಗಿ ಸರ್ಕಾರದ ಆದೇಶದಂತೆ ವಿಜ್ಞಾನ ಪ್ರತಿಜ್ಞಾ ವಿಧಿಯನ್ನು ಬೋಧಿಸಲಾಯಿತು.
ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕಿ ಬಿ.ಉಮಾದೇವಿ ಅವರು ಮಾತನಾಡಿ, ಪ್ರೌಢ ಹಂತದಿAದಲೇ ವಿಜ್ಞಾನದ ಕಡೆಗೆ ಆಸಕ್ತಿ ತೋರಿಸಿ ವೈಜ್ಞಾನಿಕ ಮನೋಭಾವ ಬೆಳೆಸಿಕೊಂಡು ವಿದ್ಯಾಭ್ಯಾಸದ ಬಗ್ಗೆ ಹೆಚ್ಚಾಗಿ ಗಮನ ನೀಡಬೇಕು ಎಂದರು.
ಕರ್ನಾಟಕ ಪಬ್ಲಿಕ್ ಶಾಲೆಯ ಉಪ ಪ್ರಾಂಶುಪಾಲರಾದ ಜೆ.ಭಾರತಿ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಇಂತಹ ಕಾರ್ಯಕ್ರಮಗಳು ವಿದ್ಯಾರ್ಥಿಗಳ ಜೀವನದಲ್ಲಿ ಬದಲಾವಣೆ ತರಲು ಹಾಗೂ ಆಸಕ್ತಿಕರ ವಿಷಯಗಳ ಬಗ್ಗೆ ತಿಳಿದುಕೊಳ್ಳಲು ಸಹಾಯಕವಾಗುತ್ತವೆ ಎಂದು ಹೇಳಿದರು.
ಸಂಪನ್ಮೂಲ ವ್ಯಕ್ತಿಗಳಾದ ಎಚ್ ಪೀರ್ ಭಾಷಾ ಅವರು ಮಾತನಾಡಿ, ವಿಜ್ಞಾನ ತಂತ್ರಜ್ಞಾನ ಬದುಕನ್ನು ಹಸನಗೊಳಿಸುತ್ತದೆ. ತಂತ್ರಜ್ಞಾನವು ಕೃಷಿ ಆರೋಗ್ಯ ಮತ್ತು ವೈದ್ಯಕೀಯ ಕ್ಷೇತ್ರದ ಅಭಿವೃದ್ಧಿಗೆ ಸಹಾಯಕವಾಗಿದೆ. ವಿಜ್ಞಾನ ನಮ್ಮೆಲ್ಲರ ಜೀವನದಲ್ಲಿ ಬಹಳ ಪ್ರಾಮುಖ್ಯತೆಯನ್ನು ಪಡೆದಿದೆ ಹಾಗೂ ಸಿ.ವಿ.ರಾಮನ್ ಅವರ ಜೀವನ ಅವರ ಬಾಲ್ಯ ವಿದ್ಯಾಭ್ಯಾಸದ ಬಗ್ಗೆ ವಿವರವಾಗಿ ಪಿಪಿಟಿ ಮುಖಾಂತರ ತಿಳಿಸಿದರು.
ಮತ್ತೋರ್ವ ಸಂಪನ್ಮೂಲ ವ್ಯಕ್ತಿಗಳಾದ ಎಸ್.ಎಂ.ಹಿರೇಮಠ್ ಮಾತನಾಡಿ, ಸಿ.ವಿ ರಾಮನ್ ಅವರ ಜೀವನದಲ್ಲಿ ನಡೆದ ಘಟನೆಗಳನ್ನು ವಿದ್ಯಾರ್ಥಿಗಳಿಗೆ ತಿಳಿಸಿ ಅವರ ಆದರ್ಶ ಹಾಗೂ ಸಿದ್ಧಾಂತಗಳನ್ನು ವಿದ್ಯಾರ್ಥಿಗಳು ಅಳವಡಿಸಿಕೊಳ್ಳಬೇಕು ಎಂದರು.
ಈ ಸಂದರ್ಭದಲ್ಲಿ ಗಣಿತ ವಿಷಯದ ಪರಿವೀಕ್ಷಕರಾದ ಬಸವರಾಜ್, ನೋಡಲ್ ಅಧಿಕಾರಿಗಳಾದ ರಾಮಚಂದ್ರರೆಡ್ಡಿ.ಜಿ ಸೇರಿದಂತೆ ಶಾಲಾ ಶಿಕ್ಷಕರು, ಶಾಲಾ ವಿದ್ಯಾರ್ಥಿಗಳು ಇನ್ನಿತರರು ಉಪಸ್ಥಿತರಿದ್ದರು.
----------
ವೈಜ್ಞಾನಿಕ ಪ್ರಗತಿಗೆ ಯುವಕರನ್ನು ಪ್ರೇರೇಪಿಸಿ: ಡಾ ಮೊಹ್ಮದ್ ಮುಸ್ತಫಾ
ಬಳ್ಳಾರಿ,ಫೆ.28(ಕರ್ನಾಟಕ ವಾರ್ತೆ):
ದೇಶದ ಉತ್ತಮ ಭವಿಷ್ಯಕ್ಕಾಗಿ ವೈಜ್ಞಾನಿಕ ಪ್ರಗತಿಯನ್ನು ಮುಂದುವರೆಸಲು ಯುವ ಮನಸ್ಸುಗಳನ್ನು ಪ್ರೇರೇಪಿಸುವ ಗುರಿಯನ್ನು ನಾವೆಲ್ಲರೂ ಹೊಂದಬೇಕು ಎಂದು ಪುಣೆಯ ಇಂಡಿಯನ್ ಇನ್ಸಿ÷್ಟಟ್ಯೂಟ್ ಆಫ್ ಸೈನ್ಸ್ ಆ್ಯಂಡ್ ಎಜುಕೇಶನ್ ರಿಸರ್ಚ್ ಸಂಸ್ಥೆಯ ಪ್ರಾಧ್ಯಾಪಕರಾದ ಡಾ ಮೊಹ್ಮದ್ ಮುಸ್ತಫಾ ಹೇಳಿದರು.
ರಾಷ್ಟಿçÃಯ ವಿಜ್ಞಾನ ದಿನದ ಅಂಗವಾಗಿ ಆಯೋಜಿಸಿದ್ದ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಜೀವ ವಿಜ್ಞಾನ ಸಭಾಂಗಣದಲ್ಲಿ “ವಿಜ್ಞಾನ ಮತ್ತು ನಾವೀನ್ಯತೆಯಲ್ಲಿ ಜಾಗತಿಕ ನಾಯಕತ್ವಕ್ಕಾಗಿ ಭಾರತೀಯ ಯುವಕರ ಸಬಲೀಕರಣ’’ ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸದಲ್ಲಿ ಅವರು ಮಾತನಾಡಿದÀರು.
ನೂತನ ಆವಿಷ್ಕಾರಗಳು ವಿಜ್ಞಾನ ಕ್ಷೇತ್ರದಲ್ಲಿ ಹೊಸ ಮೈಲಿಗಲ್ಲುಗಳಿಂದ ಗುರುತಿಸಲ್ಪಡುತ್ತವೆ. ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ವಿದ್ಯಾರ್ಥಿಗಳು ಹೆಚ್ಚಾಗಿ ತೊಡಗಿಸಿಕೊಳ್ಳಬೇಕು. ಜೀವನದ ಗುಣಮಟ್ಟವನ್ನು ಸುಧಾರಿಸುವಲ್ಲಿ ವೈಜ್ಞಾನಿಕ ಸಂಶೋಧನೆಯ ಪ್ರಾಮುಖ್ಯತೆ ಬಗ್ಗೆ ವಿಸ್ತೃತವಾಗಿ ತಿಳಿಸಿದರು.
ವಿಶ್ವವಿದ್ಯಾಲಯದ ಕುಲಸಚಿವರಾದ ಎಸ್.ಎನ್ ರುದ್ರೇಶ್ ಮಾತನಾಡಿ, ವಿದ್ಯಾರ್ಥಿಗಳು ಕಲಿಕೆಯಲ್ಲಿ ವೈಜ್ಞಾನಿಕ ಮನೋಭಾವವನ್ನು ಹೊಂದಿರಬೇಕು. ವಿಜ್ಞಾನದ ಪರಂಪರೆಯು ಒಂದು ಸಾರ್ವತ್ರಿಕ ಅಭಿಯಾನದಂತೆ ಜಗತ್ತಿನಲ್ಲಿ ಪರಿಗಣಿಸಲಾಗಿದೆ ಎಂದು ಹೇಳಿದರು. ಡಾ. ಅಬ್ದುಲ್ ಕಲಾಂ, ಪ್ರೊ. ಸಿ.ವಿ.ರಾಮನ್‌ರಂತಹ ವ್ಯಕ್ತಿಗಳನ್ನು ಮಾದರಿಯಾಗಿ ವಿದ್ಯಾರ್ಥಿಗಳು ತಮ್ಮಲ್ಲಿ ಅಳವಡಿಕೊಳ್ಳಬೇಕು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ. ಎಂ. ಮುನಿರಾಜು ಮಾತನಾಡಿ, ದೇಶದ ಯುವಕರು ವಿಜ್ಞಾನ ಕ್ಷೇತ್ರದತ್ತ ಮತ್ತಷ್ಟು ಆಸಕ್ತಿ ಬೆಳೆಸಿಕೊಳ್ಳಬೇಕು. ದೇಶದ ಪ್ರತಿಷ್ಠಿತ ವಿಜ್ಞಾನಿಗಳಿಂದ ಸ್ಪೂರ್ತಿ ಪಡೆದು, ಹೊಸ ಅವಿಷ್ಕಾರಗಳಿಗೆ ಮುಂದಾಗಬೇಕು. ವೈಜ್ಞಾನಿಕ ಸಂಶೋಧನೆ ಮತ್ತು ತಾಂತ್ರಿಕ ಪ್ರಗತಿಯಲ್ಲಿ ನಮ್ಮ ದೇಶವು ವಿಶ್ವಕ್ಕೆ ಮಾದರಿಯಾಗುವ ನಿಟ್ಟಿನಲ್ಲಿ ನಾವು-ನೀವೆಲ್ಲ ಕೆಲಸ ಮಾಡೋಣ ಎಂದು ವಿದ್ಯಾರ್ಥಿಗಳಿಗೆ ಹೇಳಿದರು.
ರಾಜ್ಯ ಸರ್ಕಾರದ ನಿರ್ದೇಶನದಂತೆ ಕಾರ್ಯಕ್ರಮದಲ್ಲಿ ನೆರೆದಿದ್ದ ಎಲ್ಲರೂ ಬೆಳಿಗ್ಗೆ 10.30ಕ್ಕೆ ವಿಜ್ಞಾನ ಪ್ರತಿಜ್ಞಾ ವಿಧಿಯನ್ನು ಸ್ವೀಕರಿಸಿದರು.
ಈ ಸಂದರ್ಭದಲ್ಲಿ ವಿಶ್ವವಿದ್ಯಾಲಯದ ಜೀವ ವಿಜ್ಞಾನದ ವಿಭಾಗದ ಡೀನರಾದ ಪ್ರೊ. ಶಶಿಕಾಂತ್ ಮಜಗಿ, ಶುದ್ಧ ವಿಜ್ಞಾನ ನಿಕಾಯದ ಡೀನರಾದ ಪ್ರೊ. ಹನುಮೇಶ್ ವೈದ್ಯ, ಕಾರ್ಯಕ್ರಮ ಸಂಯೋಜಕರಾದ ಪ್ರೊ. ಕೆ.ಎಸ್. ಲೊಕೇಶ್ ಸೇರಿದಂತೆ ವಿವಿಧ ನಿಕಾಯಗಳ ಡೀನರು, ವಿಭಾಗಗಳ ಮುಖ್ಯಸ್ಥರು, ಬೋಧಕರು, ಸಂಶೋಧನಾ ವಿದ್ಯಾರ್ಥಿಗಳು, ಬೋಧಕೇತರ ಸಿಬ್ಬಂದಿ ಮತ್ತು ವಿಜ್ಞಾನ ವಿಭಾಗಗಳ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
----------
ಜಲ ಜೀವನ್ ಮಿಷನ್ ಹಾಗೂ ಸ್ವಚ್ಛ್ ಭಾರತ್ ಮಿಷನ್ ಅರಿವು ಕಾರ್ಯಕ್ರಮ
ಬಳ್ಳಾರಿ.ಫೆ.28(ಕರ್ನಾಟಕ ವಾರ್ತೆ):
ಜಲಜೀವನ್ ಮಿಷನ್ ಹಾಗೂ ಸ್ವಚ್ಛ್ ಭಾರತ್ ಮಿಷನ್ ಯೋಜನೆಗಳ ಕುರಿತು ಗ್ರಾಮೀಣ ಜನರಲ್ಲಿ ಅರಿವು ಮೂಡಿಸಲು ಸುರಭಿ ಸಂಸ್ಥೆಯ ಮೂಲಕ ವಿವಿಧ ಮಾಹಿತಿ, ಶಿಕ್ಷಣ ಮತ್ತು ಸಂವಹನ ಚಟುವಟಿಕೆ ಕಾರ್ಯಕ್ರಮವನ್ನು ಶುಕ್ರವಾರ ತಾಲ್ಲೂಕು ಪಂಚಾಯತಿ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ಪಂಚಾಯತಿ ಮುಖ್ಯ ಯೋಜನಾಧಿಕಾರಿಗಳಾದ ವಾಗೇಶ್ ಶಿವಾಚಾರ್ಯ ಅವರು ವಹಿಸಿಕೊಂಡಿದ್ದರು.
ತಾಲ್ಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಮಡಗಿನ ಬಸಪ್ಪ, ರಾಜ್ಯ ಗ್ರಾಮೀಣಾ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಸಂಪನ್ಮೂಲ ವ್ಯಕ್ತಿ ಡಾ.ಅಚಿತ್ ರಾವ್, ಮೈಸೂರಿನ ಎಸ್‌ಐಆರ್‌ಡಿ ಕೃಷ್ಣ ಕುಮಾರ್ ಅವರು ಸೇರಿದಂತೆ ಸಹಾಯಕ ಲೆಕ್ಕಾಧಿಕಾರಿಗಳು, ಪ್ರಭಾರೆ ಸಹಾಯಕ ನಿರ್ದೇಶಕರು(ಪಂ.ರಾಜ್), ಗಿWSಅ/ಗ್ರಾಮ ಪಂಚಾಯತಿ ಅಧ್ಯಕ್ಷರು, ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಮತ್ತು ತಾಲ್ಲೂಕು ಪಂಚಾಯತಿ ಇತರೇ ಅಧಿಕಾರಿ/ಸಿಬ್ಬಂದಿಗಳು ಉಪಸ್ಥಿತರಿದ್ದರು.
----------
ಮಾ.01 ರಂದು ವಿವಿಧ ಮಹನೀಯರ ಜಯಂತಿಯ ಪೂರ್ವಭಾವಿ ಸಭೆ
ಬಳ್ಳಾರಿ,ಫೆ.28(ಕರ್ನಾಟಕ ವಾರ್ತೆ):
ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಜಿಲ್ಲಾ ಕೇಂದ್ರದಲ್ಲಿ ಮಾ.12 ರಂದು ರೇಣುಕಾರ್ಚಾಯ, ಮಾ.14 ರಂದು ಯೋಗಿನಾರೇಯಣ ಯತೀಂದ್ರ ಜಯಂತಿ ಹಾಗೂ ಮಾ.28 ರಂದು ಅಗ್ನಿಬನ್ನಿರಾಯ ಜಯಂತಿ ಆಚರಣೆ ಕುರಿತು ಮಾ.01 ರಂದು ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ಏರ್ಪಡಿಸಲಾಗಿದೆ.
ಮಾ.01 ರಂದು ಮದ್ಯಾಹ್ನ 01 ಗಂಟೆಗೆ ರೇಣುಕಾರ್ಚಾಯ ಜಯಂತಿ, 01.15 ಗಂಟೆಗೆ ಯೋಗಿನಾರೇಯಣ ಯತೀಂದ್ರ ಜಯಂತಿ, 01.30 ಗಂಟೆಗೆ ಅಗ್ನಿಬನ್ನಿರಾಯ ಜಯಂತಿ ಆಚರಣೆ ಕುರಿತು ಪೂರ್ವಭಾವಿ ಸಭೆ ನಡೆಯಲಿದೆ.
ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್ ಅವರು ಅಧ್ಯಕ್ಷತೆ ವಹಿಸುವರು.
ಸಭೆಗೆ ಸಮುದಾಯದ ಮುಖಂಡರು, ಜಿಲ್ಲಾ ಮಟ್ಟದ ಅಧಿಕಾರಿಗಳು ತಪ್ಪದೇ ಹಾಜರಾಗಬೇಕು ಎಂದು ಕನ್ನಡ ಮತ್ತು ಸಂಸ್ಕçತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ಅವರು ತಿಳಿಸಿದ್ದಾರೆ.
-----------
ಮಾ.02 ರಂದು ವಿದ್ಯುತ್ ವ್ಯತ್ಯಯ
ಬಳ್ಳಾರಿ,ಫೆ.28(ಕರ್ನಾಟಕ ವಾರ್ತೆ):
ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-1 ರ ವ್ಯಾಪ್ತಿಯ 220/110/11ಕೆ.ವಿ ಅಲ್ಲಿಪುರ ವಿದ್ಯುತ್ ಉಪ-ಕೇಂದ್ರದಲ್ಲಿ ವಿದ್ಯುತ್ ತುರ್ತು ನಿರ್ವಹಣೆ ಕಾರ್ಯ ಕೈಗೊಳ್ಳುತ್ತಿರುವುರಿಂದÀ ಮಾ.02 ರಂದು ಬೆಳಿಗ್ಗೆ 09 ಗಂಟೆಯಿAದ ಸಂಜೆ 05 ಗಂಟೆಯವರೆಗೆ ಎಫ್-72 ಫೀಡರ್ ಮಾರ್ಗದ ಸೂರ್ಯ ಕಾಲೋನಿ, ರಹಿಮಬಾದ್ ಕಾಲೋನಿ, ನಂದಿ ಕಾಲೋನಿ, ಹೆಚ್.ಆರ್.ಜಿ ಕಾಲೋನಿ ಸೇರಿದಂತೆ ಮುಂತಾದ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ವಿದ್ಯುತ್ ಗ್ರಾಹಕರು ಮತ್ತು ಸಾರ್ವಜನಿಕರು ಸಹಕರಿಸಬೇಕು ಎಂದು ನಗರ ಉಪ-ವಿಭಾಗ-1 ಜೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
------------
ವ್ಯಕ್ತಿ ನಾಪತ್ತೆ: ಪತ್ತೆಗೆ ಮನವಿ
ಬಳ್ಳಾರಿ,ಫೆ.28(ಕರ್ನಾಟಕ ವಾರ್ತೆ):
ನಗರದ ಶ್ರೀರಾಂಪುರ ಕಾಲೋನಿ, 3ನೇ ವಾರ್ಡ್ ಏರಿಯಾದ ನಿವಾಸಿ ಬಾಬು.ಬಿ ಎನ್ನುವ 25 ವರ್ಷದ ವ್ಯಕ್ತಿಯು ಫೆ.27 ರಂದು ಕಾಣೆಯಾಗಿದ್ದು, ಈ ಕುರಿತು ಬ್ರೂಸ್‌ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪತ್ತೆಗೆ ಸಹಕರಿಸಬೇಕು ಎಂದು ಪೋಲಿಸ್ ಸಬ್ ಇನ್ಸ್ಪೆಕ್ಟರ್ ಅವರು ತಿಳಿಸಿದ್ದಾರೆ.
ಚಹರೆ ಗುರುತು:
ಅಂದಾಜು 5.2 ಅಡಿ ಎತ್ತರ, ಕೋಲುಮುಖ, ಕಪ್ಪು ಮೈಬಣ್ಣ, ತೆಳುವಾದ ಮೈಕಟ್ಟು, ಕಪ್ಪು ಕೂದಲು ಮತ್ತು ಮುಖದಲ್ಲಿ ಚಿಕ್ಕದಾಗಿ ಮೀಸೆ ಹಾಗೂ ಗಡ್ಡ ಹೊಂದಿರುತ್ತಾನೆ. ಕಾಣೆಯಾದ ಸಂದರ್ಭದಲ್ಲಿ ಹಳದಿ ಬಣ್ಣದ ಟೀ ಶರ್ಟ್ ಮತ್ತು ನೀಲಿ ಬಣ್ಣದ ಜೀನ್ಸ್ ಪ್ಯಾಂಟ್ ಧರಿಸಿರುತ್ತಾನೆ.
ವ್ಯಕ್ತಿಯ ಬಗ್ಗೆ ಸುಳಿವು ಸಿಕ್ಕಲ್ಲಿ ಬ್ರೂಸ್‌ಪೇಟೆ ಪೊಲೀಸ್ ಠಾಣೆಯ ದೂ.08392-272022 ಅಥವಾ ಪಿಐ ಮೊ.9480803045, 9480803081 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
---------
ಬಳ್ಳಾರಿ ಮಹಾನಗರ ಪಾಲಿಕೆ: ಪೌರಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ ಶಿಬಿರ
ಬಳ್ಳಾರಿ,ಫೆ.28(ಕರ್ನಾಟಕ ವಾರ್ತೆ):
ಆಯುರ್ವೇದ ಔಷಧಿಗಳನ್ನು ಬಳಸಬೇಕು. ಉಚಿತ ಆರೋಗ್ಯ ತಪಾಸಣೆ ಶಿಬಿರದಲ್ಲಿ ಭಾಗವಹಿಸಿ ಸದುಪಯೋಗ ಪಡೆದುಕೊಳ್ಳಬೇಕು ಎಂದು ಮಹಾನಗರ ಪಾಲಿಕೆಯ ಮಹಾಪೌರರಾದ ಮುಲ್ಲಂಗಿ ನಂದೀಶ್ ಅವರು ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆಯುಷ್ ಇಲಾಖೆ ಹಾಗೂ ಮಹಾನಗರ ಪಾಲಿಕೆ ಇವರ ಸಂಯುಕ್ತಾಶ್ರಯದಲ್ಲಿ ಪೌರ ಕಾರ್ಮಿಕರಿಗಾಗಿ ಮಹಾನಗರ ಪಾಲಿಕೆಯ ಸಭಾಂಗಣದಲ್ಲಿ ಗುರುವಾರ ಏರ್ಪಡಿಸಿದ್ದ ಉಚಿತ ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.
ಜಿಲ್ಲಾ ಆಯುಷ್ ಇಲಾಖೆ ಅಧಿಕಾರಿ ಡಾ.ಸರಳಾದೇವಿ ಬಿ.ಎಸ್ ಅವರು ಮಾತನಾಡಿ, ಜಿಲ್ಲೆಯ ಪೌರಕಾರ್ಮಿಕರು ಆಯರ್ವೇದ ಔಷಧಿಗಳನ್ನು ಬಳಸುವುದರಿಂದ ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು ಮತ್ತು ವ್ಯಾದಿ ಪ್ರತಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಬಹುದಾದ ಔಷಧಿಗಳು ಆಯುರ್ವೇದದಲ್ಲಿ ಇದ್ದು, ಅವುಗಳನ್ನು ನಿಯಮಿತವಾಗಿ ಬಳಸಲು ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ಪೌರಕಾರ್ಮಿಕರಿಗೆ ಉಚಿತ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರದಲ್ಲಿ ಸುಮಾರು 288 ಮಧುಮೇಹ ಮತ್ತು ರಕ್ತ ಛಾಪದ ಪರೀಕ್ಷೆ ಮಾಡಿ ಔಷಧಿಗಳನ್ನು ಉಚಿತವಾಗಿ ವಿತರಿಸಲಾಯಿತು.
ಈ ಸಂದರ್ಭದಲ್ಲಿ ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ, ಮಹಾನಗರ ಪಾಲಿಕೆಯ ಆಯುಕ್ತರು, ಮಹಾನಗರ ಪಾಲಿಕೆಯ ಪರಿಸರ ಆರೋಗ್ಯಾಧಿಕಾರಿ ಮುನಾಫ್ ಪಟೇಲ್, ಆಯುಷ್ ವೈದ್ಯರಾದ ಡಾ.ತಿಪ್ಪೇಸ್ವಾಮಿ, ಡಾ.ರಾಘವೇಂದ್ರ ಆಚಾರಿ, ಡಾ.ವಿಜಯೇಂದ್ರಾಚಾರ್, ಡಾ.ಟಿ.ಫಣೀಂಧರ, ಡಾ.ಶ್ರೀಗುರು ಮುರುಗೇಶ್, ಡಾ.ಕಲ್ಯಾಣಿ, ಡಾ.ರಾಜೇಶ್ವರಿ, ಡಾ.ಆರುಂಧತಿ ಮುಂತಾದ ಗಣ್ಯರು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.
----------
ಕುರೆಕುಪ್ಪ; ವೈಯಕ್ತಿಕ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
ಕುರೇಕುಪ್ಪ ಪುರಸಭೆ ವತಿಯಿಂದ 2019-2020 ಮತ್ತು 2022-23 ನೇ ಸಾಲಿನ ಎಸ್‌ಎಫ್‌ಸಿ ಮುಕ್ತನಿಧಿ ಯೋಜನೆಯಡಿ ಪುರಸಭೆ ವ್ಯಾಪ್ತಿಯ ಬರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಕಲ್ಯಾಣಕ್ಕಾಗಿ ಕಾಯ್ದಿರಿಸಿದ ಶೇ.24.10 ಮತ್ತು ಶೇ.5 ರಲ್ಲಿ ವೈಯಕ್ತಿಕ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಕುರೆಕುಪ್ಪ ಪುರಸಭೆಯ ಮುಖ್ಯಾಧಿಕಾರಿ ತಿಳಿಸಿದ್ದಾರೆ.
ಸೌಲಭ್ಯದ ವಿವರ:
ಪುರಸಭೆ ಕುರೇಕುಪ್ಪ ವ್ಯಾಪ್ತಿಯಲ್ಲಿ ಬರುವ ಪ.ಜಾತಿ ಮತ್ತು ಪ.ಪಂಗಡ ಫಲಾನುಭವಿಗಳಿಗೆ ಅಡುಗೆ ಅನಿಲ ಸಂಪರ್ಕ ಪಡೆಯಲು ಸೌಲಭ್ಯ.
ಪುರಸಭೆ ಕುರೇಕುಪ್ಪ ವ್ಯಾಪ್ತಿಯಲ್ಲಿ ಬರುವ ಪ.ಜಾತಿ ಮತ್ತು ಪ.ಪಂಗಡ ಅರ್ಹ ಮಹಿಳಾ ಮತ್ತು ಪುರುಷ ಫಲಾನುಭವಿಗಳಿಗೆ ಲಘು ವಾಹನ ಹಾಗೂ ಭಾರಿ ವಾಹನ ತರಭೇತಿ ಮತ್ತು ಪರವಾನಿಗೆ ನೀಡುವುದು.
ಪುರಸಭೆ ಕುರೇಕುಪ್ಪ ವ್ಯಾಪ್ತಿಯಲ್ಲಿ ಬರುವ ಪ.ಪಂಗಡ ಹಾಗೂ ವಿಶೇಷ ಚೇತನ ಫಲಾನುಭವಿಗಳಿಗೆ ಕೃತಕ ಅಂಗ ಜೋಡಣೆಗಾಗಿ ಸಹಾಯ ಧನ ನೀಡುವುದು. ಹಾಗೂ ಸಾಧಕ ಸಕಲಕೆಗಳನ್ನು ಪಡೆಯಲು ಸಹಾಯ ಧನ. (ಎಂ.ಆರ್.ಕಿಟ್, ಊರುಗೋಲು, ಇಯರಿಂಗ್ ಹೆಡ್ಸ್, ವಿಲ್ ಛರ‍್ಸ್ ಇತ್ಯಾದಿ.)
ಕುರೇಕುಪ್ಪ ಪುರಸಭೆ ವ್ಯಾಪ್ತಿಯ ವಿಶೇಷ ಚೇತನರಿಗೆ ಯಂತ್ರಚಾಲಿತ ಶ್ರೀಚಕ್ರ ವಾಹನ ಸೌಲಭ್ಯ.
ಆಸಕ್ತ ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲಾತಿಗಳೊಂದಿಗೆ ಮಾ.14 ರೊಳಗಾಗಿ ಅರ್ಜಿ ಸಲ್ಲಿಸಬೇಕು. ಅರ್ಜಿಗಳನ್ನು ಮಾ.13 ರವರೆಗೆ ಪುರಸಭೆ ಕಚೇರಿಯಲ್ಲಿ ಪಡೆಯಬಹುದು.
ತಡವಾಗಿ ಬಂದ ಅಪೂರ್ಣ ದಾಖಲಾತಿ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ ಹಾಗೂ ಹಿಂಬರಹ ನೀಡದೇ ತಿರಸ್ಕರಿಸಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಕುರೆಕುಪ್ಪ ಪುರಸಭೆ ಕಚೇರಿಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
---------
ಗುರುವಾರ, ಫೆಬ್ರವರಿ 27, 2025
ಬಳ್ಳಾರಿ: ಮಾ.08 ರಂದು ಬುಡಕಟ್ಟು ಉತ್ಸವ ಆಚರಣೆ | ಅಚ್ಚುಕಟ್ಟಾಗಿ ಆಯೋಜಿಸಲು ಸಿದ್ಧತೆ ಕೈಗೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್ ಸೂಚನೆ
ಬಳ್ಳಾರಿ,ಫೆ.27(ಕರ್ನಾಟಕ ವಾರ್ತೆ):
ಜಿಲ್ಲೆಯಲ್ಲಿ ಮಾ.08 ರಂದು ನಡೆಯುವ ಬುಡಕಟ್ಟು ಉತ್ಸವ ಕಾರ್ಯಕ್ರಮವನ್ನು ಅರ್ಥಪೂರ್ಣ ಹಾಗೂ ಅಚ್ಚುಕಟ್ಟಾಗಿ ಆಯೋಜಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್ ಅವರು ಹೇಳಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಏರ್ಪಡಿಸಿದ್ದ ಬುಡಕಟ್ಟು ಉತ್ಸವ ಕಾರ್ಯಕ್ರಮ ಆಯೋಜನೆಯ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಬುಡಕಟ್ಟು ಉತ್ಸವ ಕಾರ್ಯಕ್ರಮವನ್ನು ಮಾ.08 ರಂದು ಬೆಳಿಗ್ಗೆ 9ಕ್ಕೆ ನಗರದ ಮುನ್ಸಿಪಾಲ್ ಕಾಲೇಜು ಮೈದಾನದಲ್ಲಿ ಆಚರಿಸಲಾಗುವುದು. ಶಿಷ್ಠಾಚಾರದ ನಿಯಮಗಳಂತೆ ಬುಡಕಟ್ಟು ಉತ್ಸವ ಸಮಾರಂಭದ ಆಹ್ವಾನ ಪತ್ರಿಕೆ ಮುದ್ರಿಸಿ, ಆಹ್ವಾನ ಪತ್ರಿಕೆಗಳನ್ನು ಜನಪ್ರತಿನಿಧಿಗಳಿಗೆ, ಗಣ್ಯರಿಗೆ ವಿತರಿಸಲು ಕ್ರಮವಹಿಸಬೇಕು ಎಂದರು.
ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲು ವಿವಿಧ ಇಲಾಖೆಗಳು ಸಮನ್ವಯತೆಯಿಂದ ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸಿ ಬುಡಕಟ್ಟು ಉತ್ಸವ ಆಚರಿಸಬೇಕು. ವಿವಿಧ ಇಲಾಖೆಯ ಅಧಿಕಾರಿಗಳಿಗೆ ವಹಿಸಿದ ಜವಾಬ್ದಾರಿಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಸೂಚನೆ ನೀಡಿದರು.
ಬುಡಕಟ್ಟು ಉತ್ಸವ ಆಚರಣೆಗೆ ಸಂಬAಧಿಸಿದAತೆ ಸ್ವಾಗತ, ಶಿಷ್ಠಾಚಾರ, ಆಹ್ವಾನ ಪತ್ರಿಕೆ ಹಾಗೂ ವೇದಿಕೆ ಸಮಿತಿ, ಸಾಂಸ್ಕೃತಿಕ ಕಾರ್ಯಕ್ರಮಗಳ ಸಮಿತಿ ಸೇರಿದಂತೆ ವಿವಿಧ ಸಮಿತಿಗಳನ್ನು ರಚಿಸಲಾಗಿದ್ದು, ಆಯಾ ಸಮಿತಿಯಲ್ಲಿರುವ ಅಧಿಕಾರಿಗಳು ತಮಗೆ ವಹಿಸಿದ ಕಾರ್ಯಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು ಎಂದು ತಿಳಿಸಿದರು.
ಬುಡಕಟ್ಟು ಉತ್ಸವ ಕಾರ್ಯಕ್ರಮ ನಡೆಯುವ ಮುನ್ಸಿಪಾಲ್ ಕಾಲೇಜು ಮೈದಾನ ಆವರಣವನ್ನು ಸ್ವಚ್ಛಗೊಳಿಸಿ ಕುಡಿಯುವ ನೀರಿನ ವ್ಯವಸ್ಥೆ ಮತ್ತು ಆಹಾರ ಹಾಗೂ ಗಣ್ಯರು ಕುಳಿತುಕೊಳ್ಳುವುದಕ್ಕೆ ಆಸನ ವ್ಯವಸ್ಥೆ ಮಾಡಬೇಕು ಎಂದು ಮಹಾನಗರ ಪಾಲಿಕೆ ಆಯುಕ್ತರಿಗೆ ನಿರ್ದೇಶನ ನೀಡಿದರು.
ಬುಡಕಟ್ಟು ಉತ್ಸವವನ್ನು ವ್ಯವಸ್ಥಿತವಾಗಿ ಏರ್ಪಡಿಸಲು ಕ್ರಮ ಕೈಗೊಳ್ಳುವಂತೆ ಪೊಲೀಸ್ ಇಲಾಖೆಗೆ ಸೂಚಿಸಿದ ಅವರು, ಇದಕ್ಕೆ ಬೇಕಾದ ಅಗತ್ಯ ಪೂರ್ವ ತಯಾರಿ ಮಾಡಿಕೊಳ್ಳಬೇಕು ಎಂದರು.
ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳಿಂದ ಜನಾಕಷÀðಣಿಯವಾಗಿ ಸಾಂಸ್ಕೃತಿಕ ಕಾರ್ಯಕ್ರಮಗಳು ಸ್ಥಳೀಯ ಹಾಗೂ ಇತರೆ ಜಿಲ್ಲೆಗಳ ಕಲಾವಿದರಿಂದ ವಿವಿಧ ಕಲಾ ಪ್ರಕಾರಗಳು, ಚಿತ್ರಕಲಾ/ಶಿಲ್ಪಾಕಲಾ ಪ್ರದರ್ಶನ, ಕರಕುಶಲ ಪ್ರದರ್ಶನ ಮತ್ತು ಮಾರಾಟ ಹಾಗೂ ಬುಡಕಟ್ಟು ಸಮುದಾಯದ ವೇಷಭೂಷಣ, ಆಭರಣಗಳ ಪ್ರದರ್ಶನ, ಆಹಾರ ಮೇಳ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ವ್ಯವಸ್ಥೆಗೊಳಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್ ಅವರು ಶಾಲಾ ಶಿಕ್ಷಣ ಇಲಾಖೆ, ಸಮಾಜ ಕಲ್ಯಾಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ನಂತರ ಅಂದು ಸಂಜೆ ನಗರದ ಮುನ್ಸಿಪಾಲ್ ಕಾಲೇಜು ಮೈದಾನದಲ್ಲಿ ಪ್ರಸ್ತುತಪಡಿಸುವ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಬೇಕು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಧಿಕಾರಿಗೆ ನಿರ್ದೇಶನ ನೀಡಿದರು.
ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ, ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ದಿವಾಕರ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಮಲ್ಲಿಕಾರ್ಜುನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ವಿಜಯ್ ಕುಮಾರ್, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕಿ ಬಿ.ಉಮಾದೇವಿ, ಮಹಾನಗರ ಪಾಲಿಕೆಯ ಆಯುಕ್ತರು ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು.
-----------
ಕಾರ್ಯಾಗಾರದಲ್ಲಿ ನ್ಯಾಯಾಧೀಶೆ ಕೆ.ಜಿ.ಶಾಂತಿ ಅಭಿಮತ | ವಿಶೇಷಚೇತನರಿಗೆ ಕಾನೂನು ಸೇವೆ ಒದಗಿಸಬೇಕು
ಬಳ್ಳಾರಿ,ಫೆ.27(ಕರ್ನಾಟಕ ವಾರ್ತೆ):
ಸಂವಿಧಾನದಲ್ಲಿ ಎಲ್ಲರೂ ಸಮಾನರು. ವಿಶೇಷವಾಗಿ ಮಕ್ಕಳು ಮತ್ತು ಮಾನಸಿಕ ಅಸ್ವಸ್ಥತೆ, ಬೌದ್ಧಿಕ ಅಂಗವಿಕಲತೆ ಹೊಂದಿರುವ ವ್ಯಕ್ತಿಗಳಿಗೆ ಕಾನೂನು ಸೇವೆ ನೀಡಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರೂ ಆದ ಕೆ.ಜಿ.ಶಾಂತಿ ಅವರು ಹೇಳಿದರು.
ಗುರುವಾರ, ನಗರದ ತಾಳೂರು ರಸ್ತೆಯ ಹೊಸ ನ್ಯಾಯಾಲಯ ಸಂರ್ಕೀಣದ 3 ನೇ ಮಹಡಿಯ ಸಭಾಂಗಣದಲ್ಲಿ ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ, ಕರ್ನಾಟಕ ರಾಜ್ಯ ಸೇವೆಗಳ ಪ್ರಾಧಿಕಾರ ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಇವರ ಸಂಯುಕ್ತಾಶ್ರಯದಲ್ಲಿ “ಮಕ್ಕಳಿಗಾಗಿ ಮಕ್ಕಳ ಸ್ನೇಹಿ ಕಾನೂನು ಸೇವೆಗಳ ಯೋಜನೆ 2024 ಮತ್ತು ಮಾನಸಿಕ ಅಸ್ವಸ್ಥಕ ಹೊಂದಿರುವ ವ್ಯಕ್ತಿ ಮತ್ತು ಬೌದ್ಧಿಕ ಅಂಗವಿಕಲತೆ ಹೊಂದಿರುವ ವ್ಯಕ್ತಿಗೆ ಕಾನೂನು ಸೇವೆಗಳ ಯೋಜನೆ 2024” ಕುರಿತು ಆಯೋಜಿಸಿದ್ದ ಒಂದು ದಿನ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.
ಅಂಗವಿಕಲ ಮತ್ತು ಮಾನಸಿಕ ಅಸ್ವಸ್ಥ ಮಕ್ಕಳು ಸಮಾಜದಲ್ಲಿ ಘನತೆ, ಗೌರವದಿಂದ ಬದುಕುವ ಹಕ್ಕಿದೆ. ಇಂತಹ ಮಕ್ಕಳಿಗಾಗಿ ಸೌಕರ್ಯಗಳನ್ನು ಪಡೆಯಲು ವಿಶೇಷವಾದ ಕಾನೂನುಗಳಿವೆ ಎಂದು ತಿಳಿಸಿದರು.
ಬಾಲ್ಯ ವಿವಾಹವಾದವರು, ಶಿಕ್ಷಣದಿಂದ ವಂಚಿತರಾದ ಮಕ್ಕಳು, ಅಂಗವಿಕಲ ಮಕ್ಕಳ ಸಮಸ್ಯೆಗಳನ್ನು ಪರಿಹರಿಸುವ ಕಾರ್ಯವಾಗಬೇಕು. ಇದಕ್ಕೆ ಸ್ಪಂದಿಸುವುದು ಪ್ರತಿಯೊಬ್ಬ ಪ್ರಜೆಯ ಕರ್ತವ್ಯ. ಇಂತಹ ಮಕ್ಕಳನ್ನು ಸರಿಯಾದ ರೀತಿಯಲ್ಲಿ ನೋಡಿಕೊಂಡು ಆತ್ಮವಿಶ್ವಾಸ ತುಂಬುವುದು ಪೋಷಕರ ಆದ್ಯ ಜವಬ್ದಾರಿಯಾಗಿದೆ ಎಂದರು.
ರಾಜ್ಯದಲ್ಲಿ ಅಂಗವಿಕಲತೆ ಹೊಂದಿರುವ ಶೇ.14.9 ಪುರುಷರು, ಶೇ.11.9 ಮಹಿಳೆಯರು ಹಾಗೂ ಮಾನಸಿಕ ಅಸ್ವಸ್ಥತೆ ಹೊಂದಿದ ಶೇ.2.41 ಪುರುಷರು, ಶೇ.2.01 ಮಹಿಳೆಯರು ಹಾಗೂ ಶೇ.0.89 ಮಕ್ಕಳು ಇದ್ದಾರೆ ಎಂದು ಮಾಹಿತಿ ನೀಡಿದರು.
ಕಾರ್ಯಾಗಾರದ ಅಧ್ಯಕ್ಷತೆ ವಹಿಸಿದ್ದ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ಎನ್.ಹೊಸಮನೆ ಅವರು ಮಾತನಾಡಿ, ನಮ್ಮ ಸಂವಿಧಾನದಲ್ಲಿ ಮಕ್ಕಳಿಗಾಗಿ ಮತ್ತು ಮಾನಸಿಕ ಅಸ್ವಸ್ಥತೆ, ಬೌದ್ಧಿಕ ಅಂಗವಿಕಲತೆ ಹೊಂದಿರುವ ವ್ಯಕ್ತಿಗಳಿಗೆ ವಿಶೇಷವಾದ ಕಾಯ್ದೆಗಳು ಇವೆ. ಸರಿಯಾದ ರೀತಿಯಲ್ಲಿ ಕಾನೂನು ಸೇವೆಗಳನ್ನು ಉಪಯೋಗಿಸಿಕೊಳ್ಳಬೇಕು ಎಂದರು.
ಈ ಸಂದರ್ಭದಲ್ಲಿ ನಿವೃತ್ತ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಹಡಗಲಿ ರಾಮು, ರೀಡ್ಸ್ ಸಂಸ್ಥೆಯ ನಿರ್ದೇಶಕರಾದ ತಿಪ್ಪೇಶ್ ಸೇರಿದಂತೆ ನ್ಯಾಯಾಲಯದ ಸಿಬ್ಬಂದಿಗಳು, ವಕೀಲರು ಹಾಗೂ ಇತರರು ಉಪಸ್ಥಿತರಿದ್ದರು.
----------
ಫೆ.28 ರಂದು ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಕಾರ್ಯಕ್ರಮ
ಬಳ್ಳಾರಿ,ಫೆ.27(ಕರ್ನಾಟಕ ವಾರ್ತೆ):
ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿ ಮತ್ತು ಜಿಲ್ಲಾ ಪಂಚಾಯತ್ ವತಿಯಿಂದ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಕಾರ್ಯಕ್ರಮವನ್ನು ಫೆ.28 ರಂದು ಬೆಳಿಗ್ಗೆ 10.30 ಕ್ಕೆ ಬಳ್ಳಾರಿ ತಾಲ್ಲೂಕಿನ ಮೋಕಾ ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಆಯೋಜಿಸಲಾಗಿದೆ.
ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮುಹಮ್ಮದ್ ಹಾರಿಸ್ ಸುಮೇರ್ ಅವರು ಕಾರ್ಯಕ್ರಮ ಉದ್ಘಾಟಿಸುವರು.
ಮೋಕಾ ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆಯ (ಪ್ರೌಢ ವಿಭಾಗ) ಉಪ ಪ್ರಾಂಶುಪಾಲರಾದ ಬಿ.ಭಾರತಿ ಅವರು ಅಧ್ಯಕ್ಷತೆ ವಹಿಸುವರು.
ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ವಾಗೀಶ್ ಶಿವಾಚಾರ್ಯ ಎಸ್.ಎಂ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಬಿ.ಉಮಾದೇವಿ, ಕ್ಷೇತ್ರ ಶಿಕ್ಷಣಾಧಿಕಾರಿ ನಯೀಮುರ್ ರೆಹಮಾನ್ ಕೆ.ಎಸ್, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಚೇರಿಯ ಗಣಿತ ವಿಷಯ ನಿರ್ವಾಹಕರಾದ ಬಸವರಾಜ.ಎಂ ಹಾಗೂ ಇತರರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ಸಂಪನ್ಮೂಲ ವ್ಯಕ್ತಿಗಳಾಗಿ ಸಿಂಧವಾಳ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ವಿಜ್ಞಾನ ಶಿಕ್ಷಕ ಹೆಚ್.ಪೀರ್ ಭಾಷಾ, ಮೋಕಾ ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆಯ (ಪ್ರೌಢ ವಿಭಾಗ) ಶಿಕ್ಷಕ ಎಸ್.ಎಂ ಹಿರೇಮಠ ಮತ್ತು ಜಿಲ್ಲಾ ಪಂಚಾಯತ್‌ನ ಜಿಲ್ಲಾ ಯೋಜನಾ ಸಂಯೋಜಕ ರಾಮ ಚಂದ್ರರೆಡ್ಡಿ ಜಿ.ಬಿ ಸೇರಿದಂತೆ ಶಾಲಾ ಸಿಬ್ಬಂದಿ ವರ್ಗ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.
------------
ಮಾ.03 ರಂದು ಮಹಾನಗರ ಪಾಲಿಕೆಯ ಆಯ-ವ್ಯಯ ಮತ್ತು ಸಾಮಾನ್ಯ ಸಭೆ
ಬಳ್ಳಾರಿ,ಫೆ.27(ಕರ್ನಾಟಕ ವಾರ್ತೆ):
ಬಳ್ಳಾರಿ ಮಹಾನಗರ ಪಾಲಿಕೆಯ ಆಯ-ವ್ಯಯ ಮತ್ತು ಸಾಮಾನ್ಯ ಸಭೆಯನ್ನು ಮಹಾನಗರ ಪಾಲಿಕೆಯ ಮಹಾಪೌರರಾದ ಮುಲ್ಲಂಗಿ ನಂದೀಶ್ ಅವರ ಅಧ್ಯಕ್ಷತೆಯಲ್ಲಿ ಮಾ.03 ರಂದು ಬೆಳಿಗ್ಗೆ 10.30 ಗಂಟೆಗೆ ಜಿಲ್ಲಾ ಪಂಚಾಯತ್‌ನ ಹೊಸ ಅಬ್ದುಲ್ ನಜೀರ್ ಸಭಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಮಹಾನಗರ ಪಾಲಿಕೆಯ ಆಯುಕ್ತ ಜಿ.ಖಲೀಲ್ ಸಾಬ್ ಅವರು ತಿಳಿಸಿದ್ದಾರೆ.
------------
ಅನಾಮಧೇಯ ಮೃತ ವ್ಯಕ್ತಿಯ ವಾರಸುದಾರರ ಪತ್ತೆಗೆ ಮನವಿ
ಬಳ್ಳಾರಿ,ಫೆ.27(ಕರ್ನಾಟಕ ವಾರ್ತೆ):
ನಗರದ ಮೃತ್ಯುಂಜಯನಗರÀ ರೈಲ್ವೆ ಗೇಟ್ ಬ್ರಿಡ್ಜ್ ಹತ್ತಿರ ಹಣ್ಣಿನ ಅಂಗಡಿ ಪಕ್ಕದಲ್ಲಿ ಅಂದಾಜು 40 ರಿಂದ 45 ವರ್ಷದ ಅನಾಮಧೇಯ ವ್ಯಕ್ತಿಯು ಯಾವುದೋ ಖಾಯಿಲೆಯಿಂದ ಮಲಗಿದ್ದ ಸ್ಥಳದಲ್ಲಿಯೇ ಫೆ.25 ರಂದು ಮೃತಪಟ್ಟಿದ್ದು, ಈ ಕುರಿತು ಬಳ್ಳಾರಿ ಎ.ಪಿ.ಎಂ.ಸಿ ಯಾರ್ಡ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತನ ವಾರಸುದಾರರ ಪತ್ತೆಗೆ ಸಹಕರಿಸಬೇಕು ಎಂದು ಪೊಲೀಸ್ ಸಬ್‌ಇನ್ಸ್ಪೆಕ್ಟರ್ ಅವರು ಮನವಿ ಮಾಡಿದ್ದಾರೆ.
ಮೃತನ ಚಹರೆ:
ಎತ್ತರ 5.6 ಅಡಿ, ದುಂಡು ಮುಖ, ಕಪ್ಪು ಮೈಬಣ್ಣ,. ಸಾಧಾರಣ ತೆಳ್ಳನೆ ಮೈಕಟ್ಟು ಹೊಂದಿದ್ದು, ಕಪ್ಪು ಮಿಶ್ರಿತ ಮತ್ತು ಬಿಳಿ ಕೂದಲು, ಕಪ್ಪು ಮೀಸೆ ಮತ್ತು ಬಿಳಿ ಗಡ್ಡ ಇರುತ್ತದೆ.
ಮೃತ ದೇಹದ ಮೈಮೇಲೆ ಒಂದು ಮಾಸಿದ ಕಪ್ಪು, ನೀಲಿ ಮತ್ತು ಬಿಳಿ ಬಣ್ಣದ ಟೀ ಶರ್ಟ್ ಮತ್ತು ನಸಿ ಬಣ್ಣದ ಪ್ಯಾಂಟ್ ಧರಿಸಿರುತ್ತಾನೆ.
ಮೃತನ ವಾರಸುದಾರರ ಬಗ್ಗೆ ಮಾಹಿತಿ ಸಿಕ್ಕಲ್ಲಿ ಬಳ್ಳಾರಿ ಎ.ಪಿ.ಎಂ.ಸಿ ಯಾರ್ಡ ಪೋಲಿಸ್ ಠಾಣೆ ದೂರವಾಣಿ ಸಂಖ್ಯೆ; 08392-250033, 9480803096 ಅಥವಾ ಪೋಲಿಸ್ ಕಂಟ್ರೋಲ್ ರೂಂ, ಬಳ್ಳಾರಿ ದೂರವಾಣಿ ಸಂಖ್ಯೆ; 08392258100 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
---------
ಮಂಗಳವಾರ, ಫೆಬ್ರವರಿ 25, 2025
ಬಳ್ಳಾರಿ: ಫೆ.27 ರಂದು ರಾಜ್ಯ ಮಟ್ಟದ ಬುಡಕಟ್ಟು ಉತ್ಸವ ಆಯೋಜನೆಯ ಪೂರ್ವಭಾವಿ ಸಿದ್ಧತಾ ಸಭೆ
ಬಳ್ಳಾರಿ,ಫೆ.25(ಕರ್ನಾಟಕ ವಾರ್ತೆ):
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ 2024-25 ನೇ ಸಾಲಿನ ಪರಿಶಿಷ್ಟ ಪಂಗಡ ಉಪಯೋಜನೆಯಡಿ ರಾಜ್ಯ ಮಟ್ಟದ ಬುಡಕಟ್ಟು ಉತ್ಸವವನ್ನು ಮಾ.08 ರಂದು ಬಳ್ಳಾರಿಯಲ್ಲಿ ಆಯೋಜಿಸುವ ಕುರಿತು ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್ ಅಧ್ಯಕ್ಷತೆಯಲ್ಲಿ ಫೆ.27 ರಂದು ಬೆಳಿಗ್ಗೆ 11.30 ಗಂಟೆಗೆ ನಗರದ ಹಳೆಯ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ಆಯೋಜಿಸಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶನ ಬಿ.ನಾಗರಾಜ ಅವರು ತಿಳಿಸಿದ್ದಾರೆ.
-----------
ಫೆ.27 ರಂದು ಒಂದು ದಿನದ ಕಾರ್ಯಾಗಾರ
ಬಳ್ಳಾರಿ,ಫೆ.25(ಕರ್ನಾಟಕ ವಾರ್ತೆ):
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ವತಿಯಿಂದ “ಮಕ್ಕಳಿಗಾಗಿ ಮಕ್ಕಳ ಸ್ನೇಹಿ ಕಾನೂನು ಸೇವೆಗಳ ಯೋಜನೆ 2024 ಮತ್ತು ಮಾನಸಿಕ ಅಸ್ವಸ್ಥಕ ಹೊಂದಿರುವ ವ್ಯಕ್ತಿ ಮತ್ತು ಬೌದ್ಧಿಕ ಅಂಗವಿಕಲತೆ ಹೊಂದಿರುವ ವ್ಯಕ್ತಿಗೆ ಕಾನೂನು ಸೇವೆಗಳ ಯೋಜನೆ 2024” ಕುರಿತು ಫೆ.27 ರಂದು ಬೆಳಿಗ್ಗೆ 10 ಗಂಟೆಗೆ ನಗರದ ತಾಳೂರು ರಸ್ತೆಯ ಹೊಸ ನ್ಯಾಯಾಲಯ ಸಂಕೀರ್ಣದಲ್ಲಿ ಒಂದು ದಿನದ ತರಬೇತಿ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ಎನ್.ಹೊಸಮನೆ ಅವರು ತಿಳಿಸಿದ್ದಾರೆ.
-----------
ತೋಟಗಾರಿಕೆ ತರಬೇತಿಗಾಗಿ ಅರ್ಜಿ ಆಹ್ವಾನ
ಬಳ್ಳಾರಿ,ಫೆ.25(ಕರ್ನಾಟಕ ವಾರ್ತೆ):
ತೋಟಗಾರಿಕೆ ಇಲಾಖೆ ವತಿಯಿಂದ 2024-25ನೇ ಸಾಲಿಗೆ 10 ತಿಂಗಳ ತೋಟಗಾರಿಕೆ ತರಬೇತಿಗಾಗಿ ಜಿಲ್ಲೆಯ ರೈತ ಮಕ್ಕಳ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ತೋಟಗಾರಿಕೆ ಇಲಾಖೆಯ ಉಪನಿರ್ದೇಶಕ ಸಂತೋಷ್ ಸಪ್ಪಂಡಿ ಅವರು ತಿಳಿಸಿದ್ದಾರೆ.
ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲ್ಲೂಕಿನ ಮಾಲವಿ ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ 2025ರ ಮೇ 02 ರಿಂದ 2025 ರ ಫೆ.28 ರ ವರೆಗೆ ಒಟ್ಟು 10 ತಿಂಗಳ ತರಬೇತಿಯನ್ನು ನೀಡಲಾಗುತ್ತದೆ.
*ಅಭ್ಯರ್ಥಿಗಳ ಆಯ್ಕೆ ಗುರಿ:*
ಮಹಿಳೆಯರು 8, ಪುರುಷರು 16, ಪರಿಶಿಷ್ಟ ಜಾತಿ 03, ಪರಿಶಿಷ್ಟ ಪಂಗಡ 01 ಮತ್ತು ಇತರೆ 20 ಅಭ್ಯರ್ಥಿಗಳು ಸೇರಿ ಒಟ್ಟು 24 ಅಭ್ಯರ್ಥಿಗಳನ್ನು ಜಿಲ್ಲೆಯ ತೋಟಗಾರಿಕೆ ಉಪ ನಿರ್ದೇಶಕರು (ಜಿಪಂ) ಆಯ್ಕೆ ಮಾಡುತ್ತಾರೆ.
ಅಭ್ಯರ್ಥಿಗಳ ವಯೋಮಿತಿಯು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ 18 ವರ್ಷದಿಂದ 33 ವರ್ಷದೊಳಗೆ ಇರಬೇಕು. ಇತರರಿಗೆ 18 ವರ್ಷದಿಂದ 30 ವರ್ಷದೊಳಗೆ ಹಾಗೂ ಮಾಜಿ ಸೈನಿಕರಿಗೆ 33 ರಿಂದ 65 ವರ್ಷದೊಳಗಿರಬೇಕು.
ಅಭ್ಯರ್ಥಿಗಳು ಕನಿಷ್ಠ ಕನ್ನಡ ವಿಷಯಗಳೊಂದಿಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ತರಬೇತಿ ಹೊಂದಲು ಬಯಸುವ ಅಭ್ಯರ್ಥಿಯ ತಂದೆ-ತಾಯಿ, ಪೋಷಕರು ಕಡ್ಡಾಯವಾಗಿ ಜಮೀನು ಹೊಂದಿರಬೇಕು ಹಾಗೂ ಸ್ವಂತ ಸಾಗುವಳಿ ಮಾಡುತ್ತಿರಬೇಕು.
ಅರ್ಜಿಗಳನ್ನು ಮಾ.01 ರಿಂದ 31 ರ ವರೆಗೆ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಬಳ್ಳಾರಿ, ಇವರ ಕಚೇರಿಯಲ್ಲಿ ಪಡೆಯಬಹುದು ಅಥವಾ ಇಲಾಖಾ ವೆಬ್ ಸೈಟ್ https://horticulturedir.karnataka.gov.in ನಲ್ಲಿ ಡೌನ್‌ಲೋಡ್ ಮಾಡಿಕೊಳ್ಳಬಹುದು.
ಭರ್ತಿಮಾಡಿದ ಅರ್ಜಿಗಳನ್ನು ಏಪ್ರೀಲ್ 01 ರೊಳಗಾಗಿ ಇದೇ ಕಚೇರಿಗೆ ಸಲ್ಲಿಸಬೇಕು. ಏಪ್ರೀಲ್ 08 ರಂದು ಬೆಳಿಗ್ಗೆ 11 ಗಂಟೆಗೆ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿಯಲ್ಲಿ ಸಂದರ್ಶನ ನಡೆಯಲಿದೆ.
*ವಿಶೇಷ ಸೂಚನೆ:*
ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಸಮಿತಿಯು ಸರ್ಕಾರದ ಮೀಸಲಾತಿ ನಿಯಮವನ್ನು ಕಡ್ಡಾಯವಾಗಿ ಪಾಲಿಸಬೇಕು ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಅಭ್ಯರ್ಥಿಗಳ ಮೀಸಲಾತಿ ಮುಗಿದ ನಂತರ ಉಳಿಕೆ ಮೀಸಲಾತಿಗಳನ್ನು ಇತರೆ ಅಭ್ಯರ್ಥಿಗಳಿಗೆ ನೀಡಲಾಗುವುದು.
ಒಂದು ವೇಳೆ ಮೀಸಲಾದ ಸ್ಥಾನಗಳಿಗೆ ಅಭ್ಯರ್ಥಿಗಳು ಲಭ್ಯವಿಲ್ಲದಿದ್ದಲ್ಲಿ ಸಾಮಾನ್ಯ ಅಭ್ಯರ್ಥಿಗಳನ್ನು ಪರಿಗಣಿಸಲಾಗುವುದು. ಮಹಿಳಾ ಮೀಸಲಾತಿ (ಶೇ.33)ಯನ್ನು ನಿಯಮಾನುಸಾರ ಪಾಲಿಸತಕ್ಕದ್ದು. ಮಹಿಳಾ ಅಭ್ಯರ್ಥಿಗಳು ಲಭ್ಯವಿಲ್ಲದಿದ್ದಲ್ಲಿ ಅಂತಹ ಸ್ಥಾನಗಳಿಗೆ ಸಾಮಾನ್ಯ ವರ್ಗದ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಮೀಸಲಾತಿ ಕುರಿತು ಸರ್ಕಾರದ ಮೀಸಲಾತಿಗಳನ್ವಯ ಆಯ್ಕೆ ಸಮಿತಿ ನಿರ್ಧರಿಸಲಾಗುತ್ತದೆ.
ಮಾಜಿ ಸೈನಿಕ ಅಭ್ಯರ್ಥಿಗಳು ಆಯ್ಕೆಗೊಂಡಲ್ಲಿ ಈಗಾಗಲೇ ಇಲಾಖೆಯಲ್ಲಿ ರೈತ ಮಕ್ಕಳಿಗೆ ಕಾಯ್ದಿರಿಸಿರುವ ಗುರಿಗಳಿಗೆ ಹೆಚ್ಚುವರಿಯಾಗಿ ಸೇರ್ಪಡಿಸಲಾಗುವುದು. ಅಭ್ಯರ್ಥಿಗಳಿಗೆ ಉಚಿತವಾಗಿ ಕಲಿಕೆಯ ಎಲ್ಲಾ ತರಹದ ಅವಕಾಶಗಳನ್ನು ಕಲ್ಪಿಸಲಾಗುವುದು. ಆದರೆ, ವಸತಿ ನಿಲಯದಲ್ಲಿ ವಾಸ್ತವ್ಯದ ವ್ಯವಸ್ಥೆಯು ಕಡ್ಡಾಯ ಇರುವುದಿಲ್ಲ ಹಾಗೂ ಶಿಷ್ಯವೇತನ (ಸ್ಟೆöÊಫಂಡ್) ಕ್ಕೆ ಅವಕಾಶವಿರುವುದಿಲ್ಲ.
ಅಭ್ಯರ್ಥಿಯು ಮಾನಸಿಕವಾಗಿ ಮತ್ತು ದೈಹಿಕವಾಗಿ ಆರೋಗ್ಯವಂತರಾಗಿರಬೇಕು ಮತ್ತು ಅವರ ಆಯ್ಕೆಯು ತೋಟಗಾರಿಕೆ ಪ್ರಾಯೋಗಿಕ ತರಬೇತಿಯಲ್ಲಿ ಹಮ್ಮಿಕೊಳ್ಳುವ ಚಟುವಟಿಕೆಗಳನ್ನು ಸ್ವಾವಲಂಬಿಯಾಗಿ ನಿರ್ವಹಿಸಲು ಶಕ್ತನಾಗಿರಬೇಕು ಹಾಗೂ ಚಟುವಟಿಕೆ ನಿರ್ವಹಿಸಲು ಸಾಧ್ಯವಾಗದಂತಹ ಯಾವುದೇ ದೈಹಿಕ ನ್ಯೂನತೆಯಿಂದ ಮುಕ್ತರಾಗಿರಬೇಕು.
ಸಂದರ್ಶನಕ್ಕೆ ಹಾಜರಾಗುವ ಅಭ್ಯರ್ಥಿಗಳು ಎಲ್ಲಾ ಮೂಲ ದಾಖಲಾತಿಗಳೊಂದಿಗೆ ಹಾಜರಾಗಬೇಕು. ಇದಕ್ಕಾಗಿ ಪ್ರತ್ಯೇಕ ಸಂದರ್ಶನ ಪತ್ರ ಕಳುಹಿಸುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿ ಅಥವಾ ದೂ.08392-278588 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
--------
ಪ್ರವಾಸೋದ್ಯಮ ಇಲಾಖೆ: ಆಕ್ಷೇಪಣೆಗಳಿಗೆ ಆಹ್ವಾನ
ಬಳ್ಳಾರಿ,ಫೆ.25(ಕರ್ನಾಟಕ ವಾರ್ತೆ):
ಪ್ರವಾಸೋದ್ಯಮ ಇಲಾಖೆ ವತಿಯಿಂದ 2024-25ನೇ ಸಾಲಿನಲ್ಲಿ ಎಸ್‌ಸಿಎಸ್‌ಪಿ, ಟಿಎಸ್‌ಪಿ ಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಣ್ಣ ಉದ್ಯಮಿದಾರರನ್ನು ಉತ್ತೇಜಿಸಲು ಒಂದು ತಿಂಗಳ ಉದ್ಯಮಶೀಲತೆ ತರಬೇತಿ ಹಾಗೂ ತರಬೇತಿ ಪಡೆದ ಅಭ್ಯರ್ಥಿಗಳಿಗೆ ಮೊಬೈಲ್ ಕ್ಯಾಂಟಿನ್ ನಡೆಸಲು ಸಹಾಯಧನ ನೀಡಲು ಜಿಲ್ಲೆಗೆ ನಿಗಧಿಪಡಿಸಿದ ಗುರಿಯಂತೆ ಆರ್ಜಿ ಆಹ್ವಾನಿಸಿ, ತಾತ್ಕಾಲಿಕ ಆಯ್ಕೆ ಪಟ್ಟಿ ಸಿದ್ದಪಡಿಸಲಾಗಿದ್ದು, ಆಕ್ಷೇಪಣೆಗಳೆನಾದರೂ ಇದ್ದಲ್ಲಿ ಸಲ್ಲಿಸಬಹುದು ಎಂದು ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.
ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಹೊಸಪೇಟೆಯ ಕಮಲಾಪುರದ ಲೋಟಸ್ ಮಹಲ್ ಹತ್ತಿರದ ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕರ ಕಚೇರಿಯ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದೆ.
ಈ ಬಗ್ಗೆ ಆಕ್ಷೇಪಣೆಗಳು ಏನಾದರು ಇದ್ದಲ್ಲಿ ಮಾ.03 ರೊಳಗಾಗಿ ಇದೇ ಕಚೇರಿಗೆ ಸಲ್ಲಿಸಬೇಕು. ಅವಧಿ ಮೀರಿ ಬಂದ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ದೂ.08394-295640 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
---------
ವ್ಯಕ್ತಿ ಕಾಣೆ: ಪತ್ತೆಗೆ ಮನವಿ
ಬಳ್ಳಾರಿ,ಫೆ.25(ಕರ್ನಾಟಕ ವಾರ್ತೆ):
ತಾಲ್ಲೂಕಿನ ಸಂಗನಕಲ್ಲು ಗ್ರಾಮದ 2ನೇ ವಾರ್ಡ್ನ ಶಿವಬಸಮ್ಮ ಕಾಲೋನಿಯ ನಿವಾಸಿ ಹನುಮನಗೌಡ ಎನ್ನುವ 35 ವರ್ಷದ ವ್ಯಕ್ತಿಯು ಫೆ.22 ರಂದು ಕಾಣೆಯಾಗಿರುವ ಕುರಿತು ಬಳ್ಳಾರಿ ಗ್ರಾಮೀಣ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪತ್ತೆಗೆ ಸಹಕರಿಸಬೇಕೆಂದು ಎಂದು ಸಬ್ ಇನ್ಸ್ ಪೆಕ್ಟರ್ ಮನವಿ ಮಾಡಿದ್ದಾರೆ.
ಕಾಣೆಯಾದ ವ್ಯಕ್ತಿಯ ಚಹರೆ: ಎತ್ತರ 5.6 ಅಡಿ, ದುಂಡು ಚುಕ್ಕಿ ಚುಕ್ಕಿ ಮುಖ, ಕೆಂಪು ಮೈಬಣ್ಣ, ದೃಢವಾದ ಮೈಕಟ್ಟು, ಕಪ್ಪು ಕೂದಲು, ಬಲಗಾಲು ಮೀನುಗಂಡೆಯ ಮೇಲೆ ಕಪ್ಪು ಮಚ್ಚೆ ಹೊಂದಿರುತ್ತಾನೆ.
ಕಾಣೆಯಾದ ಸಂದರ್ಭದಲ್ಲಿ ಕಂದು ಬಣ್ಣದ ಹಾಪ್ ಟೀ ಶರ್ಟ್, ಟೀಶರ್ಟನ ಬಲತೋಳಿಗೆ 3 ಅಂತ ಅಚ್ಚೆ ಇರುತ್ತದೆ. ಕಂದು ಬಣ್ಣದ ನೈಟ್ ಪ್ಯಾಂಟ್ ಧರಿಸಿರುತ್ತಾನೆ. ಕನ್ನಡ, ತೆಲುಗು, ಇಂಗ್ಲೀಷ್ ಭಾಷೆ ಮಾತನಾಡುತ್ತಾನೆ.
ವ್ಯಕ್ತಿಯ ಬಗ್ಗೆ ಮಾಹಿತಿ ಸಿಕ್ಕಲ್ಲಿ ಬಳ್ಳಾರಿ ಪೊಲೀಸ್ ಕಂಟ್ರೋಲ್ ರೂಂ ದೂ.08392-258100 ಅಥವಾ ಬಳ್ಳಾರಿ ಗ್ರಾಮೀಣ ಪೊಲೀಸ್ ಠಾಣೆ ದೂ.08392276461, ಮೊ.9480803049 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
--------
ಸೋಮವಾರ, ಫೆಬ್ರವರಿ 24, 2025
ಫೆ.24 ರಂದು ಪೂರ್ವಭಾವಿ ಸಿದ್ಧತಾ ಸಭೆ
ಬಳ್ಳಾರಿ,ಫೆ.24(ಕರ್ನಾಟಕ ವಾರ್ತೆ):
ಕುರುಗೋಡು ಪಟ್ಟಣದ ಶ್ರೀ ದೊಡ್ಡಬಸವೇಶ್ವರಸ್ವಾಮಿ ದೇವಸ್ಥಾನದ ವಾರ್ಷಿಕ ಮಹಾರಥೋತ್ಸವವು ಮಾ.14 ರಂದು ಜರುಗಲಿದ್ದು, ಭಕ್ತರು ಮತ್ತು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವುದರಿಂದ ದರ್ಶನ, ಕುಡಿಯುವ ನೀರು, ಸಾರಿಗೆ ವ್ಯವಸ್ಥೆ, ನೈರ್ಮಲೀಕರಣ, ಸ್ವಚ್ಛತೆ, ಬಂದೋಬಸ್ತ್ ಹಾಗೂ ವಿವಿಧ ಧಾರ್ಮಿಕ ಕಾರ್ಯಗಳು ಇತ್ಯಾದಿ ಕುರಿತು ಚರ್ಚಿಸಲು ಫೆ.24 ರಂದು ಸಂಜೆ 04 ಗಂಟೆಗೆ ಪಟ್ಟಣದ ಶ್ರೀ ದೊಡ್ಡಬಸವೇಶ್ವರಸ್ವಾಮಿ ದೇವಸ್ಥಾನದ ಆವರಣದಲ್ಲಿ ಪೂರ್ವಭಾವಿ ಸಿದ್ಧತಾ ಸಭೆ ನಡೆಸಲು ನಿಗದಿಪಡಿಸಿದೆ.
ರಾಜ್ಯ ಕೈಮಗ್ಗ ಅಭಿವೃದ್ಧಿ ನಿಗಮದ ಅಧ್ಯಕ್ಷರೂ ಆಗಿರುವ ಕಂಪ್ಲಿ ಶಾಸಕ ಜೆ.ಎನ್.ಗಣೇಶ್ ಅವರು ಸಭೆಯ ಅಧ್ಯಕ್ಷತೆ ವಹಿಸುವರು.
ಸಭೆಗೆ ಅಧಿಕಾರಿಗಳು ಹಾಗೂ ಮುಖಂಡರು ತಪ್ಪದೇ ಭಾಗವಹಿಸಬೇಕು ಎಂದು ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ಹನುಮಂತಪ್ಪ ಅವರು ತಿಳಿಸಿದ್ದಾರೆ.
-----------
ವಿನಾಯಕ.ಎ ಅವರಿಗೆ ಪಿಎಚ್‌ಡಿ ಪದವಿ
ಬಳ್ಳಾರಿ,ಫೆ.24(ಕರ್ನಾಟಕ ವಾರ್ತೆ):
ಇಲ್ಲಿನ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯವು ವಿನಾಯಕ.ಎ ಅವರಿಗೆ ಸಮಾಜ ಕಾರ್ಯದಲ್ಲಿ ಪಿಎಚ್‌ಡಿ ಪದವಿ ಪ್ರಕಟಿಸಿದೆ.
ವಿನಾಯಕ.ಎ ಅವರು ಬಳ್ಳಾರಿಯ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಸ್ನಾತಕೋತ್ತರ ಸಮಾಜ ಕಾರ್ಯ ಅಧ್ಯಯನ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ.ಕುಮಾರ್ ಇವರ ಮಾರ್ಗದರ್ಶನದಲ್ಲಿ ಮಂಡಿಸಿದ ‘ಅನಾಲಿಸಿಸ್ ಆಫ್ ಕಮ್ಯೂನಿಟಿ ಆರ್ಗನೈಸೇಷನ್ ಪ್ರಾಕ್ಟೀಸ್ ಇನ್ ಕರ್ನಾಟಕ: ಎ ಸೋಷಿಯಲ್ ವರ್ಕ್ ಪರ್ಸ್ಪೆಕ್ಟೀವ್ಸ್’ ಎಂಬ ಮಹಾಪ್ರಬಂಧಕ್ಕೆ ವಿವಿ ಯು ಪಿಎಚ್‌ಡಿ ಪದವಿ ನೀಡಿದೆ ಎಂದು ವಿವಿ ಪ್ರಕಟಣೆ ತಿಳಿಸಿದೆ.
----------
ವ್ಯಕ್ತಿ ಕಾಣೆ: ಪತ್ತೆಗೆ ಮನವಿ
ಬಳ್ಳಾರಿ,ಫೆ.24(ಕರ್ನಾಟಕ ವಾರ್ತೆ):
ತಾಲ್ಲೂಕಿನ ರೂಪನಗುಡಿ ಗ್ರಾಮದ ಪೋತಪ್ಪ ಗುಡಿ ಹತ್ತಿರ ನಿವಾಸಿ ಕೆ. ವಿರೇಶ್ ಎನ್ನುವ 32 ವರ್ಷದ ವ್ಯಕ್ತಿಯು ದಿನಾಂಕ 24-12-2024 ರಂದು ಕಾಣೆಯಾಗಿರುವ ಕುರಿತು ಪಿ.ಡಿ.ಹಳ್ಳಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪತ್ತೆಗೆ ಸಹಕರಿಸಬೇಕೆಂದು ಎಂದು ಸಬ್ ಇನ್ಸ್ ಪೆಕ್ಟರ್ ಮನವಿ ಮಾಡಿದ್ದಾರೆ.
ಕಾಣೆಯಾದ ವ್ಯಕ್ತಿಯ ಚಹರೆ:
ಎತ್ತರ 5.5 ಅಡಿ, ಕೋಲು ಮುಖ, ಗೋದಿ ಮೈಬಣ್ಣ, ಸಾಧಾರಣ ಮೈಕಟ್ಟು ಹೊಂದಿದ್ದು, ಕಾಣೆಯಾದ ಸಂದರ್ಭದಲ್ಲಿ ತಿಳಿ ಹಸಿರು ಬಣ್ಣದ ಶರ್ಟ್ ಮತ್ತು ನೀಲಿ ಬಣ್ಣದ ಲುಂಗಿ ಧರಿಸಿರುತ್ತಾನೆ. ಕನ್ನಡ ಮತ್ತು ತೆಲುಗು ಭಾಷೆ ಮಾತನಾಡುತ್ತಾನೆ.
ವ್ಯಕ್ತಿಯ ಬಗ್ಗೆ ಮಾಹಿತಿ ಸಿಕ್ಕಲ್ಲಿ ಬಳ್ಳಾರಿ ಪೊಲೀಸ್ ಕಂಟ್ರೋಲ್ ರೂಂ ದೂ.08392-258100, 102 ಬಳ್ಳಾರಿ ಎಸ್.ಪಿ ಅವರ ಕಛೇರಿ ದೂ. 08392-258400, ಸಿರುಗುಪ್ಪ ಡಿ.ಎಸ್.ಪಿ ದೂ.08392-276000, ಪಿ.ಡಿ.ಹಳ್ಳಿ ವೃತ್ತ ಸಿ.ಪಿ.ಐ ಮೊ.08392-276461, ಪಿ.ಡಿ.ಹಳ್ಳಿ ಪೊಲೀಸ್ ಠಾಣೆ ದೂ.08392-265010 ಮತ್ತು ಪಿಎಸ್‌ಐ ಮೊ.9480803052 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-----------
ಅನಾಮಧೇಯ ಮೃತ ವ್ಯಕ್ತಿಯ ವಾರಸುದಾರರ ಪತ್ತೆಗೆ ಮನವಿ
ಬಳ್ಳಾರಿ,ಫೆ.24(ಕರ್ನಾಟಕ ವಾರ್ತೆ):
ಸಂಡೂರು ತಾಲ್ಲೂಕಿನ ತೋರಣಗಲ್ಲಿ ರಸ್ತೆಯ ಬನ್ನಿಹಟ್ಟಿಯ ಹೊಲದ ಹತ್ತಿರದ ರಸ್ತೆಯಲ್ಲಿ ಫೆ.18 ರಂದು ದ್ವಿಚಕ್ರ ವಾಹನವೊಂದು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ರಸ್ತೆಯ ಪಕ್ಕದಲ್ಲಿ ನಡೆದುಕೊಂಡು ಹೋಗುತ್ತಿರುವ ಸುಮಾರು 60-65 ವರ್ಷದ ಅನಾಮಧೇಯ ವ್ಯಕ್ತಿಗೆ ಡಿಕ್ಕಿ ಹೊಡೆದಿದ್ದು, ವ್ಯಕ್ತಿಯನ್ನು ಬಿಮ್ಸ್ನಲ್ಲಿ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದು, ಮೃತನ ವಾರಸುದಾರರ ಪತ್ತೆಗೆ ಸಹಕರಿಸಬೇಕು ಎಂದು ತೋರಣಗಲ್ಲು ಪೊಲೀಸ್ ಠಾಣೆಯು ಪ್ರಕಟಣೆ ಹೊರಡಿಸಿದೆ.
ಚಹರೆ: ಸುಮಾರು 5.8 ಅಡಿ ಎತ್ತರ, ತೆಳುವಾದ ಮೈಕಟ್ಟು, ಗೋಧಿ ಮೈಬಣ್ಣ, ಕೋಲು-ಮುಖ ಹೊಂದಿದ್ದು, ನೀಲಿ ಬಣ್ಣದ ಶರ್ಟ್ ಮತ್ತು ತಿಳಿ ನೀಲಿ ಬಣ್ಣದ ಬರ್ಮೂಡ ಧರಿಸಿರುತ್ತಾನೆ.
ಮೃತ ಅನಾಮಧೇಯ ವ್ಯಕ್ತಿಯ ವಾರಸುದಾರರ ಬಗ್ಗೆ ಮಾಹಿತಿ ಸಿಕ್ಕಲ್ಲಿ ದೂ.08395-258100, ಮೊ.9480803012 ಗೆ ಸಂಪರ್ಕಿಸಬಹುದು.
------------
ಶನಿವಾರ, ಫೆಬ್ರವರಿ 22, 2025
ಬಳ್ಳಾರಿ: ಗ್ಯಾರಂಟಿ ಯೋಜನೆಗಳ ಪ್ರಚಾರದ ವಾಹನಕ್ಕೆ ಚಾಲನೆ | ಗ್ಯಾರಂಟಿ ಯೋಜನೆಗಳಿಂದ ಜನರ ಆರ್ಥಿಕ ಮಟ್ಟ ಸುಧಾರಣೆ: ಜಿಲ್ಲಾಧ್ಯಕ್ಷ ಕೆ.ಇ.ಚಿದಾನಂದಪ್ಪ
ಬಳ್ಳಾರಿ,ಫೆ.22(ಕರ್ನಾಟಕ ವಾರ್ತೆ):
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಹಮ್ಮಿಕೊಳ್ಳಲಾಗಿರುವ ಎಲ್‌ಇಡಿ ವಾಹನ ಹಾಗೂ ಬೀದಿ ನಾಟಕದ ಮೂಲಕ ಗ್ಯಾರಂಟಿ ಯೋಜನೆಗಳ ಪ್ರಚಾರ ಕಾರ್ಯಕ್ರಮಕ್ಕೆ ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಕೆ.ಇ.ಚಿದಾನಂದಪ್ಪ ಅವರು, ನಗರದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಶನಿವಾರ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ನೇತೃತ್ವದ ಸರ್ಕಾರವು ಬಡ ಜನರು, ಮಧ್ಯಮ ವರ್ಗದ ಜನರ ಆರ್ಥಿಕ ಮಟ್ಟವನ್ನು ಸುಧಾರಿಸಲು ಕೊಟ್ಟ ಮಾತಿನಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದು ರಾಜ್ಯದಲ್ಲಿ ಆರ್ಥಿಕ ಶಕ್ತಿ ತುಂಬಿದ್ದಾರೆ ಎಂದರು.
ರಾಜ್ಯದಲ್ಲಿ ಸರ್ಕಾರದ ಪ್ರಮುಖ ಐದು ಗ್ಯಾರಂಟಿ ಯೋಜನೆಗಳನ್ನು ಶೇ.98 ರಷ್ಟು ಯಶಸ್ವಿಯಾಗಿ ಅನುಷ್ಠಾನಗೊಳಿಸಲಾಗಿದೆ. ಶೇ.100 ರಷ್ಟು ಅನುಷ್ಠಾನಗೊಳಿಸಲು ಯೋಜನೆಗಳ ಅರಿವು ಅಗತ್ಯವಾಗಿದೆ. ಹಾಗಾಗಿ ಎಲ್‌ಇಡಿ ವಾಹನವು ಬೀದಿ ನಾಟಕ ಕಾರ್ಯಕ್ರಮ ಆಯೋಜಿಸುವ ಕಲಾವಿದರ ತಂಡದೊAದಿಗೆ ಜಿಲ್ಲೆಯ ಆಯ್ದ 20 ಗ್ರಾಮಗಳಲ್ಲಿ ಸಂಚರಿಸಿ ಗ್ರಾಮೀಣ ಭಾಗದ ಜನರಲ್ಲಿ ಗ್ಯಾರಂಟಿ ಯೋಜನೆಗಳ ಬಗ್ಗೆ ಜಾಗೃತಿ ಮೂಡಿಸಲಿದೆ ಎಂದು ಮಾಹಿತಿ ನೀಡಿದರು.
ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಯಾವುದೇ ಮಧ್ಯವರ್ತಿಗಳಿಲ್ಲದೇ ಜನರಿಗೆ ತಲುಪಿಸಿದ್ದೇವೆ. ಗ್ಯಾರಂಟಿ ಯೋಜನೆಗಳಿಂದ ಯಾರೂ ವಂಚಿತರಾಗಬಾರದು. ಅರ್ಹರು ಇವುಗಳ ಸದುಪಯೋಗ ಪಡೆದುಕೊಳ್ಳಬೇಕು. ಇದಕ್ಕಾಗಿ ಗ್ಯಾರಂಟಿ ಯೋಜನೆಗಳ ಕುರಿತ ಅರಿವು ಬಹುಮುಖ್ಯವಾಗಿ ಗ್ರಾಮೀಣ ಭಾಗದಲ್ಲಿ ಮೂಡಿಸಬೇಕು ಎಂದರು.
ಗೃಹಲಕ್ಷಿö್ಮ ಯೋಜನೆಯ ಕಳೆದ 16 ತಿಂಗಳ ಎಲ್ಲಾ ಕಂತಿನ ಹಣವನ್ನು ಗೃಹಲಕ್ಷಿö್ಮÃಯರ ಖಾತೆಗೆ ಜಮೆ ಮಾಡಲಾಗಿದೆ. ಕೆಲವು ತಾಂತ್ರಿಕ ಕಾರಣಗಳಿಂದಾಗಿ ಕಳೆದ 3 ತಿಂಗಳ ಗೃಹಲಕ್ಷಿ ಹಣ ಬಂದಿಲ್ಲ. ಈಗಾಗಲೇ ಮುಖ್ಯಮಂತ್ರಿಯವರು, ಇಲಾಖಾ ಸಚಿವರು ಮುಂದಿನ ದಿನಗಳಲ್ಲಿ ಹಣ ಪಾವತಿಸುವ ಕುರಿತು ತಿಳಿಸಿದ್ದಾರೆ ಎಂದರು.
ಅದೇರೀತಿಯಾಗಿ ಅನ್ನಭಾಗ್ಯ ಯೋಜನೆಯಡಿ 5 ಕೆಜಿ ಅಕ್ಕಿಯ ಬದಲಾಗಿ ನೀಡುವ ಹಣವು ಜಮೆಯಾಗಿಲ್ಲ. ಬಾಕಿ ಇರುವ ಹಣ ಪಾವತಿ ಜೊತೆಗೆ ಮುಂದಿನ ತಿಂಗಳಿನಿAದ ಎಲ್ಲಾ ಅರ್ಹ ಪಡಿತರಿಗೆ ಕೊಟ್ಟ ಮಾತಿನಂತೆ 10 ಕೆಜಿ ಅಕ್ಕಿಯನ್ನು ವಿತರಿಸಲಾಗುತ್ತದೆ ಎಂದು ತಿಳಿಸಿದರು.
ರಾಜ್ಯ ಸರ್ಕಾರವು ಗ್ಯಾರಂಟಿ ಯೋಜನೆಗಳನ್ನು ಅರ್ಹರಿಗೆ ಕಡ್ಡಾಯವಾಗಿ ತಲುಪಿಸಬೇಕೆಂಬ ಬದ್ಧತೆಯನ್ನು ಹೊಂದಿದೆ. ತಲುಪಿಸುವಲ್ಲಿ ವಿಳಂಬವಾಗಬಹುದು. ಈ ಕುರಿತು ಜನರು ಉಹಾಪೋಹಗಳಿಗೆ ಕಿವಿಕೊಡಬಾರದು ಎಂದರು.
ಈ ವೇಳೆ ಮುಖಂಡರಾದ ವೆಂಕಟೇಶ್ ಹೆಗಡೆ, ಲಿಂಗರಾಜ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಪ್ರಥಮ ದರ್ಜೆ ಸಹಾಯಕ ವಿ.ಸಿ.ಗುರುರಾಜ, ಸಿಬ್ಬಂದಿ ಹನುಮೇಶ್.ಹೆಚ್., ಕಲಾವಿದರಾದ ಎಸ್.ಎಂ.ಹುಲುಗಪ್ಪ, ಹೆಚ್.ಜಿ.ಸುಂಕಪ್ಪ, ಡಿ.ಹೇಮಂತ್, ರ‍್ರಿಸ್ವಾಮಿ, ಹನುಮಯ್ಯ ತಿಮ್ಮಲಾಪುರ ಹಾಗೂ ಇತರರು ಇದ್ದರು.
---------
ಶುಕ್ರವಾರ, ಫೆಬ್ರವರಿ 21, 2025
ಸುದ್ದಿಗೋಷ್ಠಿಯಲ್ಲಿ ರಾಜ್ಯ ಆಹಾರ ಆಯೋಗದ ಅಧ್ಯಕ್ಷ ಡಾ.ಹೆಚ್.ಕೃಷ್ಣ ಮಾಹಿತಿ 10 ನ್ಯಾಯಬೆಲೆ ಅಂಗಡಿಗಳ ಪರವಾನಿಗೆ ರದ್ದು
ಬಳ್ಳಾರಿ,ಫೆ.21(ಕರ್ನಾಟಕ ವಾರ್ತೆ):
ಜಿಲ್ಲೆಯ ವಿವಿಧ ತಾಲ್ಲೂಕುಗಳ ನ್ಯಾಯಬೆಲೆ ಅಂಗಡಿಗಳಿಗೆ ಅನಿರೀಕ್ಷಿತವಾಗಿ ಭೇಟಿ ನೀಡಿದಾಗ ಹೆಚ್ಚುವರಿಯಾಗಿ ಪಡಿತರ ದಾಸ್ತಾನು ಕಂಡುಬAದ ಒಟ್ಟು 10 ನ್ಯಾಯಬೆಲೆ ಅಂಗಡಿಗಳ ಪರವಾನಿಗೆ ರದ್ದು ಮಾಡಲಾಗಿ, ಒಂದು ಗೋದಾಮಿನ ವ್ಯವಸ್ಥಾಪಕರನ್ನು ಅಮಾನತುಗೊಳಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಆಹಾರ ಆಯೋಗದ ಅಧ್ಯಕ್ಷ ಡಾ.ಹೆಚ್.ಕೃಷ್ಣ ಅವರು ಹೇಳಿದರು.
ಶುಕ್ರವಾರ ನಗರದ ಸರ್ಕಾರಿ ಅತಿಥಿ ಗೃಹದ ಸಭಾಂಗಣದಲ್ಲಿ ಏರ್ಪಡಿಸಿದ್ದ ಸುದ್ದಿಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿದರು.
ಕಳೆದ ಐದು ದಿನಗಳಿಂದ ಜಿಲ್ಲಾದ್ಯಂತ ಆಯೋಗದ ಸದಸ್ಯರು ಒಳಗೊಂಡAತೆ ಆಹಾರ ಇಲಾಖೆ ಅಧಿಕಾರಿಗಳೊಂದಿಗೆ ಆಹಾರ ನಾಗರಿಕ ಸರಬರಾಜು ನಿಗಮದ ಸಗಟು ಗೋದಾಮುಗಳಿಗೆ ಭೇಟಿ ನೀಡಿ ತಪಾಸಣೆ ಕೈಗೊಳ್ಳಲಾಗಿದ್ದು, ಅಲ್ಲಿ ಸ್ವಚ್ಛತೆ ಕಾಯ್ದುಕೊಳ್ಳದೇ ಇರುವ ಕುರಿತು ಅಸಮಾಧಾನ ವ್ಯಕ್ತಪಡಿಸಿದರು.
ಜಿಲ್ಲೆಯ ವಿವಿಧ ತಾಲ್ಲೂಕುಗಳ ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ನೀಡಿದಾಗ ಅಲ್ಲಿ ಯಾವುದೇ ರೀತಿಯ ಆಹಾರ ಆಯೋಗದ ಅಧ್ಯಕ್ಷರು ಮತ್ತು ಸದಸ್ಯರ ಮಾಹಿತಿ ವಿವರ ಫಲಕ ಪ್ರದರ್ಶಿಸುವುದು ಕಂಡುಬAದಿಲ್ಲ. ಗ್ರಾಹಕರಿಗೆ ನ್ಯೂನತೆ ಕಂಡುಬAದಲ್ಲಿ ಅವರು ಯಾರನ್ನು ವಿಚಾರಿಸಬೇಕು ಎಂಬುದರ ಕುರಿತ ಆಯೋಗದ ಅಧ್ಯಕ್ಷರು ಮತ್ತು ಸದಸ್ಯರ ಹೆಸರು ಮತ್ತು ಸಂಪರ್ಕ ವಿವರ ಸಹಿತ ಮಾಹಿತಿ ಪ್ರದರ್ಶಿಸಬೇಕು ಎಂದು ಸೂಚಿಸಲಾಗಿದೆ ಎಂದರು.
ನ್ಯಾಯ ಬೆಲೆ ಅಂಗಡಿಗಳಲ್ಲಿಯೂ ಸಹ ಸ್ವಚ್ಚತಾ ಮರೀಚಿಕೆ ಆಗಿದೆ. ಜಾಗೃತಿ ಸಮಿತಿ ಸದಸ್ಯರ ಪಟ್ಟಿ ಹಾಗೂ ಆಹಾರ ಆಯೋಗದ ಸದಸ್ಯರ ನಾಮಫಲಕ ಅಳವಡಿಸಿಲ್ಲ. ಜಾಗೃತಿ ಸಮಿತಿ ಕೊರತೆ, ಭೌತಿಕ ಹಾಗೂ ತಾಂತ್ರಿಕ ದಾಸ್ತಾನು ವ್ಯತ್ಯಾಸ ಕಂಡುಬAದಿದೆ. ಅದಕ್ಕಾಗಿ ಸಂಬAಧಪಟ್ಟ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಲಾಗಿದೆ ಎಂದು ಅಧ್ಯಕ್ಷರು ತಿಳಿಸಿದರು.
ಮಂಗಳವಾರ ಹಾಗೂ ಸರ್ಕಾರಿ ರಜೆ ಹೊರತು ಪಡಿಸಿ, ನ್ಯಾಯ ಬೆಲೆ ಅಂಗಡಿ ತೆರೆದಿರಬೇಕು. ಪಡಿತರ ವಿತರಣೆ ಕಾರ್ಯ, ಪಡಿತರ ವಿತರಣೆ ಸಮರ್ಪಕವಾಗಿ ವಿತರಿಸಿರುವ ಬಗ್ಗೆ ಫಲಾನುಭವಿಗಳ ಮನೆ-ಮನೆ ಭೇಟಿ ನೀಡಿ ಖುದ್ದು ಪರಿಶೀಲನೆ ಮಾಡಲಾಗಿದೆ ಎಂದರು.
ಪಡಿತರ ಅಕ್ಕಿ ಸಂಗ್ರಹಿಸುವ ಉಗ್ರಾಣಗಳಲ್ಲಿಯೂ ಸಹ ಸರಿಯಾದ ವ್ಯವಸ್ಥೆಯಿಲ್ಲ. ಮಾನದಂಡ ಇಲ್ಲದೆ ಪರವಾನಗಿ ನೀಡಲಾಗಿದೆ. ತಿಂಗಳಲ್ಲೇ ನಾಲ್ಕು ದಿನ ಮಾತ್ರ ಪಡಿತರ ವಿತರಿಸುವುದು. ಮುಂಚಿತವಾಗಿ ಬೆರಳು ಗುರುತು ಹಾಕಿಸಿಕೊಳ್ಳುವುದು ಗಮನಕ್ಕೆ ಬಂದಿದೆ. ಅಂತಹವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ವಿವಿಧ ವಸತಿ ಶಾಲೆಯಲ್ಲಿ ಮೂಲಭೂತ ಸೌಕರ್ಯಗಳು ಇಲ್ಲ. ಗುಣಮಟ್ಟದ ಆಹಾರ ನೀಡುತ್ತಿಲ್ಲ. ಈ ಕುರಿತು ನಿಲಯ ಪಾಲಕರ ಅಮಾನತಿಗೆ ಶಿಫಾರಸ್ಸು ಮಾಡಲಾಗಿದೆ ಎಂದರು.
ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಆಹಾರ ಆಯೋಗದ ಸದಸ್ಯರಾದ ಲಿಂಗರಾಜ್ ಕೋಟೆ, ರೋಹಿಣಿ ಪ್ರಿಯ, ಮಾರುತಿ ಎಂ.ದೊಡ್ಡಲಿAಗಣ್ಣನವರ್, ಸುಮಂತ್ ರಾವ್ ಸೇರಿದಂತೆ ಇತರರಿದ್ದರು.
-------------
ಫೆ.23 ರಂದು ವಿದ್ಯುತ್ ವ್ಯತ್ಯಯ
ಬಳ್ಳಾರಿ,ಫೆ.21(ಕರ್ನಾಟಕ ವಾರ್ತೆ):
ಬಳ್ಳಾರಿಯ 110/11ಕೆ.ವಿ ಹಲಕುಂದಿ ಉಪ-ಕೇಂದ್ರದ ವಿದ್ಯುತ್ ವಿತರಣಾ ಕೇಂದ್ರ‍್ರದಲ್ಲಿ ತ್ರೆöÊಮಾಸಿಕ ನಿರ್ವಹಣೆ ಮತ್ತು ದುರಸ್ತಿ ಕಾರ್ಯವನ್ನು ತುರ್ತಾಗಿ ಕೈಗೊಂಡಿರುವುದರಿAದ, 110/11ಕೆ.ವಿ ಹಲಕುಂದಿ ವಿದ್ಯುತ್ ಉಪ-ಕೇಂದ್ರದಿAದ ವಿದ್ಯುತ್ ಸರಬರಾಜು ಆಗುವ 11ಕೆ.ವಿ ಮಾರ್ಗಗಳಲ್ಲಿ ಫೆ.23 ರಂದು ಬೆಳಿಗ್ಗೆ 08 ಗಂಟೆಯಿAದ ಸಂಜೆ 04 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.
*ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು:*
ಎಫ್-1 ಗ್ಯಾಲಕ್ಸಿ ಕೆಮಿಕಲ್ ಮಾರ್ಗದ ಮುಂಡರಗಿ ಕೈಗಾರಿಕೆ ಪ್ರದೇಶದ 2 ಮತ್ತು 3 ಹಂತ, ಎಫ್-10 ಮಿಂಚೇರಿ ಐ.ಪಿ ಮರ್ಗದ ಮುಂಡರಗಿ, ಹಲಕುಂದಿ, ಮಿಂಚೇರಿ ಎಸ್.ಜೆ.ಕೋಟೆ ಕೃಷಿ ಪ್ರದೇಶಗಳು. ಎಫ್-11 ಯಶಸ್ವಿನಿ ಸ್ಪಾಂಜ್ ಕೈಗಾರಿಕೆ ಪ್ರದೇಶ ಮಾರ್ಗದ ಹಲಕುಂದಿ ಗ್ರಾಮ, ಮುಂಡರಿಗಿ ಕೈಗಾರಿಕಾ ಪ್ರದೇಶ.
ಎಫ್-2 ಸುಧಾಕರ ಪೈಪ್ ಮಾರ್ಗದ ಮುಂಡರಿಗಿ ಕೈಗಾರಿಕೆ ಪ್ರದೇಶದ 2 ಮತ್ತು 3 ನೇ ಹಂತ, ಎಫ್-4 ಗುರುನಾಥ ರೈಸ್ ಮಿಲ್ ಮಾರ್ಗದ ಮುಂಡರಗಿ ಕೈಗಾರಿಕೆ ಪ್ರದೇಶದ 2 ಮತ್ತು 3 ನೇ ಹಂತ, ಎಫ್-5 ಅಪೇರಲ್ ಪಾರ್ಕ್ ಮಾರ್ಗದ ಮುಂಡರಗಿ ಕೈಗಾರಿಕೆ ಪ್ರದೇಶದ 4 ನೇ ಹಂತ, ಎಫ್-6 ಸ್ನೇಹ ಗ್ಲಾಸ್ ಮಾರ್ಗದ ಮುಂಡರಗಿ ಕೈಗಾರಿಕೆ ಪ್ರದೇಶದ 2 ಮತ್ತು 3 ನೇ ಹಂತದ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಬಳ್ಳಾರಿ ಗ್ರಾಮೀಣ ಜೆಸ್ಕಾಂನ ಕಾರ್ಯ ನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
------------
ಬಳ್ಳಾರಿ: ಮಾ.08 ರಂದು ರಾಜ್ಯಮಟ್ಟದ ಬುಡಕಟ್ಟು ಉತ್ಸವ ಆಯೋಜನೆ
ಬಳ್ಳಾರಿ,ಫೆ.21(ಕರ್ನಾಟಕ ವಾರ್ತೆ):
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ 2024-25ನೇ ಸಾಲಿನ ಪರಿಶಿಷ್ಟ ಪಂಗಡಗಳ ಉಪಯೋಜನೆಯಡಿ ರಾಜ್ಯ ಮಟ್ಟದ ಬುಡಕಟ್ಟು ಉತ್ಸವ ಕಾರ್ಯಕ್ರಮವನ್ನು ಮಾ.08 ರಂದು ನಗರದ ಡಾ.ರಾಜ್‌ಕುಮಾರ್ ರಸ್ತೆಯ ಮುನಿಸಿಪಲ್ ಕಾಲೇಜು ಮೈದಾನದಲ್ಲಿ ವಿಜೃಂಭಣೆಯಿAದ ಆಯೋಜಿಸಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ಅವರು ತಿಳಿಸಿದ್ದಾರೆ.
-------------
ಭಿಕ್ಷಾಟನೆ ತಡೆ, ಕಾಣೆಯಾದ ಮಕ್ಕಳ ರಕ್ಷಣೆ ಕುರಿತು ಜನಜಾಗೃತಿ
ಬಳ್ಳಾರಿ,ಫೆ.21(ಕರ್ನಾಟಕ ವಾರ್ತೆ):
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಮಕ್ಕಳ ವಿಶೇಷ ಪೊಲೀಸ್ ಘಟಕ, ಸಖಿ-ಒನ್ ಸ್ಟಾಪ್ ಸೆಂಟರ್ ಇವರ ಸಹಯೋಗದಲ್ಲಿ ನಗರದ ರೈಲ್ವೇ ನಿಲ್ದಾಣ ಮತ್ತು ಬಸ್ ನಿಲ್ದಾಣಗಳಲ್ಲಿ ಭಿಕ್ಷಾಟನೆ ತಡೆ ಮತ್ತು ಕಾಣೆಯಾದ ಮಕ್ಕಳ ರಕ್ಷಣೆ ಕುರಿತು ಜನಜಾಗೃತಿ ಕಾರ್ಯಕ್ರಮ ಗುರುವಾರ ಹಮ್ಮಿಕೊಳ್ಳಲಾಯಿತು.
ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಮಕ್ಕಳ ರಕ್ಷಣಾಧಿಕಾರಿ(ಅಸಾಂಸ್ಥಿಕ ಸೇವೆ) ಚನ್ನಬಸಪ್ಪ ಪಾಟೀಲ್ ಅವರು ಮಾತನಾಡಿ, ‘ಕೆಲವು ಜನರು ಭಿಕ್ಷಾಟನೆಯನ್ನು ವೃತ್ತಿಯನ್ನಾಗಿಸಿಕೊಂಡಿದ್ದು, ಈ ಪಿಡುಗನ್ನು ಸಮಾಜದಿಂದ ತಡೆಗಟ್ಟಲು ಹಾಗೂ ನಿಷೇಧಿಸಲು ಇಂತಹ ಕೃತ್ಯದಲ್ಲಿ ತೊಡಗಿಸಿಕೊಂಡಿರುವವರನ್ನು ಗುರುತಿಸಿ, ರಕ್ಷಿಸಿ ಮಕ್ಕಳ ಕಲ್ಯಾಣ ಸಮಿತಿಯ ಮುಂದೆ ಹಾಜರುಪಡಿಸಿ ಅವರಿಗೆ ಪುನರ್ವಸತಿ ಕಲ್ಪಿಸಲಾಗುವುದು ಎಂದು ತಿಳಿಸಿದರು.
ಮಕ್ಕಳ ವಿಶೇಷ ಪೊಲೀಸ್ ಘಟಕದ ಅಧಿಕಾರಿ ಲಲಿತಮ್ಮ ಅವರು ಮಾತನಾಡಿ, ಭಿಕ್ಷಾಟನೆಯಲ್ಲಿ ತೊಡಗಿರುವ ಮಕ್ಕಳು, ಚಿಂದಿ ಹಾಯುವ ಮಕ್ಕಳು, ಬೀದಿ ಮಕ್ಕಳು, ಕಾಂಇðಕ ಪದ್ಧತಿಯಲ್ಲಿ ತೊಡಗಿರುವ ಮಕ್ಕಳು, ಅನಾಥ ಮಕ್ಕಳು, ಸಾಗಣೆಯಾದ ಮಕ್ಕಳು, ಪರಿತ್ಯಜಿಸಿಲ್ಪಟ್ಟ ಮಕ್ಕಳು, ಶೋಷಣೆ ಮತ್ತು ದೌರ್ಜನ್ಯಕ್ಕೆ ಒಳಗಾದ ಮಕ್ಕಳು ಕಂಡು ಬಂದಲ್ಲಿ ಮಕ್ಕಳ ಸಹಾಯವಾಣಿ-1098 ಇಲ್ಲವೇ ಪೊಲೀಸ್ ತುರ್ತು ಸೇವೆ – 112 ಗೆ ಕರೆ ಮಾಡಿ ಮಾಹಿತಿ ನೀಡಬಹುದು ಎಂದು ಹೇಳಿದರು.
ಕಾನೂನು ಪರಿವೀಕ್ಷಣಾಧಿಕಾರಿ ಈಶ್ವರ್ ರಾವ್ ಮಾತನಾಡಿ, ಕಾಣೆಯಾದ ಯಾವುದೇ ಮಗು ಕಂಡು ಬಂದಲ್ಲಿ ಕೂಡಲೇ ಮಕ್ಕಳ ಸಹಾಯವಾಣಿ-1098 ಮಾಹಿತಿ ನೀಡಿ, ಇಲ್ಲವೇ ಹತ್ತಿರದ ಪೊಲೀಸ್ ಠಾಣೆಗೆ ಮಗುವನ್ನು ಒಪ್ಪಿಸಬೇಕು ಎಂದು ಜಾಗೃತಿ ಮೂಡಿಸಿದರು.
ಮಕ್ಕಳ ರಕ್ಷಣಾಧಿಕಾರಿ(ಸಾಂಸ್ಥಿಕ ಸೇವೆ) ಮಂಜುನಾಥ ಅವರು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಯೊಜನೆಗಳ ಕುರಿತು ಜನರಿಗೆ ತಿಳಿಸಿಕೊಟ್ಟರು. ಮಕ್ಕಳ ಸಹಾಯವಾಣಿಯ ಸಂಯೋಜಕರಾದ ಆನಂದ ಅವರು ಮಕ್ಕಳ ಸಹಾಯವಾಣಿ-1098 ಕುರಿತ ಕರಪತ್ರಗಳನ್ನು ಸಾರ್ವಜನಿಕರಿಗೆ ವಿತರಿಸಿ ಸಾರ್ವಜನಿಕರಿಗೆ ಮಕ್ಕಳ ಸಹಾಯವಾಣಿ ಸೇವೆಗಳ ಕುರಿತು ತಿಳಿಸಿದರು.
ಈ ವೇಳೆ ಬಸ್ ನಿಲ್ದಾಣದ ಉಸ್ತುವಾರಿ ಅಧಿಕಾರಿ ರಾಜಶೇಖರ್, ನಿಯಂತ್ರಣಾಧಿಕಾರಿ ಪಂಪಾರೆಡ್ಡಿ, ಬಳ್ಳಾರಿ ರೈಲ್ವೇ ನಿಲ್ದಾಣದ ಎಎಸ್‌ಐ ಶಿವಮೂರ್ತಿ, ಪೊಲೀಸ್ ಪೇದೆ ಶಂಕರ್, ಬ್ರೂಸ್‌ಪೇಟೆ ಪೊಲೀಸ್ ಠಾಣೆಯ ಪಿಎಸ್‌ಐ ಎಂ.ಅನ್ಸರ್, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಮತ್ತು ಮಕ್ಕಳ ಸಹಾಯವಾಣಿ ಸಿಬ್ಬಂದಿಗಳಾದ ರವಿಕುಮಾರ್, ಹೊನ್ನೂರಪ್ಪ, ಉಮೇಶ್, ಅರುಳ್ ಆನಂದ್, ಕಾರ್ತಿಕ್, ಸುಧಾ, ನಿಲೋಫಿಯಾ, ಚಂದ್ರಕಳ, ಸಜಿನಿ ಮತ್ತು ಮಿಷನ್ ಶಕ್ತಿ ಯೋಜನೆಯ ಜಿಲ್ಲಾ ಸಂಯೋಜಕರಾದ ಶಹಜಾನ್, ಸಖಿ-ಒನ್ ಸ್ಟಾಪ್ ಸೆಂಟರ್‌ನ ಸಿಬ್ಬಂದಿಗಳಾದ ವಿಶಾಲಕ್ಷೀ ಸರಸ್ವತಿ ಹಾಗೂ ನವದುರ್ಗಿ ಪೊಲೀಸ್ ಸಿಬ್ಬಂದಿಯವರು ಭಾಗವಹಿಸಿದ್ದರು.
-----------
ಮಾ.26 ರಂದು ಪರಿಸರ ಸಾರ್ವಜನಿಕ ಆಲಿಕೆ ಸಭೆ
ಬಳ್ಳಾರಿ,ಫೆ.21(ಕರ್ನಾಟಕ ವಾರ್ತೆ):
ಸಂಡೂರು ತಾಲ್ಲೂಕಿನ ಯಶವಂತನಗರ ಗ್ರಾಮದ ‘ರಾಮನದುರ್ಗ ಐರನ್ ಓರ್ ಮೈನ್’ನಲ್ಲಿ ಕುಮಾರಸ್ವಾಮಿ ಮಿನರಲ್ ಎಕ್ಸ್ಪೋರ್ಟ್ಸ್ ಪ್ರೆöÊವೇಟ್ ಲಿಮಿಟೆಡ್ ಇವರು ಈಗಾಗಲೇ ಅಸ್ತಿತ್ವದಲ್ಲಿರುವ ಒಟ್ಟು 59.36 ಹೆಕ್ಟೇರ್ ಅರಣ್ಯ ಪ್ರದೇಶದಲ್ಲಿ ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ಕಬ್ಬಿಣದ ಅದಿರಿನ ಗಣಿಗಾರಿಕೆಯ ವಾರ್ಷಿಕ ಉತ್ಪಾದನಾ ಸಾಮರ್ಥ್ಯವನ್ನು 2.8 ಮಿಲಿಯನ್ ಟನ್ ನಿಂದ 4.0 ಮಿಲಿಯನ್ ಟನ್‌ಗೆ ವಿಸ್ತರಿಸಲು (ಹೆಚ್ಚುವರಿ ವಾರ್ಷಿಕ ಉತ್ಪಾದನಾ ಸಾಮರ್ಥ್ಯ 1.2 ಮಿಲಿಯನ್ ಟನ್) ವಿಸ್ತರಣಾ ಪ್ರಸ್ತಾವನೆ ಸಲ್ಲಿಸಿದ್ದು, ಇದರ ಸಂಬAಧ ಪರಿಸರ ಸಾರ್ವಜನಿಕ ಆಲಿಕೆ ಸಭೆಯನ್ನು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರ ಅಧ್ಯಕ್ಷತೆಯಲ್ಲಿ ಮಾ.26 ರಂದು ಬೆಳಿಗ್ಗೆ 11 ಗಂಟೆಗೆ ಸಂಡೂರು ತಾಲ್ಲೂಕಿನ ಯಶವಂತನಗರ ಗ್ರಾಮದ ‘ರಾಮನದುರ್ಗ ಐರನ್ ಓರ್ ಮೈನ್’ (ಕುಮಾರಸ್ವಾಮಿ ಮಿನರಲ್ ಎಕ್ಸ್ಪೋರ್ಟ್ಸ್ ಪ್ರೆöÊವೇಟ್ ಲಿಮಿಟೆಡ್) ಯೋಜನಾ ಪ್ರದೇಶದಲ್ಲಿ ನಡೆಸಲು ತೀರ್ಮಾನಿಸಲಾಗಿದೆ.
ಇದಕ್ಕೆ ಸಂಬAಧಿಸಿದAತೆ ಉದ್ದೇಶಿತ ಯೋಜನೆಯ ಕಾರ್ಯ ನಿರ್ವಾಹಕ ಸಾರಾಂಶ ಪ್ರತಿಯನ್ನು ಸಾರ್ವಜನಿಕರ ಮಾಹಿತಿಗಾಗಿ ಸಂಬAಧಿಸಿದ ಕಚೇರಿಗಳಲ್ಲಿ ಸಾರಾಂಶ ಪ್ರತಿಯನ್ನು ಸಾರ್ವಜನಿಕರ ಗಮನಕ್ಕೆ ಇಡಲಾಗಿದೆ.
ಸುತ್ತಮುತ್ತಲಿನ ಸಾರ್ವಜನಿಕರು ಸಭೆಯಲ್ಲಿ ಪಾಲ್ಗೊಂಡು ಅಭಿಪ್ರಾಯ, ಅಹವಾಲು ಸಲ್ಲಿಸಬಹುದು ಎಂದು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಬಳ್ಳಾರಿ ಪ್ರಾದೇಶಿಕ ಕಚೇರಿಯ ಪರಿಸರ ಅಧಿಕಾರಿ ಸಿದ್ದೇಶ್ವರ ಬಾಬು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
------------
ಮಹಾ ಶಿವರಾತ್ರಿ ಹಬ್ಬದ ಪ್ರಯುಕ್ತ ಶ್ರೀಶೈಲಂಗೆ ವಿಶೇಷ ಸಾರಿಗೆ ಸೌಲಭ್ಯ
ಬಳ್ಳಾರಿ,ಫೆ.21(ಕರ್ನಾಟಕ ವಾರ್ತೆ):
ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಬಳ್ಳಾರಿ ವಿಭಾಗದಿಂದ ಮಹಾ ಶಿವರಾತ್ರಿ ಹಬ್ಬದ ಪ್ರಯುಕ್ತ ಶ್ರೀಶೈಲಂಗೆ ಹೋಗಲು ವಿಶೇಷ ಸಾರಿಗೆ ಸೌಲಭ್ಯ ಮಾಡಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ಇನಾಯತ್ ಬಾಗ್‌ಬಾನ್ ಅವರು ತಿಳಿಸಿದ್ದಾರೆ.
ಬಳ್ಳಾರಿ, ಮೋಕಾ, ಕುರುಗೋಡು, ಸಿರುಗುಪ್ಪ, ತೆಕ್ಕಲಕೋಟೆ, ಹಳೇಕೋಟೆ ಹಾಗೂ ಸುತ್ತಮುತ್ತಲಿನ ಗ್ರಾಮಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಮಹಾ ಶಿವರಾತ್ರಿ ಹಬ್ಬದ ಪ್ರಯುಕ್ತ ಶ್ರೀಶೈಲಂಗೆ ಹೋಗುತ್ತಿದ್ದು, ಭಕ್ತಾಧಿಗಳ ಅನುಕೂಲಕ್ಕಾಗಿ ಫೆ.21 ರಿಂದ 28 ರ ವರೆಗೆ ರವರೆಗೆ ವಿಶೇಷ ಸಾರಿಗೆ ಒದಗಿಸಲಾಗಿದೆ.
ಮಾಹಿತಿಗಾಗಿ: ಬಳ್ಳಾರಿ-1ನೇ ಘಟಕದ ವ್ಯವಸ್ಥಾಪಕರು-7760992163, ಬಳ್ಳಾರಿ-2ನೇ ಘಟಕ ವ್ಯವಸ್ಥಾಪಕರು-7760992164, ಸಿರುಗುಪ್ಪ ಘಟಕ ವ್ಯವಸ್ಥಾಪಕರು-7760992165, ಕುರುಗೋಡು ಘಟಕ ವ್ಯವಸ್ಥಾಪಕರು-9606483671, ಸಂಡೂರು ಘಟಕ ವ್ಯವಸ್ಥಾಪಕರು-7760992309 ಗೆ ಸಂಪರ್ಕಿಸಬಹುದು.
ಈ ಸಾರಿಗೆ ಸೇವೆಯನ್ನು ಸಾರ್ವಜನಿಕ ಪ್ರಯಾಣಿಕರು ಸದುಪಯೋಗಪಡೆದುಕೊಳ್ಳಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-----------
ಪರೀಕ್ಷಾ ಕೇಂದ್ರಗಳ ಸುತ್ತ 200 ಮೀ. ವ್ಯಾಪ್ತಿ ನಿಷೇಧಾಜ್ಞೆ ಜಾರಿಗೊಳಿಸಿ ಡಿಸಿ ಪ್ರಶಾಂತ್ ಕುಮಾರ್ ಮಿಶ್ರಾ ಆದೇಶ
ಬಳ್ಳಾರಿ,ಫೆ.21(ಕರ್ನಾಟಕ ವಾರ್ತೆ):
ನಗರದಲ್ಲಿ ಕರ್ನಾಟಕ ಲೋಕಸೇವಾ ಆಯೋಗದ ವತಿಯಿಂದ ಫೆ.23 ಮತ್ತು ಮಾ.02 ರಂದು ವಿವಿಧ ಇಲಾಖೆಗಳ ಗ್ರೂಪ್ ‘ಬಿ’ ಹೈದರಾಬಾದ್ ಕರ್ನಾಟಕ ವೃಂದದ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷಾ ಕೇಂದ್ರ ಸುತ್ತಲೂ 200 ಮೀಟರ್ ವ್ಯಾಪ್ತಿಯ ಪ್ರದೇಶವನ್ನು ಭಾರತೀಯ ನಾಗರೀಕ ಸುರಕ್ಷಾ ಸಂಹಿತಾ 2023ರ ಕಲಂ 163 ರ ಮೇರೆಗೆ ನಿರ್ಬಂಧಿತ ಪ್ರದೇಶ ಎಂದು ಘೋಷಿಸಿ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಆದೇಶಿಸಿದ್ದಾರೆ.
ಫೆ.23 ರಂದು ಸಾಮಾನ್ಯ ಪತ್ರಿಕೆಯು ಬೆಳಿಗ್ಗೆ 10 ಗಂಟೆಯಿAದ 11.30 ಗಂಟೆಯವರೆಗೆ ನಗರದ 11 ಪರೀಕ್ಷಾ ಕೇಂದ್ರಗಳಲ್ಲಿ ಮತ್ತು ಮಾ.02 ರಂದು ನಿರ್ದಿಷ್ಟ ಪತ್ರಿಕೆ-2 ಬೆಳಿಗ್ಗೆ 10 ಗಂಟೆಯಿAದ ಮಧ್ಯಾಹ್ನ 12 ಗಂಟೆಯವರೆಗೆ 12 ಪರೀಕ್ಷಾ ಕೇಂದ್ರಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳು ನಡೆಯಲಿವೆ. ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ವ್ಯಾಪ್ತಿಯಲ್ಲಿ ಇರುವ ಜೆರಾಕ್ಸ್, ಇಂಟರ್‌ನೆಟ್ ಸೆಂಟರ್‌ಗಳು ಕಾರ್ಯನಿರ್ವಹಿಸದಂತೆ ಪ್ರತಿಬಂಧಿಸಲು ಆದೇಶಿಸಿದ್ದು, ಅನಧಿಕೃತ ವ್ಯಕ್ತಿ ಮತ್ತು ವ್ಯಕ್ತಿಗಳ ಗುಂಪುಗಳಿಗೆ ಪ್ರವೇಶ ನಿಷೇಧಿಸಲಾಗಿದೆ.
ಈ ಆದೇಶವು ಪರೀಕ್ಷೆಯ ಮೇಲ್ವಿಚಾರಣೆ ಕಾರ್ಯನಿರ್ವಹಿಸುವ ಸಿಬ್ಬಂದಿಯವರಿಗೆ ಅನ್ವಯಿಸುವುದಿಲ್ಲ ಎಂದು ಅವರು ಆದೇಶದಲ್ಲಿ ತಿಳಿಸಿದ್ದಾರೆ.
----------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳು (Atom)







































