ಶನಿವಾರ, ಫೆಬ್ರವರಿ 1, 2025
ಫೆ.02 ರಂದು ವಿದ್ಯುತ್ ವ್ಯತ್ಯಯ
ಬಳ್ಳಾರಿ,ಫೆ.01(ಕರ್ನಾಟಕ ವಾರ್ತೆ):
ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-1 ರ ವ್ಯಾಪ್ತಿಗೆ ಬರುವ 110/11ಕೆವಿ ಸೌತ್ ವಿದ್ಯುತ್ ವಿತರಣಾ ಕೇಂದ್ರದಿAದ ಸರಬರಾಜು ಆಗುವ ಎಫ್-25 ಫೀಡರಿನ ಕೆಲ ಏರಿಯಾಗಳಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಕಾರ್ಯ ಕೈಗೊಳ್ಳುತ್ತಿರುವುದರಿಂದ ಫೆ.02 ರಂದು ಬೆಳಿಗ್ಗೆ 11 ಗಂಟೆಯಿAದ ಸಂಜೆ 06.30 ಗಂಟೆಯವರೆಗೆ ಬಳ್ಳಾರಿ ನಗರದ ಆರ್‌ಕೆ ಮಿಲ್ ರಸ್ತೆ, ಬಾಪೂಜಿ ನಗರ, ಬಾಪೂಜಿ ನಗರ ವೃತ್ತ, ರಾಣಿ ತೋಟ, ಕಣೆಕಲ್ ಬಸ್ ನಿಲ್ದಾಣ, ಮಾರ್ಕೆಟ್, ಮರಿಸ್ವಾಮಿ ಮಠ, ಟೋಪಿಗಲ್ಲಿ ಇನ್ನು ಮುಂತಾದ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ವಿದ್ಯುತ್ ಗ್ರಾಹಕರು ಮತ್ತು ಸಾರ್ವಜನಿಕರು ಸಹಕರಿಸಬೇಕು ಎಂದು ಜೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-----------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ