ಶುಕ್ರವಾರ, ಫೆಬ್ರವರಿ 28, 2025

ಮಾ.02 ರಂದು ವಿದ್ಯುತ್ ವ್ಯತ್ಯಯ

ಬಳ್ಳಾರಿ,ಫೆ.28(ಕರ್ನಾಟಕ ವಾರ್ತೆ): ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-1 ರ ವ್ಯಾಪ್ತಿಯ 220/110/11ಕೆ.ವಿ ಅಲ್ಲಿಪುರ ವಿದ್ಯುತ್ ಉಪ-ಕೇಂದ್ರದಲ್ಲಿ ವಿದ್ಯುತ್ ತುರ್ತು ನಿರ್ವಹಣೆ ಕಾರ್ಯ ಕೈಗೊಳ್ಳುತ್ತಿರುವುರಿಂದÀ ಮಾ.02 ರಂದು ಬೆಳಿಗ್ಗೆ 09 ಗಂಟೆಯಿAದ ಸಂಜೆ 05 ಗಂಟೆಯವರೆಗೆ ಎಫ್-72 ಫೀಡರ್ ಮಾರ್ಗದ ಸೂರ್ಯ ಕಾಲೋನಿ, ರಹಿಮಬಾದ್ ಕಾಲೋನಿ, ನಂದಿ ಕಾಲೋನಿ, ಹೆಚ್.ಆರ್.ಜಿ ಕಾಲೋನಿ ಸೇರಿದಂತೆ ಮುಂತಾದ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ವಿದ್ಯುತ್ ಗ್ರಾಹಕರು ಮತ್ತು ಸಾರ್ವಜನಿಕರು ಸಹಕರಿಸಬೇಕು ಎಂದು ನಗರ ಉಪ-ವಿಭಾಗ-1 ಜೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ