ಸೋಮವಾರ, ಫೆಬ್ರವರಿ 3, 2025
ಫೆ.04 ರಂದು ವಿಶ್ವ ಕ್ಯಾನ್ಸರ್ ದಿನಾಚರಣೆ ಅಂಗವಾಗಿ ಜನಜಾಗೃತಿ ಜಾಥ
ಬಳ್ಳಾರಿ,ಫೆ.02(ಕರ್ನಾಟಕ ವಾರ್ತೆ):
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ವಿಶ್ವ ಕ್ಯಾನ್ಸರ್ ದಿನಾಚರಣೆ ಅಂಗವಾಗಿ ಫೆ.04 ರಂದು ಬೆಳಿಗ್ಗೆ 09.30 ಗಂಟೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ಆವರಣದಲ್ಲಿ ಜನಜಾಗೃತಿ ಜಾಥ ಹಮ್ಮಿಕೊಳ್ಳಲಾಗಿದೆ.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು ಅವರು ಚಾಲನೆ ನೀಡುವರು.
ಮಾರ್ಗ: ಜಾಥಾವು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯಿಂದ ಆರಂಭಗೊಂಡು ಸಂಗಂ ವೃತ್ತ, ರಾಘವೇಂದ್ರ ಚಿತ್ರ ಮಂದಿರ ವೃತ್ತ, ಮೀನಾಕ್ಷಿ ವೃತ್ತ, ಜಿಲ್ಲಾಧಿಕಾರಿಗಳ ಕಚೇರಿ ಮಾರ್ಗವಾಗಿ ಮರಳಿ ಗಡಿಗಿ ಚೆನ್ನಪ್ಪ ವೃತ್ತ ಮೂಲಕ ಪುನಃ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ಆವರಣಕ್ಕೆ ತಲುಪಲಿದೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಮರಿಯಂಬಿ ವಿ.ಕೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
--------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ