ಸೋಮವಾರ, ಫೆಬ್ರವರಿ 3, 2025

ರಾಜ್ಯಮಟ್ಟದ ಬುಡಕಟ್ಟು ಉತ್ಸವ ಆಯೋಜನೆ: ಫೆ.05 ರಂದು ಪೂರ್ವಭಾವಿ ಸಭೆ

ಬಳ್ಳಾರಿ,ಫೆ.03(ಕರ್ನಾಟಕ ವಾರ್ತೆ): ಪರಿಶಿಷ್ಟ ಪಂಗಡ ಉಪಯೋಜನೆಯಡಿ ರಾಜ್ಯಮಟ್ಟದ ಬುಡಕಟ್ಟು ಉತ್ಸವವನ್ನು ಬಳ್ಳಾರಿ ಜಿಲ್ಲೆಯಲ್ಲಿ ಆಯೋಜಿಸುವ ಕುರಿತು ಚರ್ಚಿಸಲು ಫೆ.05 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ಏರ್ಪಡಿಸಲಾಗಿದೆ. ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಅಧ್ಯಕ್ಷತೆ ವಹಿಸುವರು. ವಿವಿಧ ಇಲಾಖೆಗಳ ಅಧಿಕಾರಿಗಳು ತಪ್ಪದೇ ಸಭೆಗೆ ಹಾಜರಾಗಬೇಕು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ಅವರು ತಿಳಿಸಿದ್ದಾರೆ. ---------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ