ಬುಧವಾರ, ಫೆಬ್ರವರಿ 5, 2025

ಫೆ.10 ರಂದು ಕಾಯಕ ಶರಣರ ಜಯಂತಿ ಕಾರ್ಯಕ್ರಮ

ಬಳ್ಳಾರಿ,ಫೆ.05(ಕರ್ನಾಟಕ ವಾರ್ತೆ): ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮಹಾನಗರ ಪಾಲಿಕೆ ಇವರ ಸಂಯುಕ್ತಾಶ್ರಯದಲ್ಲಿ ಮಾದಾರ ಚೆನ್ನಯ್ಯ, ಡೋಹರ ಕಕ್ಕಯ್ಯ, ಸಮಗಾರ ಹರಳಯ್ಯ, ಮಾದಾರ ಧೂಳಯ್ಯ ಮತ್ತು ಉರಿಲಿಂಗಪೆದ್ದಿ ಸೇರಿದಂತೆ ‘ಕಾಯಕ ಶರಣರ ಜಯಂತಿ’ ಕಾರ್ಯಕ್ರಮವನ್ನು ಫೆ.10 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮAದಿರದಲ್ಲಿ ಆಯೋಜಿಸಲಾಗಿದೆ. ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು ಹಾಗೂ ಬಳ್ಳಾರಿ ಉಸ್ತುವಾರಿ ಸಚಿವ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ಅವರು ಕಾರ್ಯಕ್ರಮ ಉದ್ಘಾಟಿಸುವರು. ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರು ಅಧ್ಯಕ್ಷತೆ ವಹಿಸುವರು. ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷ ಹಾಗೂ ಶಾಸಕ ಜೆ.ಎನ್ ಗಣೇಶ್, ಸಂಸದರಾದ ಈ.ತುಕಾರಾಂ, ಕೆ.ರಾಜಶೇಖರ ಬಸವರಾಜ ಹಿಟ್ನಾಳ್, ಡಾ.ಸೈಯದ್ ನಾಸೀರ್ ಹುಸೇನ್, ಶಾಸಕರಾದ ಬಿ.ನಾಗೇಂದ್ರ, ವಿಧಾನಪರಿಷತ್ ಶಾಸಕರಾದ ಡಾ.ಚಂದ್ರಶೇಖರ್ ಬಿ.ಪಾಟೀಲ, ಶಾಸಕರಾದ ಬಿ.ಎಂ.ನಾಗರಾಜ, ಈ.ಅನ್ನಪೂರ್ಣ, ವಿಧಾನಪರಿಷತ್ ಶಾಸಕರಾದ ಶಶೀಲ್ ನಮೋಶಿ, ವೈ.ಎಂ.ಸತೀಶ್, ಡಾ.ಬಾಬು ಜಗಜೀವನ್‌ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುಂಡರಗಿ ನಾಗರಾಜ, ಮಹಾನಗರ ಪಾಲಿಕೆಯ ಮಹಾಪೌರರಾದ ಮುಲ್ಲಂಗಿ ನಂದೀಶ್, ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಜೆ.ಎಸ್.ಆಂಜನೇಯಲು ಸೇರಿದಂತೆ ಇತರರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಸಂಗನಕಲ್ಲಿನ ನಿವೃತ್ತ ಪ್ರಾಧ್ಯಾಪಕರಾದ ಶ್ರೀನಿವಾಸಮೂರ್ತಿ ಹಾಗೂ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಾದ ಶಾಮಣ್ಣ ಅವರು ಕಾಯಕ ಶರಣರ ಕುರಿತು ವಿಶೇಷ ಉಪನ್ಯಾಸ ನೀಡುವರು. ಕಾರ್ಯಕ್ರಮದಲ್ಲಿ ಸಿರುಗುಪ್ಪದ ದಳವಾಯಿ ಅಂಬಣ್ಣ ತಂಡದಿAದ ವಚನ ಸಂಗೀತ ಪ್ರಸ್ತುತ ಪಡಿಸುವರು. ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭಾರಾಣಿ.ವಿ.ಜೆ., ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ, ಅಪರ ಜಿಲ್ಲಾಧಿಕಾರಿ ಮಹಮ್ಮದ್ ಎನ್.ಝುಬೇರ್ ಸೇರಿದಂತೆ ಇತರರು ಉಪಸ್ಥಿತರಿರುವರು. ಜಿಲ್ಲಾ ಮಟ್ಟದ ಅಧಿಕಾರಿಗಳು, ವಿವಿಧ ಸಂಘ-ಸAಸ್ಥೆಗಳ ಪದಾಧಿಕಾರಿಗಳು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ಅವರು ತಿಳಿಸಿದ್ದಾರೆ. ---------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ