ಶುಕ್ರವಾರ, ಫೆಬ್ರವರಿ 7, 2025

ಫೆ.11 ರಂದು “ಅಂಬೇಡ್ಕರ್ ಓದು” ಕಾರ್ಯಕ್ರಮ

ಬಳ್ಳಾರಿ,ಫೆ.07(ಕರ್ನಾಟಕ ವಾರ್ತೆ): ಕನ್ನಡ ಮತ್ತು ಸಂಸ್ಕೃತಿ ಇಲಾಖೆÀ ವತಿಯಿಂದ ಭಾರತರತ್ನ ಡಾ. ಬಿ.ಆರ್.ಅಂಬೇಡ್ಕರ್‌ರವರ ಬದುಕು ಮತ್ತು ಸಾಧನೆಗಳ ಪರಿಚಯ ಕುರಿತು ಫೆ.11 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಶ್ರೀಮತಿ ಅಲ್ಲಂ ಸುಮಂಗಳಮ್ಮ ಸ್ಮಾರಕ ಮಹಿಳಾ ಪದವಿ ಪೂರ್ವ ಕಾಲೇಜು ಸಭಾಂಗಣದಲ್ಲಿ “ಅಂಬೇಡ್ಕರ್ ಓದು” ಎಂಬ ಕಾರ್ಯಕ್ರಮ ಆಯೋಜಿಸಲಾಗಿದೆ. ಸಾಹಿತಿ ಹಾಗೂ ಬಾಬು ಜಗಜೀವನ್ ರಾಂ ಪ್ರಶಸ್ತಿ ಪುರಸ್ಕೃತರಾದ ಎನ್.ಡಿ.ವೆಂಕಮ್ಮ ಅವರು ಕಾರ್ಯಕ್ರಮ ಉದ್ಘಾಟಿಸುವರು. ಶ್ರೀಮತಿ ಅಲ್ಲಂ ಸುಮಂಗಳಮ್ಮ ಸ್ಮಾರಕ ಮಹಿಳಾ ಪದವಿ ಪೂರ್ವ ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷರಾದ ಎಂ.ಕಾತ್ಯಾಯಿನಿ ಮರಿದೇವಯ್ಯ ಅವರು ಅಧ್ಯಕ್ಷತೆ ವಹಿಸುವರು. ಶ್ರೀಮತಿ ಅಲ್ಲಂ ಸುಮಂಗಳಮ್ಮ ಸ್ಮಾರಕ ಮಹಿಳಾ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರಾದ ಡಾ.ಬಿ.ಗೋವಿಂದರಾಜ, ಸೇಂಟ್ ಜಾನ್ಸ್ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರಾದ ಹೆಚ್.ಎಸ್.ಶಿವರಾಂ, ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರಾದ ಸುಲೇಖಾ.ಬಿ., ಸರ್ಕಾರಿ (ಮಾಜಿ ಪುರಸಭೆ) ಸಂಯುಕ್ತ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರಾದ ಪಿ.ನಾಗೇಶ್ವರ ರಾವ್, ವಾರ್ಡ್ಲಾ ಸಂಯುಕ್ತ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರಾದ ವಿಕ್ಟರ್ ಇಮ್ಯಾನುವೇಲ್ ಸೇರಿದಂತೆ ಇತರರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಶ್ರೀ ಸತ್ಯಂ ಶಿಕ್ಷಣ ಮಹಾವಿದ್ಯಾಲಯ ಸಹಾಯಕ ಪ್ರಾಧ್ಯಾಪಕರಾದ ಅಲಂಭಾಷ ಅವರು ವಿಶೇಷ ಉಪನ್ಯಾಸ ನೀಡುವರು. ಇಬ್ರಾಹಿಂಪುರದ ಹುಲುಗಪ್ಪ ಎಸ್.ಎಂ ತಂಡದಿAದ ಜಾನಪದ ಸಂಗೀತ ಪ್ರಸ್ತುತ ಪಡಿಸುವರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಂದ ಪ್ರಬಂಧ, ರಸಪ್ರಶ್ನೆ, ಆಶುಭಾಷಣ, ಕವನ ವಾಚನ, ಸ್ಪರ್ಧೆಗಳಲ್ಲಿ ವಿಜೇತರಿಗೆ ಪುಸ್ತಕ ರೂಪದಲ್ಲಿ ಬಹುಮಾನ ವಿತರಣೆ ಮಾಡಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ಅವರು ತಿಳಿಸಿದ್ದಾರೆ. -----------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ