ಸೋಮವಾರ, ಫೆಬ್ರವರಿ 10, 2025

ಫೆ.12 ರಂದು ಮಕ್ಕಳ ಆರೋಗ್ಯ ತಪಾಸಣೆ ಶಿಬಿರ ಮತ್ತು ಪಿಂಕ್ ವ್ಯಾನ್ ಜಾಥಾ ಕಾರ್ಯಕ್ರಮ

ಬಳ್ಳಾರಿ,ಫೆ.10(ಕರ್ನಾಟಕ ವಾರ್ತೆ): ಜಿಲ್ಲಾಡಳಿತ ಮತ್ತು ಭಾರತೀಯ ಮಕ್ಕಳ ತಜ್ಞ ವೈದ್ಯರ ಸಂಘ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಮಕ್ಕಳಲ್ಲಿನ ಅಪೌಷ್ಠಿಕತೆಯನ್ನು ಗುರ್ತಿಸಲು 5ನೇ ತರಗತಿಯಿಂದ 10ನೇ ತರಗತಿ ಒಳಗಿನ ಮಕ್ಕಳ ಆರೋಗ್ಯದ ತಪಾಸಣೆ ಮತ್ತು ಪಿಂಕ್ ವ್ಯಾನ್ ಜಾಥಾ ಕಾರ್ಯಕ್ರಮವನ್ನು ಫೆ.12 ರಂದು ಬೆಳಿಗ್ಗೆ 10 ಗಂಟೆಗೆ ಬಿ.ಡಿ.ಎ. ಪುಟ್ಬಾಲ್ ಮೈದಾನ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ಮಾರ್ಗ: ಪಿಂಕ್ ವ್ಯಾನ್ ಜೊತೆೆ ಕಾಲ್ನಡಿಗೆ ಜಾಥಾವು ಬೆಳಿಗ್ಗೆ 9 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಆವರಣದಿಂದ (ರೈಲ್ವೇ ಸ್ಟೇಷನ್ ಎದುರಿಗೆ) ಆರಂಭಗೊAಡು ಬಿ.ಡಿ.ಎ ಪುಟ್ಬಾಲ್ ಮೈದಾನದವರೆಗೆ ನಡೆಯಲಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆÉ ಅಧಿಕಾರಿಗಳು ತಿಳಿಸಿದ್ದಾರೆ. ------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ