ಬಳ್ಳಾರಿ,ಫೆ.12(ಕರ್ನಾಟಕ ವಾರ್ತೆ):
ಬೆಂಗಳೂರಿನ ಅಂಗವಿಕಲ ವ್ಯಕ್ತಿಗಳ ಅಧಿನಿಯಮದ ರಾಜ್ಯ ಆಯುಕ್ತರು ಜಿಲ್ಲೆಯಲ್ಲಿ ಅಂಗವಿಕಲ ವ್ಯಕ್ತಿಗಳ ಹಕ್ಕು ಅಧಿನಿಯಮ 2016 ಅನುಷ್ಠಾನ, ವಿಕಲಚೇತನರಿಗೆ ಮೀಸಲಿರಿಸಿದ ಶೇ.5 ಅನುದಾನದ ಬಳಕೆ ಹಾಗೂ ವಿಕಲಚೇತನರ ಕಾರ್ಯಕ್ರಮಗಳ ಅನುಷ್ಠಾನದ ಕುರಿತು ಫೆ.13 ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆ ನಡೆಸುವರು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಗೋವಿಂದಪ್ಪ ಅವರು ತಿಳಿಸಿದ್ದಾರೆ.
-----------
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ