ಶುಕ್ರವಾರ, ಫೆಬ್ರವರಿ 21, 2025
ಪರೀಕ್ಷಾ ಕೇಂದ್ರಗಳ ಸುತ್ತ 200 ಮೀ. ವ್ಯಾಪ್ತಿ ನಿಷೇಧಾಜ್ಞೆ ಜಾರಿಗೊಳಿಸಿ ಡಿಸಿ ಪ್ರಶಾಂತ್ ಕುಮಾರ್ ಮಿಶ್ರಾ ಆದೇಶ
ಬಳ್ಳಾರಿ,ಫೆ.21(ಕರ್ನಾಟಕ ವಾರ್ತೆ):
ನಗರದಲ್ಲಿ ಕರ್ನಾಟಕ ಲೋಕಸೇವಾ ಆಯೋಗದ ವತಿಯಿಂದ ಫೆ.23 ಮತ್ತು ಮಾ.02 ರಂದು ವಿವಿಧ ಇಲಾಖೆಗಳ ಗ್ರೂಪ್ ‘ಬಿ’ ಹೈದರಾಬಾದ್ ಕರ್ನಾಟಕ ವೃಂದದ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷಾ ಕೇಂದ್ರ ಸುತ್ತಲೂ 200 ಮೀಟರ್ ವ್ಯಾಪ್ತಿಯ ಪ್ರದೇಶವನ್ನು ಭಾರತೀಯ ನಾಗರೀಕ ಸುರಕ್ಷಾ ಸಂಹಿತಾ 2023ರ ಕಲಂ 163 ರ ಮೇರೆಗೆ ನಿರ್ಬಂಧಿತ ಪ್ರದೇಶ ಎಂದು ಘೋಷಿಸಿ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಆದೇಶಿಸಿದ್ದಾರೆ.
ಫೆ.23 ರಂದು ಸಾಮಾನ್ಯ ಪತ್ರಿಕೆಯು ಬೆಳಿಗ್ಗೆ 10 ಗಂಟೆಯಿAದ 11.30 ಗಂಟೆಯವರೆಗೆ ನಗರದ 11 ಪರೀಕ್ಷಾ ಕೇಂದ್ರಗಳಲ್ಲಿ ಮತ್ತು ಮಾ.02 ರಂದು ನಿರ್ದಿಷ್ಟ ಪತ್ರಿಕೆ-2 ಬೆಳಿಗ್ಗೆ 10 ಗಂಟೆಯಿAದ ಮಧ್ಯಾಹ್ನ 12 ಗಂಟೆಯವರೆಗೆ 12 ಪರೀಕ್ಷಾ ಕೇಂದ್ರಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳು ನಡೆಯಲಿವೆ. ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ವ್ಯಾಪ್ತಿಯಲ್ಲಿ ಇರುವ ಜೆರಾಕ್ಸ್, ಇಂಟರ್‌ನೆಟ್ ಸೆಂಟರ್‌ಗಳು ಕಾರ್ಯನಿರ್ವಹಿಸದಂತೆ ಪ್ರತಿಬಂಧಿಸಲು ಆದೇಶಿಸಿದ್ದು, ಅನಧಿಕೃತ ವ್ಯಕ್ತಿ ಮತ್ತು ವ್ಯಕ್ತಿಗಳ ಗುಂಪುಗಳಿಗೆ ಪ್ರವೇಶ ನಿಷೇಧಿಸಲಾಗಿದೆ.
ಈ ಆದೇಶವು ಪರೀಕ್ಷೆಯ ಮೇಲ್ವಿಚಾರಣೆ ಕಾರ್ಯನಿರ್ವಹಿಸುವ ಸಿಬ್ಬಂದಿಯವರಿಗೆ ಅನ್ವಯಿಸುವುದಿಲ್ಲ ಎಂದು ಅವರು ಆದೇಶದಲ್ಲಿ ತಿಳಿಸಿದ್ದಾರೆ.
----------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ