ಶುಕ್ರವಾರ, ಫೆಬ್ರವರಿ 14, 2025
ಫೆ.20 ರಂದು ಸಂತಕವಿ ಸರ್ವಜ್ಞ ಜಯಂತಿ ಕಾರ್ಯಕ್ರಮ
ಬಳ್ಳಾರಿ,ಫೆ.14(ಕರ್ನಾಟಕ ವಾರ್ತೆ):
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮಹಾನಗರ ಪಾಲಿಕೆ ಇವರ ಸಂಯುಕ್ತಾಶ್ರಯದಲ್ಲಿ ಸಂತಕವಿ ಸರ್ವಜ್ಞ ಜಯಂತಿ ಜಯಂತಿ ಕಾರ್ಯಕ್ರಮವನ್ನು ಫೆ.20 ರಂದು ಬೆಳಗ್ಗೆ 11.30 ಗಂಟೆಗೆ ನಗರದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮAದಿರದಲ್ಲಿ ಆಯೋಜಿಸಲಾಗಿದೆ.
ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು ಹಾಗೂ ಬಳ್ಳಾರಿ ಉಸ್ತುವಾರಿ ಸಚಿವ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ಅವರು ಕಾರ್ಯಕ್ರಮ ಉದ್ಘಾಟಿಸುವರು.
ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರು ಅಧ್ಯಕ್ಷತೆ ವಹಿಸುವರು.
ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷ ಹಾಗೂ ಶಾಸಕ ಜೆ.ಎನ್ ಗಣೇಶ್, ಸಂಸದರಾದ ಈ.ತುಕಾರಾಂ, ಕೆ.ರಾಜಶೇಖರ ಬಸವರಾಜ ಹಿಟ್ನಾಳ್, ಡಾ.ಸೈಯದ್ ನಾಸೀರ್ ಹುಸೇನ್, ಶಾಸಕರಾದ ಬಿ.ನಾಗೇಂದ್ರ, ವಿಧಾನಪರಿಷತ್ ಶಾಸಕರಾದ ಡಾ.ಚಂದ್ರಶೇಖರ್ ಬಿ.ಪಾಟೀಲ, ಶಾಸಕರಾದ ಬಿ.ಎಂ.ನಾಗರಾಜ, ಈ.ಅನ್ನಪೂರ್ಣ, ವಿಧಾನಪರಿಷತ್ ಶಾಸಕರಾದ ಶಶೀಲ್ ನಮೋಶಿ, ವೈ.ಎಂ.ಸತೀಶ್, ಡಾ.ಬಾಬು ಜಗಜೀವನ್‌ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುಂಡರಗಿ ನಾಗರಾಜ, ಮಹಾನಗರ ಪಾಲಿಕೆಯ ಮಹಾಪೌರರಾದ ಮುಲ್ಲಂಗಿ ನಂದೀಶ್, ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಜೆ.ಎಸ್.ಆಂಜನೇಯಲು, ಜಿಲ್ಲಾ ಶಾಲಿವಾಹನ ಕುಂಬಾರರ ಸಂಘದ ಅಧ್ಯಕ್ಷ ಕೆ.ರಂಗಸ್ವಾಮಿ ಸೇರಿದಂತೆ ಇತರರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ಅಧ್ಯಕ್ಷ ಕೆ.ಬಿ.ಸಿದ್ಧಲಿಂಗಪ್ಪ ಅವರು ಜಯಂತಿ ಕುರಿತು ವಿಶೇಷ ಉಪನ್ಯಾಸ ನೀಡುವರು.
ಕಾರ್ಯಕ್ರಮದಲ್ಲಿ ಸಂಡೂರಿನ ಟಿ.ವೆಂಕಟೇಶ್ ತಂಡದಿAದ ವಚನ ಸಂಗೀತ ಕಾರ್ಯಕ್ರಮ ಇರಲಿದೆ.
*ಮೆರವಣಿಗೆ:*
ಜಯಂತಿ ಅಂಗವಾಗಿ ಅಂದು ಬೆಳಗ್ಗೆ 09.30 ಗಂಟೆಗೆ ಮೆರವಣಿಗೆ ನಡೆಯಲಿದ್ದು, ಮೆರವಣಿಗೆಯು ಡಾ. ರಾಜ್‌ಕುಮಾರ್ ರಸ್ತೆಯ ಮುನ್ಸಿಪಾಲ್ ಕಾಲೇಜು ಮೈದಾನದಿಂದ ಆರಂಭವಾಗಿ ಗಡಿಗಿ ಚೆನ್ನಪ್ಪ ವೃತ್ತ- ಜಿಲ್ಲಾಧಿಕಾರಿ ಕಚೇರಿ ರಸ್ತೆ-ರೈಲ್ವೇ ಸ್ಟೇಷನ್ ರಸ್ತೆ- ಹೆಚ್.ಆರ್.ಗವಿಯಪ್ಪ ವೃತದ ಮೂಲಕ ಡಾ.ಜೋಳದರಾಶಿ ದೊಡ್ಡನಗೌಡ ರಂಗಮAದಿರದವರೆಗೆ ನಡೆಯಲಿದೆ.
ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭಾರಾಣಿ.ವಿ.ಜೆ., ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ, ಅಪರ ಜಿಲ್ಲಾಧಿಕಾರಿ ಮಹಮ್ಮದ್ ಎನ್.ಝುಬೇರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ಸೇರಿದಂತೆ ಇತರರು ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.
-----------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)


ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ