ಸೋಮವಾರ, ಫೆಬ್ರವರಿ 24, 2025
ಫೆ.24 ರಂದು ಪೂರ್ವಭಾವಿ ಸಿದ್ಧತಾ ಸಭೆ
ಬಳ್ಳಾರಿ,ಫೆ.24(ಕರ್ನಾಟಕ ವಾರ್ತೆ):
ಕುರುಗೋಡು ಪಟ್ಟಣದ ಶ್ರೀ ದೊಡ್ಡಬಸವೇಶ್ವರಸ್ವಾಮಿ ದೇವಸ್ಥಾನದ ವಾರ್ಷಿಕ ಮಹಾರಥೋತ್ಸವವು ಮಾ.14 ರಂದು ಜರುಗಲಿದ್ದು, ಭಕ್ತರು ಮತ್ತು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವುದರಿಂದ ದರ್ಶನ, ಕುಡಿಯುವ ನೀರು, ಸಾರಿಗೆ ವ್ಯವಸ್ಥೆ, ನೈರ್ಮಲೀಕರಣ, ಸ್ವಚ್ಛತೆ, ಬಂದೋಬಸ್ತ್ ಹಾಗೂ ವಿವಿಧ ಧಾರ್ಮಿಕ ಕಾರ್ಯಗಳು ಇತ್ಯಾದಿ ಕುರಿತು ಚರ್ಚಿಸಲು ಫೆ.24 ರಂದು ಸಂಜೆ 04 ಗಂಟೆಗೆ ಪಟ್ಟಣದ ಶ್ರೀ ದೊಡ್ಡಬಸವೇಶ್ವರಸ್ವಾಮಿ ದೇವಸ್ಥಾನದ ಆವರಣದಲ್ಲಿ ಪೂರ್ವಭಾವಿ ಸಿದ್ಧತಾ ಸಭೆ ನಡೆಸಲು ನಿಗದಿಪಡಿಸಿದೆ.
ರಾಜ್ಯ ಕೈಮಗ್ಗ ಅಭಿವೃದ್ಧಿ ನಿಗಮದ ಅಧ್ಯಕ್ಷರೂ ಆಗಿರುವ ಕಂಪ್ಲಿ ಶಾಸಕ ಜೆ.ಎನ್.ಗಣೇಶ್ ಅವರು ಸಭೆಯ ಅಧ್ಯಕ್ಷತೆ ವಹಿಸುವರು.
ಸಭೆಗೆ ಅಧಿಕಾರಿಗಳು ಹಾಗೂ ಮುಖಂಡರು ತಪ್ಪದೇ ಭಾಗವಹಿಸಬೇಕು ಎಂದು ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ಹನುಮಂತಪ್ಪ ಅವರು ತಿಳಿಸಿದ್ದಾರೆ.
-----------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ