ಶುಕ್ರವಾರ, ಫೆಬ್ರವರಿ 21, 2025

ಮಾ.26 ರಂದು ಪರಿಸರ ಸಾರ್ವಜನಿಕ ಆಲಿಕೆ ಸಭೆ

ಬಳ್ಳಾರಿ,ಫೆ.21(ಕರ್ನಾಟಕ ವಾರ್ತೆ): ಸಂಡೂರು ತಾಲ್ಲೂಕಿನ ಯಶವಂತನಗರ ಗ್ರಾಮದ ‘ರಾಮನದುರ್ಗ ಐರನ್ ಓರ್ ಮೈನ್’ನಲ್ಲಿ ಕುಮಾರಸ್ವಾಮಿ ಮಿನರಲ್ ಎಕ್ಸ್ಪೋರ್ಟ್ಸ್ ಪ್ರೆöÊವೇಟ್ ಲಿಮಿಟೆಡ್ ಇವರು ಈಗಾಗಲೇ ಅಸ್ತಿತ್ವದಲ್ಲಿರುವ ಒಟ್ಟು 59.36 ಹೆಕ್ಟೇರ್ ಅರಣ್ಯ ಪ್ರದೇಶದಲ್ಲಿ ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ಕಬ್ಬಿಣದ ಅದಿರಿನ ಗಣಿಗಾರಿಕೆಯ ವಾರ್ಷಿಕ ಉತ್ಪಾದನಾ ಸಾಮರ್ಥ್ಯವನ್ನು 2.8 ಮಿಲಿಯನ್ ಟನ್ ನಿಂದ 4.0 ಮಿಲಿಯನ್ ಟನ್‌ಗೆ ವಿಸ್ತರಿಸಲು (ಹೆಚ್ಚುವರಿ ವಾರ್ಷಿಕ ಉತ್ಪಾದನಾ ಸಾಮರ್ಥ್ಯ 1.2 ಮಿಲಿಯನ್ ಟನ್) ವಿಸ್ತರಣಾ ಪ್ರಸ್ತಾವನೆ ಸಲ್ಲಿಸಿದ್ದು, ಇದರ ಸಂಬAಧ ಪರಿಸರ ಸಾರ್ವಜನಿಕ ಆಲಿಕೆ ಸಭೆಯನ್ನು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರ ಅಧ್ಯಕ್ಷತೆಯಲ್ಲಿ ಮಾ.26 ರಂದು ಬೆಳಿಗ್ಗೆ 11 ಗಂಟೆಗೆ ಸಂಡೂರು ತಾಲ್ಲೂಕಿನ ಯಶವಂತನಗರ ಗ್ರಾಮದ ‘ರಾಮನದುರ್ಗ ಐರನ್ ಓರ್ ಮೈನ್’ (ಕುಮಾರಸ್ವಾಮಿ ಮಿನರಲ್ ಎಕ್ಸ್ಪೋರ್ಟ್ಸ್ ಪ್ರೆöÊವೇಟ್ ಲಿಮಿಟೆಡ್) ಯೋಜನಾ ಪ್ರದೇಶದಲ್ಲಿ ನಡೆಸಲು ತೀರ್ಮಾನಿಸಲಾಗಿದೆ. ಇದಕ್ಕೆ ಸಂಬAಧಿಸಿದAತೆ ಉದ್ದೇಶಿತ ಯೋಜನೆಯ ಕಾರ್ಯ ನಿರ್ವಾಹಕ ಸಾರಾಂಶ ಪ್ರತಿಯನ್ನು ಸಾರ್ವಜನಿಕರ ಮಾಹಿತಿಗಾಗಿ ಸಂಬAಧಿಸಿದ ಕಚೇರಿಗಳಲ್ಲಿ ಸಾರಾಂಶ ಪ್ರತಿಯನ್ನು ಸಾರ್ವಜನಿಕರ ಗಮನಕ್ಕೆ ಇಡಲಾಗಿದೆ. ಸುತ್ತಮುತ್ತಲಿನ ಸಾರ್ವಜನಿಕರು ಸಭೆಯಲ್ಲಿ ಪಾಲ್ಗೊಂಡು ಅಭಿಪ್ರಾಯ, ಅಹವಾಲು ಸಲ್ಲಿಸಬಹುದು ಎಂದು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಬಳ್ಳಾರಿ ಪ್ರಾದೇಶಿಕ ಕಚೇರಿಯ ಪರಿಸರ ಅಧಿಕಾರಿ ಸಿದ್ದೇಶ್ವರ ಬಾಬು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ