ಮಂಗಳವಾರ, ಫೆಬ್ರವರಿ 25, 2025

ಬಳ್ಳಾರಿ: ಫೆ.27 ರಂದು ರಾಜ್ಯ ಮಟ್ಟದ ಬುಡಕಟ್ಟು ಉತ್ಸವ ಆಯೋಜನೆಯ ಪೂರ್ವಭಾವಿ ಸಿದ್ಧತಾ ಸಭೆ

ಬಳ್ಳಾರಿ,ಫೆ.25(ಕರ್ನಾಟಕ ವಾರ್ತೆ): ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ 2024-25 ನೇ ಸಾಲಿನ ಪರಿಶಿಷ್ಟ ಪಂಗಡ ಉಪಯೋಜನೆಯಡಿ ರಾಜ್ಯ ಮಟ್ಟದ ಬುಡಕಟ್ಟು ಉತ್ಸವವನ್ನು ಮಾ.08 ರಂದು ಬಳ್ಳಾರಿಯಲ್ಲಿ ಆಯೋಜಿಸುವ ಕುರಿತು ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್ ಅಧ್ಯಕ್ಷತೆಯಲ್ಲಿ ಫೆ.27 ರಂದು ಬೆಳಿಗ್ಗೆ 11.30 ಗಂಟೆಗೆ ನಗರದ ಹಳೆಯ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ಆಯೋಜಿಸಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶನ ಬಿ.ನಾಗರಾಜ ಅವರು ತಿಳಿಸಿದ್ದಾರೆ. -----------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ