ಗುರುವಾರ, ಫೆಬ್ರವರಿ 27, 2025

ಫೆ.28 ರಂದು ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಕಾರ್ಯಕ್ರಮ

ಬಳ್ಳಾರಿ,ಫೆ.27(ಕರ್ನಾಟಕ ವಾರ್ತೆ): ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿ ಮತ್ತು ಜಿಲ್ಲಾ ಪಂಚಾಯತ್ ವತಿಯಿಂದ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಕಾರ್ಯಕ್ರಮವನ್ನು ಫೆ.28 ರಂದು ಬೆಳಿಗ್ಗೆ 10.30 ಕ್ಕೆ ಬಳ್ಳಾರಿ ತಾಲ್ಲೂಕಿನ ಮೋಕಾ ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಆಯೋಜಿಸಲಾಗಿದೆ. ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮುಹಮ್ಮದ್ ಹಾರಿಸ್ ಸುಮೇರ್ ಅವರು ಕಾರ್ಯಕ್ರಮ ಉದ್ಘಾಟಿಸುವರು. ಮೋಕಾ ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆಯ (ಪ್ರೌಢ ವಿಭಾಗ) ಉಪ ಪ್ರಾಂಶುಪಾಲರಾದ ಬಿ.ಭಾರತಿ ಅವರು ಅಧ್ಯಕ್ಷತೆ ವಹಿಸುವರು. ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ವಾಗೀಶ್ ಶಿವಾಚಾರ್ಯ ಎಸ್.ಎಂ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಬಿ.ಉಮಾದೇವಿ, ಕ್ಷೇತ್ರ ಶಿಕ್ಷಣಾಧಿಕಾರಿ ನಯೀಮುರ್ ರೆಹಮಾನ್ ಕೆ.ಎಸ್, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಚೇರಿಯ ಗಣಿತ ವಿಷಯ ನಿರ್ವಾಹಕರಾದ ಬಸವರಾಜ.ಎಂ ಹಾಗೂ ಇತರರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಸಂಪನ್ಮೂಲ ವ್ಯಕ್ತಿಗಳಾಗಿ ಸಿಂಧವಾಳ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ವಿಜ್ಞಾನ ಶಿಕ್ಷಕ ಹೆಚ್.ಪೀರ್ ಭಾಷಾ, ಮೋಕಾ ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆಯ (ಪ್ರೌಢ ವಿಭಾಗ) ಶಿಕ್ಷಕ ಎಸ್.ಎಂ ಹಿರೇಮಠ ಮತ್ತು ಜಿಲ್ಲಾ ಪಂಚಾಯತ್‌ನ ಜಿಲ್ಲಾ ಯೋಜನಾ ಸಂಯೋಜಕ ರಾಮ ಚಂದ್ರರೆಡ್ಡಿ ಜಿ.ಬಿ ಸೇರಿದಂತೆ ಶಾಲಾ ಸಿಬ್ಬಂದಿ ವರ್ಗ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ. ------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ