ಶನಿವಾರ, ಫೆಬ್ರವರಿ 1, 2025

ವಸತಿ ಶಾಲೆ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

ಬಳ್ಳಾರಿ,ಫೆ.01(ಕರ್ನಾಟಕ ವಾರ್ತೆ):
ಯಡಿ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ (ಆಂಗ್ಲ ಮಾಧ್ಯಮ) ಶಾಲೆ ಹಾಗೂ ಡಾ.ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆ (ಸಿಬಿಎಸಿಇ) ಗಳ 2025-26 ನೇ ಶೈಕ್ಷಣಿಕ ಸಾಲಿಗೆ 6 ನೇ ತರಗತಿಗೆ ಉಚಿತ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ವಿಠೋಬಾ ಹೊನಕಾಂಡೆ ಅವರು ತಿಳಿಸಿದ್ದಾರೆ. ಆಸಕ್ತಿಯುಳ್ಳ ಐದನೇ ತರಗತಿ ಉತ್ತೀರ್ಣ ಹೊಂದಿದ ವಿದ್ಯಾರ್ಥಿಗಳು ಸೇವಾಸಿಂಧು ಆನ್‌ಲೈನ್ ಪೋರ್ಟಲ್ https://sevasindhuservices.karnataka.gov.in ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನ ಮಾ.10 ಆಗಿರುತ್ತದೆ. *ಶಾಲೆಗಳ ವಿವರ:* ಬಳ್ಳಾರಿ ತಾಲ್ಲೂಕಿನ ಕೊಳಗಲ್ಲಿನ ಡಾ.ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆ(ಸಿ.ಬಿ.ಎಸ್.ಸಿ)ಯ ಪ್ರಾಂಶುಪಾಲರ ಮೊ.9844040035. ಸಂಡೂರು ತಾಲ್ಲೂಕಿನ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ಶಾಲೆಯ ಪ್ರಾಂಶುಪಾಲರ ಮೊ.9480933730. ಕಂಪ್ಲಿ ತಾಲ್ಲೂಕಿನ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ಶಾಲೆಯ ಪ್ರಾಂಶುಪಾಲರ ಮೊ.7353346069. *ತಾಲ್ಲೂಕು ಅಲ್ಪಸಂಖ್ಯಾತರ ವಿಸ್ತರಣಾಧಿಕಾರಿಗಳ ಸಂಪರ್ಕ ವಿವರ:* ಬಳ್ಳಾರಿ-8310321101, ಸಂಡೂರು-9036925966, 8660575061 ಮತ್ತು ಸಿರುಗುಪ್ಪ-9148889975. ಹೆಚ್ಚಿನ ಮಾಹಿತಿಗಾಗಿ ನಗರದ ಜೋಳದರಾಶಿ ದೊಡ್ಡನಗೌಡ ರಂಗಮAದಿರ ಹತ್ತಿರದ ಜಿಲ್ಲಾ ಅಲ್ಪಸಂಖ್ಯಾತರ ಜಿಲ್ಲಾ ಅಧಿಕಾರಿಗಳ ಕಾರ್ಯಾಲಯದ ದೂ.08392-200125/224, ಸಹಾಯವಾಣಿ ಕೇಂದ್ರ 8277799990 (24*7) ಅಥವಾ ತಾಲೂಕು ಅಲ್ಪ ಸಂಖ್ಯಾತರ ವಿಸ್ತರಣಾಧಿಕಾರಿಗಳ ಹಾಗೂ ಜಿಲ್ಲೆಯ ಎಲ್ಲಾ ಅಲ್ಪಸಂಖ್ಯಾತರ ತಾಲೂಕು ಮಾಹಿತಿ ಕೇಂದ್ರ, ಅಲ್ಪ ಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಿಗೆ ಭೇಟಿ ನೀಡಿ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. --------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ