ಮಂಗಳವಾರ, ಫೆಬ್ರವರಿ 4, 2025
ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ: ಸಹಾಯಧನಕ್ಕಾಗಿ ಅರ್ಜಿ ಆಹ್ವಾನ
ಬಳ್ಳಾರಿ,ಫೆ.04(ಕರ್ನಾಟಕ ವಾರ್ತೆ):
ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 2024-25ನೇ ಸಾಲಿಗೆ ಪರಿಶಿಷ್ಟ ಪಂಗಡದ ಅಭಿವೃದ್ಧಿಗಾಗಿ ಶ್ರಮಿಸುತ್ತಿರುವ ಹೊಸ ಎನ್‌ಜಿಓ ಸಂಸ್ಥೆಗಳು ಕೇಂದ್ರ ಸರ್ಕಾರದ ಸಹಾಯಧನ ಪಡೆಯಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಎನ್‌ಜಿಓ ಪೋರ್ಟಲ್ ಟಿgo.ಣಡಿibಚಿಟ.gov.iಟಿ ಗೆ ಭೇಟಿ ನೀಡಬಹುದು. ಫೆ.15 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿರುತ್ತದೆ.
ಕೇಂದ್ರ ಸರ್ಕಾರ ಹೊರಡಿಸಿರುವ ಪರಿಷ್ಕೃತ ಮಾರ್ಗಸೂಚಿಯನ್ವಯ ಸ್ವೀಕೃತವಾಗುವ ಪ್ರಸ್ತಾವನೆಗಳನ್ನು ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳ ತಪಾಸಣಾ ವರದಿಯ ಶಿಫಾರಸ್ಸಿನೊಂದಿಗೆ ದೃಢೀಕೃತ ಪ್ರತಿಯನ್ನು ರಾಜ್ಯದ ಶಿಫಾರಸ್ಸಿನೊಂದಿಗೆ 45 ದಿನಗಳೊಳಗಾಗಿ ಪ್ರಸ್ತಾವನೆಗಳನ್ನು ಆನ್‌ಲೈನ್ ನಲ್ಲಿ ಸಲ್ಲಿಸಿ ಹಾಗೂ ಹಾರ್ಡ್ ಕಾಪಿಯನ್ನು ಸಹ ಸಲ್ಲಿಸಬೇಕಾಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ನಗರದ ವಾಲ್ಮೀಕಿ ಭವನದ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ ಅಥವಾ ಬಳ್ಳಾರಿ, ಸಂಡೂರು, ಸಿರುಗುಪ್ಪ ತಾಲ್ಲೂಕುಗಳ ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಗೆ ಸಂಪರ್ಕಿಸಬಹುದು ಎಂದು ಎಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-----------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ