ಗುರುವಾರ, ಫೆಬ್ರವರಿ 13, 2025

ಸಿರುಗುಪ್ಪ: ಸ್ವ-ಸಹಾಯ ಸಂಘಗಳಿAದ ಅರ್ಜಿ ಆಹ್ವಾನ

ಬಳ್ಳಾರಿ,ಫೆ.13(ಕರ್ನಾಟಕ ವಾರ್ತೆ): ಸಿರುಗುಪ್ಪ ನಗರಸಭೆ ವ್ಯಾಪ್ತಿಯ ಡೇ-ನಲ್ಮ್ ಅಭಿಯಾನದಡಿ ಆಸ್ತಿ ತೆರಿಗೆ ಮತ್ತು ನೀರಿನ ಶುಲ್ಕ ವಸೂಲಾತಿಗಾಗಿ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ರಚಿತವಾದ ಅರ್ಹ ಮಹಿಳಾ ಸ್ವಸಹಾಯ ಸಂಘಗಳಿAದ ಅರ್ಜಿ ಆಹ್ವಾನಿಸಲಾಗಿದೆ ಎಂದು ಸಿರುಗುಪ್ಪ ನಗರಸಭೆ ಪೌರಯುಕ್ತರು ತಿಳಿಸಿದ್ದಾರೆ. ನಗರಸಭೆ ವ್ಯಾಪ್ತಿಯಲ್ಲಿ ಬಹು ದಿನಗಳಿಂದ ಬಾಕಿ ಇರುವ ಆಸ್ತಿ ತೆರಿಗೆ ಮತ್ತು ನೀರಿನ ಶುಲ್ಕ ವಸೂಲಾತಿ ಸಂಗ್ರಹಣೆ ಮಾಡಲು ತೊಡಗಿಸಿಕೊಳ್ಳಲಾಗುವುದು. ಆಸಕ್ತ ಮಹಿಳಾ ಸ್ವಸಹಾಯ ಸಂಘಗಳು ಸಿರುಗುಪ್ಪ ನಗರಸಭೆ ಕಾರ್ಯಾಲಯಕ್ಕೆ ಭೇಟಿ ನೀಡಿ ಅರ್ಜಿ ನಮೂನೆ ಪಡೆದುಕೊಂಡು, ಭರ್ತಿ ಮಾಡಿ ಫೆ.25 ರೊಳಗಾಗಿ ಸಲ್ಲಿಸಬೇಕು. *ಅರ್ಹತೆ:* ಮಹಿಳಾ ಸ್ವ-ಸಹಾಯ ಸಂಘವು ಡೇ-ನಲ್ಡ್ ಅಭಿಯಾನದಡಿ ನೋಂದಾಯಿಸಿರಬೇಕು ಹಾಗೂ ಪಂಚಸೂತ್ರಗಳನ್ನು ಅನುಸರಿಸುತ್ತಿರುಬೇಕು (ನಿರಂತರ ಸಭೆ, ನಿರಂತರ ಉಳಿತಾಯ, ಆಂತರಿಕ ಸಾಲ ವಿತರಣೆ, ನಿಯಮಿತ ಸಾಲ ಮರುಪಾವತಿ ಮತ್ತು ದಾಖಲಾತಿ ನಿರ್ವಹಣೆ). ಆಸಕ್ತ ಮಹಿಳಾ ಸ್ವ-ಸಹಾಯ ಸಂಘಗಳ ಸದಸ್ಯರು ಕನಿಷ್ಠ 7ನೇ ತರಗತಿಯವರೆಗೆ ಶಿಕ್ಷಣ ಹಾಗೂ ಎಲೆಕ್ಟಾçನಿಕ್ ಪರಿಕರ ಬಳಸುವ ಸಾಮರ್ಥ್ಯ ಹೊಂದಿರಬೇಕು. ಸ್ವ-ಸಹಾಯ ಸಂಘವು ಸಂಘದ ಹೆಸರಿನಲ್ಲಿ ಸಕ್ರೀಯ ಬ್ಯಾಂಕ್ ಖಾತೆಯನ್ನು ಹೊಂದಿರಬೇಕು. ಬ್ಯಾAಕಿನ ಮೂಲಕ ಅಥವಾ ಆಂತರಿಕ ಸಾಲ ಪಡೆದು ನಿಯಮಿತವಾಗಿ ಸಾಲ ಮರುಪಾವತಿ ಮಾಡಿರಬೇಕು. ಸ್ವ-ಸಹಾಯ ಗಂಪು ಸಂಬAಧಪಟ್ಟ ನಗರ ಸ್ಥಳೀಯ ಸಂಸ್ಥೆಯ ವ್ಯಾಪ್ತಿಯಲ್ಲಿ ಡೇ-ಎನ್‌ಯುಎಲ್‌ಎಂ ಅಭಿಯಾನದಡಿ ನೋಂದಾಯಿಸಿಕೊAಡು ಮಾನ್ಯತೆ ಇರುವ ಎಂ.ಐಎಸ್ ಕೋಡ್ ಹೊಂದಿರಬೇಕು. ಸ್ವ-ಸಹಾಯ ಗುಂಪು ರಚನೆಯಾಗಿ ಕನಿಷ್ಠ 03 ವರ್ಷ ಪೂರೈಸಿರಬೇಕು. ಸ್ವ-ಸಹಾಯ ಗುಂಪು ಮತ್ತು ಗುಂಪನ ಸದಸ್ಯರು ಯಾವುದೇ ಅಪರಾಧ ಅಥವಾ ಸಮಾಜ ವಿರೋಧಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿರುವ ಬಗ್ಗೆ ಹಿನ್ನಲೆಯನ್ನು ಹೊಂದಿರಬಾರದು. ಸಿರುಗುಪ್ಪ ನಗರಸಭೆಯಿಂದ ನಿಗದಿಪಡಿಸಿದ ಆಸ್ತಿ ತೆರಿಗೆ ಮತ್ತು ನೀರಿನ ಶುಲ್ಕ ವಸೂಲಾತಿ ಗುರಿಗೆ ತಕ್ಕಂತೆ ಕಾರ್ಯನಿರ್ವಹಿಸಲು ಆಸಕ್ತಿ ಮತ್ತು ಬದ್ಧತೆ ಹೊಂದಿರಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. -----------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ