ಸೋಮವಾರ, ಫೆಬ್ರವರಿ 17, 2025

ವ್ಯಕ್ತಿ ಕಾಣೆ: ಪತ್ತೆಗೆ ಮನವಿ

ಬಳ್ಳಾರಿ,ಫೆ.17(ಕರ್ನಾಟಕ ವಾರ್ತೆ): ನಗರದ ಶಾಸ್ತಿçನಗರ ಈಶ್ವರ ಗುಡಿ ಹಿಂಭಾಗದ ನಿವಾಸಿ ಶಾಡೋ ಫ್ಯಾಕ್ಸ್ ಕೊರಿಯರ್ ಕೆಲಸ ಮಾಡುತ್ತಿದ್ದ ಹೆಚ್.ವೀರೆಶ್ ಎನ್ನುವ 46 ವರ್ಷದ ವ್ಯಕ್ತಿಯು ಫೆ.04 ರಂದು ಕಾಣೆಯಾಗಿರುವ ಕುರಿತು ಕೌಲ್ ಬಜಾರ್ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪತ್ತೆಗೆ ಸಹಕರಿಸಬೇಕೆಂದು ಎಂದು ಸಬ್ ಇನ್ಸ್ಪೆಕ್ಟರ್ ಮನವಿ ಮಾಡಿದ್ದಾರೆ. ಕಾಣೆಯಾದ ವ್ಯಕ್ತಿಯ ಚಹರೆ: ಎತ್ತರ 5.5 ಅಡಿ, ಕೋಲು ಮುಖ, ಎಣ್ಣೆಗೆಂಪು ಮೈಬಣ್ಣ, ತೆಳುವಾದ ಮೈಕಟ್ಟು, ಮೊಣಕಾಲಿನ ಕೆಳಗಡೆ ಗಂಟುಗಳಿರುತ್ತವೆ. ಕಾಣೆಯಾದ ಸಂದರ್ಭದಲ್ಲಿ ಬಿಳಿ ಮತ್ತು ನೀಲಿ ಬಣ್ಣದ ಚೆಕ್ಸ್ ಶರ್ಟ್ ಮತ್ತು ಸಿಮೆಂಟ್ ಬಣ್ಣದ ಪ್ಯಾಂಟ್ ಧರಿಸಿರುತ್ತಾನೆ. ವ್ಯಕ್ತಿಯ ಬಗ್ಗೆ ಮಾಹಿತಿ ಸಿಕ್ಕಲ್ಲಿ ಕೌಲ್ ಬಜಾರ್ ಪೋಲಿಸ್ ಠಾಣೆಯ ದೂ.08392-240731,244145 ಪಿಎಸ್‌ಐ ಮೊ.94808203085, ಪಿಐ ಮೊ.9480803047 ಅಥವಾ ಬಳ್ಳಾರಿ ಪೋಲಿಸ್ ಕಂಟ್ರೋಲ್ ರೂಂ ದೂ.08392-258100 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ---------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ