ಶುಕ್ರವಾರ, ಫೆಬ್ರವರಿ 28, 2025
ಬಳ್ಳಾರಿ ಮಹಾನಗರ ಪಾಲಿಕೆ: ಪೌರಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ ಶಿಬಿರ
ಬಳ್ಳಾರಿ,ಫೆ.28(ಕರ್ನಾಟಕ ವಾರ್ತೆ):
ಆಯುರ್ವೇದ ಔಷಧಿಗಳನ್ನು ಬಳಸಬೇಕು. ಉಚಿತ ಆರೋಗ್ಯ ತಪಾಸಣೆ ಶಿಬಿರದಲ್ಲಿ ಭಾಗವಹಿಸಿ ಸದುಪಯೋಗ ಪಡೆದುಕೊಳ್ಳಬೇಕು ಎಂದು ಮಹಾನಗರ ಪಾಲಿಕೆಯ ಮಹಾಪೌರರಾದ ಮುಲ್ಲಂಗಿ ನಂದೀಶ್ ಅವರು ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆಯುಷ್ ಇಲಾಖೆ ಹಾಗೂ ಮಹಾನಗರ ಪಾಲಿಕೆ ಇವರ ಸಂಯುಕ್ತಾಶ್ರಯದಲ್ಲಿ ಪೌರ ಕಾರ್ಮಿಕರಿಗಾಗಿ ಮಹಾನಗರ ಪಾಲಿಕೆಯ ಸಭಾಂಗಣದಲ್ಲಿ ಗುರುವಾರ ಏರ್ಪಡಿಸಿದ್ದ ಉಚಿತ ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.
ಜಿಲ್ಲಾ ಆಯುಷ್ ಇಲಾಖೆ ಅಧಿಕಾರಿ ಡಾ.ಸರಳಾದೇವಿ ಬಿ.ಎಸ್ ಅವರು ಮಾತನಾಡಿ, ಜಿಲ್ಲೆಯ ಪೌರಕಾರ್ಮಿಕರು ಆಯರ್ವೇದ ಔಷಧಿಗಳನ್ನು ಬಳಸುವುದರಿಂದ ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು ಮತ್ತು ವ್ಯಾದಿ ಪ್ರತಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಬಹುದಾದ ಔಷಧಿಗಳು ಆಯುರ್ವೇದದಲ್ಲಿ ಇದ್ದು, ಅವುಗಳನ್ನು ನಿಯಮಿತವಾಗಿ ಬಳಸಲು ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ಪೌರಕಾರ್ಮಿಕರಿಗೆ ಉಚಿತ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರದಲ್ಲಿ ಸುಮಾರು 288 ಮಧುಮೇಹ ಮತ್ತು ರಕ್ತ ಛಾಪದ ಪರೀಕ್ಷೆ ಮಾಡಿ ಔಷಧಿಗಳನ್ನು ಉಚಿತವಾಗಿ ವಿತರಿಸಲಾಯಿತು.
ಈ ಸಂದರ್ಭದಲ್ಲಿ ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ, ಮಹಾನಗರ ಪಾಲಿಕೆಯ ಆಯುಕ್ತರು, ಮಹಾನಗರ ಪಾಲಿಕೆಯ ಪರಿಸರ ಆರೋಗ್ಯಾಧಿಕಾರಿ ಮುನಾಫ್ ಪಟೇಲ್, ಆಯುಷ್ ವೈದ್ಯರಾದ ಡಾ.ತಿಪ್ಪೇಸ್ವಾಮಿ, ಡಾ.ರಾಘವೇಂದ್ರ ಆಚಾರಿ, ಡಾ.ವಿಜಯೇಂದ್ರಾಚಾರ್, ಡಾ.ಟಿ.ಫಣೀಂಧರ, ಡಾ.ಶ್ರೀಗುರು ಮುರುಗೇಶ್, ಡಾ.ಕಲ್ಯಾಣಿ, ಡಾ.ರಾಜೇಶ್ವರಿ, ಡಾ.ಆರುಂಧತಿ ಮುಂತಾದ ಗಣ್ಯರು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.
----------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)




ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ