ಬುಧವಾರ, ಫೆಬ್ರವರಿ 5, 2025
ಬಳ್ಳಾರಿ ಜಿಲ್ಲಾ ಪಂಚಾಯತ್‌ಗೆ ‘ನರೇಗಾ ಪ್ರಶಸ್ತಿ’ | ನಾಲ್ಕು ವಿಭಾಗಗಳಲ್ಲಿ ಅತ್ಯುತ್ತಮ ಸಾಧನೆ
ಬಳ್ಳಾರಿ,ಫೆ.05(ಕರ್ನಾಟಕ ವಾರ್ತೆ):
2023-24ನೇ ಸಾಲಿನಲ್ಲಿ ಮಹಾತ್ಮಗಾಂಧಿ ನರೇಗಾ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿದ್ದಕ್ಕಾಗಿ ಬಳ್ಳಾರಿ ಜಿಲ್ಲಾ ಪಂಚಾಯತ್ ಗೆ ‘ನರೇಗಾ ಪ್ರಶಸ್ತಿ’ ಸೇರಿ ಒಟ್ಟು ನಾಲ್ಕು ವಿಭಾಗಗಳಲ್ಲಿ ಪುರಸ್ಕಾರ ಲಭಿಸಿದೆ.
*ಪ್ರಶಸ್ತಿ ವಿವರ(ಕಲ್ಬುರ್ಗಿ ವಿಭಾಗ):*
ಅತ್ಯುತ್ತಮ ಜಿಲ್ಲಾ ಪುರಸ್ಕಾರ- ಬಳ್ಳಾರಿ ಜಿಲ್ಲಾ ಪಂಚಾಯತಿ.
ಅತ್ಯುತ್ತಮ ಜಿಲ್ಲಾ ಒಗ್ಗೂಡಿಸುವಿಕೆ ಪುರಸ್ಕಾರ- ಅರಣ್ಯ ಇಲಾಖೆ.
ಅತ್ಯುತ್ತಮ ತಾಲ್ಲೂಕು ಪಂಚಾಯಿತಿ ಪುರಸ್ಕಾರ- ಸಂಡೂರು ತಾಲ್ಲೂಕು ಪಂಚಾಯಿತಿ.
ಅತ್ಯುತ್ತಮ ಗ್ರಾಮ ಪಂಚಾಯಿತಿ ಪುರಸ್ಕಾರ- ದಮ್ಮೂರು ಗ್ರಾಮ ಪಂಚಾಯಿತಿ, ಕುರುಗೋಡು ತಾಲ್ಲೂಕು.
ಬೆಂಗಳೂರಿನ ವಸಂತ ನಗರದ ಅಂಬೇಡ್ಕರ್ ಭವನದಲ್ಲಿ ಬುಧವಾರ ಆಯೋಜಿಸಿದ್ದ ನರೇಗಾ ಹಬ್ಬ-2025 ಕಾರ್ಯಕ್ರಮದಲ್ಲಿ ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ಪ್ರಶಸ್ತಿ ಪ್ರದಾನ ಮಾಡಿದರು.
ಬಳ್ಳಾರಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ ಅವರು ಪ್ರಶಸ್ತಿ ಸ್ವೀಕರಿಸಿದರು.
ಈ ವೇಳೆ ಗ್ರಾಮೀಣಾಭಿವೃದ್ಧಿ ಆಯುಕ್ತರಾದ ಪವನ್ ಕುಮಾರ್ ಮಾಲಪಾಟಿ, ಬಳ್ಳಾರಿ ಜಿಪಂ ಉಪಕಾರ್ಯದರ್ಶಿ ಗಿರಿಜಾ ಶಂಕರ್ ಹಾಗೂ ಇತರರು ಇದ್ದರು. ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಅಭಿನಂದಿಸಿದ್ದಾರೆ.
-------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ