ಮಂಗಳವಾರ, ಫೆಬ್ರವರಿ 4, 2025

ವ್ಯಕ್ತಿ ಕಾಣೆ: ಪತ್ತೆಗೆ ಮನವಿ

ಬಳ್ಳಾರಿ,ಫೆ.04(ಕರ್ನಾಟಕ ವಾರ್ತೆ) ತೋರಣಗಲ್ಲು (ಆರ್.ಎಸ್) ಪಟ್ಟಣದ ಬಿ.ಆರ್.ಕ್ಯಾಂಪ್‌ನ ನಿವಾಸಿ ಬಸವರಾಜ ಎನ್ನುವ 35 ವರ್ಷದ ವ್ಯಕ್ತಿಯು 2024ರ ಜು.07 ರಂದು ಕಾಣೆಯಾಗಿರುವ ಕುರಿತು ತೋರಣಗಲ್ಲು ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪತ್ತೆಗೆ ಸಹಕರಿಸಬೇಕೆಂದು ಎಂದು ಸಬ್ ಇನ್ಸ್ಪೆಕ್ಟರ್ ಮನವಿ ಮಾಡಿದ್ದಾರೆ. ವ್ಯಕ್ತಿಯ ಚಹರೆ: ಎತ್ತರ 5.6 ಅಡಿ, ಕೋಲು ಮುಖ, ಗೋದಿ ಮೈಬಣ್ಣ, ಸಾಧಾರಣ ಮೈಕಟ್ಟು ಹೊಂದಿದ್ದು, ಕಾಣೆಯಾದ ಸಂದರ್ಭದಲ್ಲಿ ಬಾದಾಮಿ ಬಣ್ಣದ ತುಂಬು ತೋಳಿನ ಅಂಗಿ ಮತ್ತು ಬಿಳಿ ಬಣ್ಣದ ಲುಂಗಿ ಧರಿಸಿರುತ್ತಾನೆ. ಕನ್ನಡ, ತೆಲುಗು ಭಾಷೆ ಮಾತಾನಾಡುತ್ತಾನೆ. ವ್ಯಕ್ತಿಯ ಬಗ್ಗೆ ಮಾಹಿತಿ ಸಿಕ್ಕಲ್ಲಿ ತೋರಣಗಲ್ಲು ಪೋಲಿಸ್ ಠಾಣೆಯ ದೂ.08395-250100, ಮೊ.9480803062 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ----------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ