ಬುಧವಾರ, ಫೆಬ್ರವರಿ 12, 2025

ಸಮಾಜ ಕಲ್ಯಾಣ ಇಲಾಖೆ: ಪ್ರಶಸ್ತಿಗೆ ಆರ್ಜಿ ಆಹ್ವಾನ

ಬಳ್ಳಾರಿ,ಫೆ.12(ಕರ್ನಾಟಕ ವಾರ್ತೆ): ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2025-26ನೇ ಸಾಲಿನಲ್ಲಿ ಏ.05 ರಂದು ರಂದು ಡಾ.ಬಾಬು ಜಗಜೀವನ ರಾಂ ಅವರ 118ನೇ ಜನ್ಮ ದಿನಾಚರಣೆ ಮತ್ತು ಏ.14 ರಂದು ಡಾ.ಬಿ.ಆರ್.ಅಂಬೇಡ್ಕರ್ ಅವರ 134ನೇ ಜನ್ಮ ದಿನಾಚರಣೆಯ ಅಂಗವಾಗಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಜನಾಂಗದವರ ಶ್ರೇಯಸ್ಸಿಗಾಗಿ ಪ್ರೋತ್ಸಾಹಿಸಿ, ಶ್ರಮಸಿ, ಗಣನೀಯ ಸೇವೆ ಸಲ್ಲಿಸಿದ ಅರ್ಹ ವ್ಯಕ್ತಿಗಳಿಗೆ ಪ್ರಶಸ್ತಿ ನೀಡಲು ಉದ್ದೇಶಿಸಲಾಗಿದ್ದು, ಅರ್ಹ ವ್ಯಕ್ತಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳನ್ನು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರ ಕಚೇರಿಯಲ್ಲಿ ಪಡೆದು ಭರ್ತಿ ಮಾಡಿ ಇದೇ ಕಚೇರಿಗೆ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಫೆ.25 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂ.08392-267932, ಮೊ.9480843023 ಗೆ ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಮಲ್ಲಿಕಾರ್ಜುನ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ