ಶುಕ್ರವಾರ, ಫೆಬ್ರವರಿ 14, 2025
ಕಂದಾಯ ಸೇವೆಗಳಲ್ಲಿ ವ್ಯತ್ಯಯ ಉಂಟಾದಲ್ಲಿ ಸಹಾಯವಾಣಿಗೆ ಸಂಪರ್ಕಿಸಿ
ಬಳ್ಳಾರಿ,ಫೆ.14(ಕರ್ನಾಟಕ ವಾರ್ತೆ):
ಜಿಲ್ಲೆಯ ಕಂದಾಯ ಘಟಕದ ವಿವಿಧ ಕಂದಾಯ ಸೇವೆಗಳಲ್ಲಿ ಯಾವುದೇ ರೀತಿಯ ವ್ಯತ್ಯಯ ಉಂಟಾದಲ್ಲಿ ಸಾರ್ವಜನಿಕರು ಜಿಲ್ಲಾಧಿಕಾರಿಗಳ ಕಚೇರಿಯ ಕಂಟ್ರೋಲ್ ರೂಂ ಸಂಖ್ಯೆ 08392-277100, ಮೊ.8277888866 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ತಿಳಿಸಿದ್ದಾರೆ.
ಜಿಲ್ಲೆಯ ಕಂದಾಯ ಘಟಕದ ಗ್ರಾಮ ಆಡಳಿತ ಅಧಿಕಾರಿಗಳು 3, 4 ದಿನಗಳಿಂದ ವಿವಿಧ ಬೇಡಿಕೆಗಳಿಗಾಗಿ ಮುಷ್ಕರ ಕೈಗೊಂಡಿದ್ದು, ಗ್ರಾಮ ಆಡಳಿತ ಅಧಿಕಾರಿಗಳು ಒದಗಿಸುವ ಕಂದಾಯ ಸೇವೆಗಳಲ್ಲಿ ಏನಾದರೂ ಮಾಹಿತಿಗಾಗಿ ಕೂಡಲೇ ಸಹಾಯವಾಣಿ ಸಂಖ್ಯೆಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
---------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ