ಬುಧವಾರ, ಫೆಬ್ರವರಿ 5, 2025
ಸ್ಥಗಿತಗೊಂಡ ಸಹಕಾರ ಸಂಘಗಳ ಸಮಾಪನೆ: ಆಕ್ಷೇಪಣೆಗಳಿದ್ದಲ್ಲಿ ಸಲ್ಲಿಸಿ
ಬಳ್ಳಾರಿ,ಫೆ.05(ಕರ್ನಾಟಕ ವಾರ್ತೆ):
ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕರ ಕಾರ್ಯಾಲಯಕ್ಕೆ ಒಳಪಡುವ ವಿವಿಧ ಸೌಹಾರ್ದ ಸಹಕಾರಿ ಸಂಘಗಳು ತಮ್ಮ ಉದ್ದೇಶಿತ ಕಾರ್ಯಚಟುವಟಿಕೆಗಳನ್ನು ನಿರ್ವಹಿಸದೇ ಸ್ಥಗಿತಗೊಂಡಿರುವುದರಿAದ ಅವುಗಳನ್ನು ಸಮಾಪನೆಗೊಳಿಸಲು ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿಗಮದ ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಯ ಜಿಲ್ಲಾ ಸಂಯೋಜಕರು ಶಿಫಾರಸ್ಸು ಮಾಡಿರುತ್ತಾರೆ. ಈ ಕುರಿತು ಯಾರಿಂದಲಾದರೂ ಆಕ್ಷೇಪಣೆಗಳಿದ್ದಲ್ಲಿ ಸಲ್ಲಿಸಬಹುದು.
ವಿಜಯನಗರ ಜಿಲ್ಲೆಯ ಹೊಸಪೇಟೆಯ ಗುರು ಗಾದಿಲಿಂಗೇಶ್ವರ ಪತ್ತಿನ ಸೌಹಾರ್ದ ಸಹಕಾರಿ ನಿಗಮ ಮತ್ತು ಹಗರಿಬೊಮ್ಮನಹಳ್ಳಿ ತಾಲ್ಲೂಕಿನ ಚಿಂತ್ರಪಳ್ಳಿಯ ವತ್ಸಲಾಬಾಯಿ ಮಹಿಳಾ ಮೈಕ್ರೋ ಫೈನಾನ್ಸ್ ಸೌಹಾರ್ದ ಸಹಕಾರಿ ನಿಗಮ, ಇವುಗಳು ತಮ್ಮ ಉದ್ದೇಶಿತ ಕಾರ್ಯಚಟುವಟಿಕೆಗಳನ್ನು ನಿರ್ವಹಿಸದೇ ಸ್ಥಗಿತಗೊಂಡಿರುತ್ತವೆ.
ಹಾಗಾಗಿ ಸೌಹಾರ್ದ ಸಹಕಾರಿ ಸಂಘಗಳನ್ನು ಕರ್ನಾಟಕ ಸೌಹಾರ್ದ ಸಹಕಾರಿ ಸಂಘಗಳ ಅಧಿನಿಯಮ, 1997 ರ 48(2)(ಬಿ) ರನ್ವಯ ಏಕೆ ಸಮಾಪನೆಗೊಳಿಸಬಾರದು ಎಂಬುವುದಕ್ಕೆ ಪ್ರಕಟಣೆಗೊಂಡ 7 ದಿನಗಳೊಳಗಾಗಿ ಸಂಘಗಳ ಕಾರ್ಯದರ್ಶಿಯವರಿಂದ ಅಥವಾ ಸದಸ್ಯರಿಂದ, ಇಲ್ಲವೇ ಯಾರಿಂದಲಾದರೂ ಆಕ್ಷೇಪಣೆಗಳಿದ್ದಲ್ಲಿ ಸೂಕ್ತ ದಾಖಲೆಗಳೊಂದಿಗೆ ನಗರದ ಜನತಾ ಬಜಾರ್ ಕಟ್ಟಡದ ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕರ ಕಾರ್ಯಾಲಯಕ್ಕೆ ಸಲ್ಲಿಸಬೇಕು.
ತಪ್ಪಿದಲ್ಲಿ ಸೌಹಾರ್ದ ಸಹಕಾರಿ ಸಂಘಗಳನ್ನು ನಿಯಮಾನುಸಾರ ಸಮಾಪನೆಗೆ ಕ್ರಮ ವಹಿಸಲಾಗುವುದು ಎಂದು ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-----------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ