ಬುಧವಾರ, ಫೆಬ್ರವರಿ 19, 2025
ವೃತ್ತ ನಾಮಕರಣ: ಆಕ್ಷೇಪಣೆಗಳಿಗೆ ಆಹ್ವಾನ
ಬಳ್ಳಾರಿ,ಫೆ.19(ಕರ್ನಾಟಕ ವಾರ್ತೆ):
ಬಳ್ಳಾರಿ ಮಹಾನಗರ ಪಾಲಿಕೆ ವ್ಯಾಪ್ತಿಯ ಅನಂತಪುರ ರಸ್ತೆಯಲ್ಲಿರುವ ಸರ್ಕಾರಿ ಅತಿಥಿ ಗೃಹದ ಮುಂಭಾಗ ವೃತ್ತಕ್ಕೆ ‘ಶ್ರೀ ಕೃಷ್ಣ’ ವೃತ್ತ ಎಂದು ಹೆಸರು ನಾಮಕರಣ ಮಾಡಲು ಪಾಲಿಕೆಯ ಸಾಮಾನ್ಯ ಸಭೆಯಲ್ಲಿ ಮಂಡಿಸಿದ್ದು, ಈ ಕುರಿತು ಸಾರ್ವಜನಿಕರಿಂದ ಸಲಹೆ ಹಾಗೂ ಆಕ್ಷೇಪಣೆಗಳಿದ್ದಲ್ಲಿ ಪ್ರಕಟಣೆಗೊಂಡ 30 ದಿನಗಳೊಳಗಾಗಿ ಲಿಖಿತ ರೂಪದಲ್ಲಿ ಮಹಾನಗರ ಪಾಲಿಕೆ ಕಚೇರಿಗೆ ಸಲ್ಲಿಸಬಹುದು.
ನಿಗಧಿತ ಅವಧಿಯೊಳಗೆ ಯಾವುದೇ ಆಕ್ಷೇಪಣೆಗಳು ಸಲ್ಲಿಕೆಯಾಗದಿದ್ದಲ್ಲಿ ಸರ್ಕಾರದ ಸುತ್ತೋಲೆಯ ಪ್ರಕಾರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಮಹಾನಗರ ಪಾಲಿಕೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ