ಸೋಮವಾರ, ಫೆಬ್ರವರಿ 24, 2025

ವ್ಯಕ್ತಿ ಕಾಣೆ: ಪತ್ತೆಗೆ ಮನವಿ

ಬಳ್ಳಾರಿ,ಫೆ.24(ಕರ್ನಾಟಕ ವಾರ್ತೆ): ತಾಲ್ಲೂಕಿನ ರೂಪನಗುಡಿ ಗ್ರಾಮದ ಪೋತಪ್ಪ ಗುಡಿ ಹತ್ತಿರ ನಿವಾಸಿ ಕೆ. ವಿರೇಶ್ ಎನ್ನುವ 32 ವರ್ಷದ ವ್ಯಕ್ತಿಯು ದಿನಾಂಕ 24-12-2024 ರಂದು ಕಾಣೆಯಾಗಿರುವ ಕುರಿತು ಪಿ.ಡಿ.ಹಳ್ಳಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪತ್ತೆಗೆ ಸಹಕರಿಸಬೇಕೆಂದು ಎಂದು ಸಬ್ ಇನ್ಸ್ ಪೆಕ್ಟರ್ ಮನವಿ ಮಾಡಿದ್ದಾರೆ. ಕಾಣೆಯಾದ ವ್ಯಕ್ತಿಯ ಚಹರೆ: ಎತ್ತರ 5.5 ಅಡಿ, ಕೋಲು ಮುಖ, ಗೋದಿ ಮೈಬಣ್ಣ, ಸಾಧಾರಣ ಮೈಕಟ್ಟು ಹೊಂದಿದ್ದು, ಕಾಣೆಯಾದ ಸಂದರ್ಭದಲ್ಲಿ ತಿಳಿ ಹಸಿರು ಬಣ್ಣದ ಶರ್ಟ್ ಮತ್ತು ನೀಲಿ ಬಣ್ಣದ ಲುಂಗಿ ಧರಿಸಿರುತ್ತಾನೆ. ಕನ್ನಡ ಮತ್ತು ತೆಲುಗು ಭಾಷೆ ಮಾತನಾಡುತ್ತಾನೆ. ವ್ಯಕ್ತಿಯ ಬಗ್ಗೆ ಮಾಹಿತಿ ಸಿಕ್ಕಲ್ಲಿ ಬಳ್ಳಾರಿ ಪೊಲೀಸ್ ಕಂಟ್ರೋಲ್ ರೂಂ ದೂ.08392-258100, 102 ಬಳ್ಳಾರಿ ಎಸ್.ಪಿ ಅವರ ಕಛೇರಿ ದೂ. 08392-258400, ಸಿರುಗುಪ್ಪ ಡಿ.ಎಸ್.ಪಿ ದೂ.08392-276000, ಪಿ.ಡಿ.ಹಳ್ಳಿ ವೃತ್ತ ಸಿ.ಪಿ.ಐ ಮೊ.08392-276461, ಪಿ.ಡಿ.ಹಳ್ಳಿ ಪೊಲೀಸ್ ಠಾಣೆ ದೂ.08392-265010 ಮತ್ತು ಪಿಎಸ್‌ಐ ಮೊ.9480803052 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. -----------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ