ಬುಧವಾರ, ಫೆಬ್ರವರಿ 12, 2025
ಬಳ್ಳಾರಿ ಮಹಾನಗರ ಪಾಲಿಕೆ: ಸ್ವ-ಸಹಾಯ ಸಂಘಗಳಿAದ ಅರ್ಜಿ ಆಹ್ವಾನ
ಬಳ್ಳಾರಿ,ಫೆ.12(ಕರ್ನಾಟಕ ವಾರ್ತೆ):
ಬಳ್ಳಾರಿ ಮಹಾನಗರ ಪಾಲಿಕೆ ವತಿಯಿಂದ ಅಮೃತ್ 2.0 ಅಭಿಯಾನದ ಡೇ-ನಲ್ಮ್ ಅಭಿಯಾನದಡಿ ಆಸ್ತಿ ತೆರಿಗೆ ಮತ್ತು ನೀರಿನ ಶುಲ್ಕ ವಸೂಲಾತಿಗಾಗಿ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ರಚಿತವಾದ ಅರ್ಹ ಸ್ವಸಹಾಯ ಸಂಘಗಳಿAದ ಅರ್ಜಿ ಆಹ್ವಾನಿಸಲಾಗಿದೆ ಎಂದು ಮಹಾನಗರಪಾಲಿಕೆ ಆಯುಕ್ತರು ತಿಳಿಸಿದ್ದಾರೆ.
ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬಹು ದಿನಗಳಿಂದ ಬಾಕಿ ಇರುವ ಆಸ್ತಿ ತೆರಿಗೆ ಮತ್ತು ನೀರಿನ ಶುಲ್ಕ ವಸೂಲಾತಿ ಸಂಗ್ರಹಣೆ ಮಾಡಲು ತೊಡಗಿಸಿಕೊಳ್ಳಲಾಗುವುದು.
ಆಸಕ್ತ ಸ್ವಸಹಾಯ ಸಂಘಗಳು ಮಹಾನಗರ ಪಾಲಿಕೆ ಬಳ್ಳಾರಿ ಭೇಟಿ ನೀಡಿ ಅರ್ಜಿ ನಮೂನೆ ಪಡೆದುಕೊಂಡು, ಭರ್ತಿ ಮಾಡಿ ಫೆ.28 ರೊಳಗಾಗಿ ಸಲ್ಲಿಸಬೇಕು.
*ಅರ್ಹತೆ:*
ಸ್ವಸಹಾಯ ಸಂಘವು ಡೇ-ನಲ್ಡ್ ಅಭಿಯಾನದಡಿ ನೋಂದಾಯಿಸಿರಬೇಕು (ಎಂಐಎಸ್ ಕೋಡ್ ಹೊಂದಿರಬೇಕು) ಹಾಗೂ ಪಂಚಸೂತ್ರಗಳನ್ನು ಅನುಸರಿಸುತ್ತಿರಬೇಕು. ಆಸಕ್ತ ಸ್ವಸಹಾಯ ಸಂಘದ ಸದಸ್ಯರು ಕನಿಷ್ಠ 7ನೇ ತರಗತಿಯವರೆಗೆ ಶಿಕ್ಷಣವನ್ನು ಹಾಗೂ ಎಲೆಕ್ಟಾçನಿಕ್ ಪರಿಕರಗಳನ್ನು ಬಳಸುವ ಸಾಮರ್ಥ್ಯ ಹೊಂದಿರಬೇಕು.
ಸ್ವಸಹಾಯ ಸಂಘದ ಹೆಸರಿನಲ್ಲಿ ಸಕ್ರಿಯ ಬ್ಯಾಂಕ್ ಖಾತೆಯನ್ನು ಹೊಂದಿರಬೇಕು. ಸ್ವಸಹಾಯ ಗುಂಪು ರಚನೆಯಾಗಿ ಕನಿಷ್ಠ 3 ವರ್ಷ ಪೂರೈಸಿರಬೇಕು. ಬ್ಯಾಂಕಿನ ಮೂಲಕ ಅಥವಾ ಆಂತರಿಕ ಸಾಲ ಪಡೆದು ನಿಯಮಿತವಾಗಿ ಸಾಲ ಮರು ಪಾವತಿ ಮಾಡಿರಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-----------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ