ಶುಕ್ರವಾರ, ಫೆಬ್ರವರಿ 28, 2025
ವೈಜ್ಞಾನಿಕ ಪ್ರಗತಿಗೆ ಯುವಕರನ್ನು ಪ್ರೇರೇಪಿಸಿ: ಡಾ ಮೊಹ್ಮದ್ ಮುಸ್ತಫಾ
ಬಳ್ಳಾರಿ,ಫೆ.28(ಕರ್ನಾಟಕ ವಾರ್ತೆ):
ದೇಶದ ಉತ್ತಮ ಭವಿಷ್ಯಕ್ಕಾಗಿ ವೈಜ್ಞಾನಿಕ ಪ್ರಗತಿಯನ್ನು ಮುಂದುವರೆಸಲು ಯುವ ಮನಸ್ಸುಗಳನ್ನು ಪ್ರೇರೇಪಿಸುವ ಗುರಿಯನ್ನು ನಾವೆಲ್ಲರೂ ಹೊಂದಬೇಕು ಎಂದು ಪುಣೆಯ ಇಂಡಿಯನ್ ಇನ್ಸಿ÷್ಟಟ್ಯೂಟ್ ಆಫ್ ಸೈನ್ಸ್ ಆ್ಯಂಡ್ ಎಜುಕೇಶನ್ ರಿಸರ್ಚ್ ಸಂಸ್ಥೆಯ ಪ್ರಾಧ್ಯಾಪಕರಾದ ಡಾ ಮೊಹ್ಮದ್ ಮುಸ್ತಫಾ ಹೇಳಿದರು.
ರಾಷ್ಟಿçÃಯ ವಿಜ್ಞಾನ ದಿನದ ಅಂಗವಾಗಿ ಆಯೋಜಿಸಿದ್ದ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಜೀವ ವಿಜ್ಞಾನ ಸಭಾಂಗಣದಲ್ಲಿ “ವಿಜ್ಞಾನ ಮತ್ತು ನಾವೀನ್ಯತೆಯಲ್ಲಿ ಜಾಗತಿಕ ನಾಯಕತ್ವಕ್ಕಾಗಿ ಭಾರತೀಯ ಯುವಕರ ಸಬಲೀಕರಣ’’ ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸದಲ್ಲಿ ಅವರು ಮಾತನಾಡಿದÀರು.
ನೂತನ ಆವಿಷ್ಕಾರಗಳು ವಿಜ್ಞಾನ ಕ್ಷೇತ್ರದಲ್ಲಿ ಹೊಸ ಮೈಲಿಗಲ್ಲುಗಳಿಂದ ಗುರುತಿಸಲ್ಪಡುತ್ತವೆ. ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ವಿದ್ಯಾರ್ಥಿಗಳು ಹೆಚ್ಚಾಗಿ ತೊಡಗಿಸಿಕೊಳ್ಳಬೇಕು. ಜೀವನದ ಗುಣಮಟ್ಟವನ್ನು ಸುಧಾರಿಸುವಲ್ಲಿ ವೈಜ್ಞಾನಿಕ ಸಂಶೋಧನೆಯ ಪ್ರಾಮುಖ್ಯತೆ ಬಗ್ಗೆ ವಿಸ್ತೃತವಾಗಿ ತಿಳಿಸಿದರು.
ವಿಶ್ವವಿದ್ಯಾಲಯದ ಕುಲಸಚಿವರಾದ ಎಸ್.ಎನ್ ರುದ್ರೇಶ್ ಮಾತನಾಡಿ, ವಿದ್ಯಾರ್ಥಿಗಳು ಕಲಿಕೆಯಲ್ಲಿ ವೈಜ್ಞಾನಿಕ ಮನೋಭಾವವನ್ನು ಹೊಂದಿರಬೇಕು. ವಿಜ್ಞಾನದ ಪರಂಪರೆಯು ಒಂದು ಸಾರ್ವತ್ರಿಕ ಅಭಿಯಾನದಂತೆ ಜಗತ್ತಿನಲ್ಲಿ ಪರಿಗಣಿಸಲಾಗಿದೆ ಎಂದು ಹೇಳಿದರು. ಡಾ. ಅಬ್ದುಲ್ ಕಲಾಂ, ಪ್ರೊ. ಸಿ.ವಿ.ರಾಮನ್‌ರಂತಹ ವ್ಯಕ್ತಿಗಳನ್ನು ಮಾದರಿಯಾಗಿ ವಿದ್ಯಾರ್ಥಿಗಳು ತಮ್ಮಲ್ಲಿ ಅಳವಡಿಕೊಳ್ಳಬೇಕು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ. ಎಂ. ಮುನಿರಾಜು ಮಾತನಾಡಿ, ದೇಶದ ಯುವಕರು ವಿಜ್ಞಾನ ಕ್ಷೇತ್ರದತ್ತ ಮತ್ತಷ್ಟು ಆಸಕ್ತಿ ಬೆಳೆಸಿಕೊಳ್ಳಬೇಕು. ದೇಶದ ಪ್ರತಿಷ್ಠಿತ ವಿಜ್ಞಾನಿಗಳಿಂದ ಸ್ಪೂರ್ತಿ ಪಡೆದು, ಹೊಸ ಅವಿಷ್ಕಾರಗಳಿಗೆ ಮುಂದಾಗಬೇಕು. ವೈಜ್ಞಾನಿಕ ಸಂಶೋಧನೆ ಮತ್ತು ತಾಂತ್ರಿಕ ಪ್ರಗತಿಯಲ್ಲಿ ನಮ್ಮ ದೇಶವು ವಿಶ್ವಕ್ಕೆ ಮಾದರಿಯಾಗುವ ನಿಟ್ಟಿನಲ್ಲಿ ನಾವು-ನೀವೆಲ್ಲ ಕೆಲಸ ಮಾಡೋಣ ಎಂದು ವಿದ್ಯಾರ್ಥಿಗಳಿಗೆ ಹೇಳಿದರು.
ರಾಜ್ಯ ಸರ್ಕಾರದ ನಿರ್ದೇಶನದಂತೆ ಕಾರ್ಯಕ್ರಮದಲ್ಲಿ ನೆರೆದಿದ್ದ ಎಲ್ಲರೂ ಬೆಳಿಗ್ಗೆ 10.30ಕ್ಕೆ ವಿಜ್ಞಾನ ಪ್ರತಿಜ್ಞಾ ವಿಧಿಯನ್ನು ಸ್ವೀಕರಿಸಿದರು.
ಈ ಸಂದರ್ಭದಲ್ಲಿ ವಿಶ್ವವಿದ್ಯಾಲಯದ ಜೀವ ವಿಜ್ಞಾನದ ವಿಭಾಗದ ಡೀನರಾದ ಪ್ರೊ. ಶಶಿಕಾಂತ್ ಮಜಗಿ, ಶುದ್ಧ ವಿಜ್ಞಾನ ನಿಕಾಯದ ಡೀನರಾದ ಪ್ರೊ. ಹನುಮೇಶ್ ವೈದ್ಯ, ಕಾರ್ಯಕ್ರಮ ಸಂಯೋಜಕರಾದ ಪ್ರೊ. ಕೆ.ಎಸ್. ಲೊಕೇಶ್ ಸೇರಿದಂತೆ ವಿವಿಧ ನಿಕಾಯಗಳ ಡೀನರು, ವಿಭಾಗಗಳ ಮುಖ್ಯಸ್ಥರು, ಬೋಧಕರು, ಸಂಶೋಧನಾ ವಿದ್ಯಾರ್ಥಿಗಳು, ಬೋಧಕೇತರ ಸಿಬ್ಬಂದಿ ಮತ್ತು ವಿಜ್ಞಾನ ವಿಭಾಗಗಳ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
----------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)


ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ