ಮಂಗಳವಾರ, ಫೆಬ್ರವರಿ 11, 2025
ಕುಡತಿನಿ: ವಿವಿಧ ಸೌಲಭ್ಯಗಳಿಗಾಗಿ ಅರ್ಜಿ ಆಹ್ವಾನ
ಬಳ್ಳಾರಿ,ಫೆ.11(ಕರ್ನಾಟಕ ವಾರ್ತೆ):
ಕುಡತಿನಿ ಪಟ್ಟಣ ಪಂಚಾಯಿತಿ ವತಿಯಿಂದ 2019-20 ಮತ್ತು 2022-23ನೇ ಸಾಲಿನ ಶೇ.5ರ ಎಸ್‌ಎಸ್‌ಪಿ, ಟಿಎಸ್‌ಪಿ ಯೋಜನೆಯ ವೈಯಕ್ತಿಕ ಕಾರ್ಯಕ್ರಮದಡಿ ವಿವಿಧ ಸೌಲಭ್ಯಗಳಿಗಾಗಿ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕುಡತಿನಿ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ತಿಳಿಸಿದ್ದಾರೆ.
ಕುಡತಿನಿ ಪಟ್ಟಣದ ಪರಿಶಿಷ್ಟ ಜಾತಿಯ ಮೆಡಿಕಲ್ ಮತ್ತು ಇಂಜಿನಿಯರಿAಗ್ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ಖರೀದಿಸಲು ರೂ.0.72 ಲಕ್ಷ, ಪರಿಶಿಷ್ಟ ಪಂಗಡದ ಮೆಡಿಕಲ್ ಮತ್ತು ಇಂಜಿನಿಯರಿAಗ್ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ಖರೀದಿಸಲು ರೂ.0.78 ಲಕ್ಷ ಮತ್ತು ವಿಕಲಚೇತನರಿಗೆ ಸ್ವಯಂ ಉದ್ಯೋಗಕ್ಕಾಗಿ ರೂ.1.48 ಲಕ್ಷ ಸಹಾಯಧನ ನೀಡಲಾಗುವುದು.
ಕಚೇರಿಯಿಂದ ಅರ್ಜಿ ಪಡೆದು ಅಗತ್ಯ ದಾಖಲೆಗಳೊಂದಿಗೆ ಭರ್ತಿ ಮಾಡಿ ಫೆ.19 ರೊಳಗಾಗಿ ಇದೇ ಕಚೇರಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಕುಡುತಿನಿ ಪಟ್ಟಣ ಪಂಚಾಯಿತಿ ಕಾರ್ಯಾಲಯ ಅಥವಾ ದೂ.08392-248025 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
--------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ