ಮಂಗಳವಾರ, ಫೆಬ್ರವರಿ 4, 2025

ಅನಾಮಧೇಯ ಮೃತ ವ್ಯಕ್ತಿಯ ವಾರಸುದಾರರ ಪತ್ತೆಗೆ ಮನವಿ

ಬಳ್ಳಾರಿ,ಫೆ.04(ಕರ್ನಾಟಕ ವಾರ್ತೆ): ನಗರದ ಕೆಎಸ್‌ಆರ್‌ಟಿಸಿ ಬಸ್ ಡಿಪೋ ಮುಂಭಾಗ ಸುಮಾರು 45-50 ವರ್ಷದ ಅನಾಮಧೇಯ ವ್ಯಕ್ತಿಯು ಅಸ್ವಸ್ಥರಾಗಿ, ಯಾವುದೋ ಖಾಯಿಲೆಯಿಂದ ಫೆ.02 ರಂದು ಮೃತಪಟ್ಟಿದ್ದು, ಮೃತನ ವಾರಸುದಾರರ ಬಗ್ಗೆ ಮಾಹಿತಿ ಇರುವುದಿಲ್ಲ. ಮೃತನ ವಾರಸುದಾರರ ಪತ್ತೆಗೆ ಸಹಕರಿಸಬೇಕು ಎಂದು ಬ್ರೂಸ್‌ಪೇಟೆ ಪೊಲೀಸ್ ಠಾಣೆಯ ಠಾಣಾಧಿಕಾರಿಗಳು ಮನವಿ ಮಾಡಿದ್ದಾರೆ. ಚಹರೆ: ಅಂದಾಜು 5.5 ಅಡಿ, ತೆಳುವಾದ ಮೈಕಟ್ಟು, ಎಣ್ಣೆಗೆಂಪು ಮೈಬಣ್ಣ, ಕೋಲು ಮುಖ, ತಲೆಯ ಮೇಲೆ ಚಿಕ್ಕ ಕಪ್ಪು ಕೂದಲು, ಮುಖದಲ್ಲಿ ಕಪ್ಪು ಮೀಸೆ, ಮುಖದ ಬಲಭಾಗದ ಕನ್ನೆ ಮೇಲೆ ಕಪ್ಪು ಮಚ್ಚೆ ಹಾಗೂ ಬಲಗೈಯಲ್ಲಿ ಅಮ್ಮ ಎಂದು ಹಚ್ಚೆ ಇರುತ್ತದೆ. ನೀಲಿ ಬಣ್ಣದ ಶರ್ಟ್ ಧರಿಸಿರುತ್ತಾರೆ. ವಾರಸುದಾರರ ಬಗ್ಗೆ ಮಾಹಿತಿ ಸಿಕ್ಕಲ್ಲಿ ಬ್ರೂಸ್‌ಪೇಟೆ ಪೊಲೀಸ್ ಠಾಣೆಯ ದೂ.08392-272022, ಪಿಎಸ್‌ಐ ಮೊ.9480803081, ಪಿಐ ಮೊ.9480803045 ಅಥವಾ ಬಳ್ಳಾರಿ ಪೊಲೀಸ್ ಕಂಟ್ರೋಲ್ ರೂಂ ದೂ.08392-258100, 258102 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. -----------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ