ಸೋಮವಾರ, ಫೆಬ್ರವರಿ 10, 2025
ವ್ಯಕ್ತಿ ನಾಪತ್ತೆ: ಪತ್ತೆಗೆ ಮನವಿ
ಬಳ್ಳಾರಿ,ಫೆ.10(ಕರ್ನಾಟಕ ವಾರ್ತೆ):
ನಗರದ ಬ್ರೂಸ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸೋಮ ದೇವೆಂದ್ರ ಎನ್ನುವ 31 ವರ್ಷದ ವ್ಯಕ್ತಿಯು ಫೆ.08 ರಂದು ನಗರದ ಬುಡಾ ಕಾಂಪ್ಲೆಕ್ಸ್ ಎದುರುಗಡೆಯ ರಾಯದುರ್ಗ ಬಸ್ ಸ್ಟಾö್ಯಂಡ್ ನಿಂದ ಕಾಣೆಯಾಗಿದ್ದು, ಈ ಕುರಿತು ಪ್ರಕರಣ ದಾಖಲಾಗಿದ್ದು, ಪತ್ತೆಗೆ ಸಹಕರಿಸಬೇಕು ಎಂದು ಪೊಲೀಸ್ ಸಬ್-ಇನ್ಸ್ಪೆಕ್ಟರ್ ಅವರು ತಿಳಿಸಿದ್ದಾರೆ.
ಚಹರೆ ಗುರುತು:
ಅಂದಾಜು 5.1 ಅಡಿ, ಕೋಲುಮುಖ, ಗೋಧಿ ಮೈಬಣ್ಣ, ಸಾಧರಣ ಮೈಕಟ್ಟು, ಕಪ್ಪು ಕೂದಲು ಹೊಂದಿರುತ್ತಾನೆ. ಬಲಗೈನಲ್ಲಿ ಹಿತ್ತಾಳೆಯ ಕಡಗ ಹಾಕಿಕೊಂಡಿರುತ್ತಾನೆ. ಕಾಣೆಯಾದ ಸಂದರ್ಭದಲ್ಲಿ ನೀಲಿ ಬಣ್ಣದ ಅಂಗಿ, ತಿಳಿ ನೀಲಿ ಬಣ್ಣದ ಜೀನ್ಸ್ ಪ್ಯಾಂಟ್ ಧರಿಸಿರುತ್ತಾನೆ. ಕನ್ನಡ, ತೆಲುಗು, ಹಿಂದಿ ಭಾಷೆ ಮಾತನಾಡುತ್ತಾನೆ.
ವ್ಯಕ್ತಿಯ ಬಗ್ಗೆ ಸುಳಿವು ಸಿಕ್ಕಲ್ಲಿ ಬ್ರೂಸ್‌ಪೇಟೆ ಪೊಲೀಸ್ ಠಾಣೆಯ ದೂ.08392-272022, ಪಿಐ ಮೊ.9480803045, 9480803081 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
---------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ