ಶನಿವಾರ, ಫೆಬ್ರವರಿ 1, 2025

ಕೆಕೆಆರ್‌ಟಿಸಿ ಬಳ್ಳಾರಿ: ‘ಮಹಾಕುಂಭಮೇಳ’ ಕ್ಕೆ ವಿಶೇಷ ಬಸ್ ಸೌಲಭ್ಯ

ಬಳ್ಳಾರಿ,ಫೆ.01(ಕರ್ನಾಟಕ ವಾರ್ತೆ): ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಬಳ್ಳಾರಿ ವಿಭಾಗದ ವತಿಯಿಂದ ಉತ್ತರ ಪ್ರದೇಶ ರಾಜ್ಯದ ಪ್ರಯಾಗರಾಜ್ ನಲ್ಲಿ ನಡೆಯುತ್ತಿರುವ ಐತಿಹಾಸಿಕ ‘ಮಹಾಕುಂಭಮೇಳ’ ಕ್ಕೆ ಹೋಗುವ ಭಕ್ತಾಧಿಗಳ ಅನುಕೂಲಕ್ಕಾಗಿ ಸಾಂಧರ್ಬಿಕ ಒಪ್ಪಂದದ ಮೇರೆಗೆ ವಿಶೇಷ ಬಸ್ಸುಗಳನ್ನು ಒದಗಿಸಲಾಗುತ್ತಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ಇನಾಯತ್ ಬಾಗ್‌ಬಾನ್ ಅವರು ತಿಳಿಸಿದ್ದಾರೆ. ಬಳ್ಳಾರಿ, ಮೋಕಾ, ಕುರುಗೋಡು, ಕಂಪ್ಲಿ, ಎಮ್ಮಿಗನೂರು, ಸಿರುಗುಪ್ಪ, ತೆಕ್ಕಲಕೋಟ, ಹಳೇಕೋಟೆ, ತೋರಣಗಲ್ಲು, ಸಂಡೂರು ಹಾಗೂ ಸುತ್ತಮುತ್ತಲಿನ ಗ್ರಾಮಗಳಿಂದ ಉತ್ತರ ಪ್ರದೇಶ ರಾಜ್ಯದ ಪ್ರಯಾಗರಾಜ್‌ನಲ್ಲಿ ನಡೆಯುತ್ತಿರುವ ಐತಿಹಾಸಿಕ ‘ಮಹಾಕುಂಭಮೇಳ’ ಹೋಗುವ ಭಕ್ತಾಧಿಗಳ ಅನುಕೂಲಕ್ಕಾಗಿ ಈ ವಿಶೇಷ ವ್ಯವಸ್ಥೆ ಮಾಡಲಾಗಿದೆ. *ಸಂಪರ್ಕಿಸಬೇಕಾದ ಅಧಿಕಾರಿಗಳ ದೂ. ಸಂಖ್ಯೆ:* ಬಳ್ಳಾರಿ-1ನೇ ಘಟಕದ ವ್ಯವಸ್ಥಾಪಕರ ಮೊ.7760992163 ಬಳ್ಳಾರಿ-2ನೇ ಘಟಕದ ವ್ಯವಸ್ಥಾಪಕರ ಮೊ.7760992164 ಸಿರುಗುಪ್ಪ ಘಟಕದ ವ್ಯವಸ್ಥಾಪಕರ ಮೊ.7760992165 ಕುರುಗೋಡು ಘಟಕ ವ್ಯವಸ್ಥಾಪಕರ ಮೊ.9606483671 ಸಂಡೂರು ಘಟಕ ವ್ಯವಸ್ಥಾಪಕರ ಮೊ.7760992309 ಈ ವಿಶೇಷ ಬಸ್ಸುಗಳನ್ನು ಸಾಂಧರ್ಬಿಕ ಒಪ್ಪಂದದ ಮೇಲೆ ಮುಂಗಡವಾಗಿ ಕಾಯ್ದಿರಿಸಿ, ಭಕ್ತಾಧಿಗಳು ಸದುಪಯೋಗಪಡಿಸಿಕೊಳ್ಳಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ